ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ಸ್ಥಗಿತಗೊಳಿಸಿದ ಆಂಪಿಯರ್

ಬೆಂಗಳೂರು ಮೂಲದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯಾದ ಆಂಪಿಯರ್ ತನ್ನ ಪ್ರಮುಖ ಇವಿ ಸ್ಕೂಟರ್ ಮಾದರಿಯಾದ ಮಾಗ್ನಸ್ 60 ಆವೃತ್ತಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿದ್ದು, ಇತ್ತೀಚೆಗೆ ಬಿಡುಗಡೆ ಮಾಡಲಾದ ಮ್ಯಾಗ್ನಸ್ ಪ್ರೋ ಮಾದರಿಯ ಮೇಲೆ ಹೆಚ್ಚು ಗಮನಹರಿಸಲು ಮುಂದಾಗಿದೆ.

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಗ್ರಾಹಕರ ಬೇಡಿಕೆಯಲ್ಲಿ ಹಿನ್ನಡೆ ಅನುಭವಿಸಿರುವ ಮ್ಯಾಗ್ನಸ್ 60 ಇವಿ ಸ್ಕೂಟರ್ ಮಾದರಿಯು ಸ್ಟಾಕ್ ಮಾತ್ರ ಮಾರಾಟಕ್ಕೆ ಲಭ್ಯವಿರಲಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗತ್ತ ಆಂಪಿಯರ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.73,990 ಗಳಾಗಿದ್ದು, ಹೊಸ ಸ್ಕೂಟರ್ ಮಾದರಿಯು ಅತ್ಯುತ್ತಮ ಫೀಚರ್ಸ್‌ಗಳನ್ನು ಹೊಂದಿದೆ.

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಹೊಸ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 60ವಿ, 30ಎಹೆಚ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ 1.2 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟರ್‌ನೊಂದಿಗೆ ಜೋಡಿಸಲ್ಪಟ್ಟಿದ್ದು, ಈ ಹೊಸ ಎಲೆಕ್ಟ್ರಿಕ್ ಸ್ಕೂಟರಿನಲ್ಲಿರುವ ಬ್ಯಾಟರಿಯನ್ನು ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ 55 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಗರಿಷ್ಠ 80ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಇನ್ನು ಲಾಕ್‌ಡೌನ್ ವಿನಾಯ್ತಿ ನಂತರ ಬಹುತೇಕ ಆಟೋ ಉತ್ಪಾದನಾ ಚಟುವಟಿಕೆ ಪುನಾರಂಭಗೊಂಡಿದ್ದು, ಆಂಪಿಯರ್ ಕೂಡಾ ಸ್ಕೂಟರ್ ಮಾರಾಟಕ್ಕೆ ಮರುಚಾಲನೆ ನೀಡುವ ಮೂಲಕ 10 ಹೊಸ ಶೋರೂಂಗಳಿಗಳಿಗೂ ಗ್ರೀನ್ ಸಿಗ್ನಲ್ ನೀಡಿದೆ.

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು 2030ಕ್ಕೆ ಶೇ.100ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ರಸ್ತೆಗಿಳಿಸುವ ಯೋಜನೆ ಹೊಂದಿದ್ದು, ಭವಿಷ್ಯದ ಗುರಿಗಾಗಿ ಈಗಿನಿಂದಲೇ ಹಲವಾರು ಕಠಿಣ ಕ್ರಮಗಳ ಮೂಲಕ ಹಂತ-ಹಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ತಗ್ಗಿಸಲಾಗುತ್ತಿದೆ. ಹೀಗಾಗಿ ಹೊಸ ಎಲೆಕ್ಟ್ರಿಕ್ ವಾಹನ ಬಿಡುಗಡೆ ಯೋಜನೆಗಳತ್ತ ಬಹುತೇಕ ಆಟೋ ಕಂಪನಿಗಳು ಭಾರೀ ಹೂಡಿಕೆ ಮಾಡುತ್ತಿದ್ದು, ಆಂಪಿಯೆರ್ ಕೂಡಾ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಫೇಮ್ 2 ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮಾಡುವ ಆಟೋ ಕಂಪನಿಗಳಿಗೆ ಮಾತ್ರವಲ್ಲದೇ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಸಬ್ಸಡಿ, ತೆರಿಗೆ ವಿನಾಯ್ತಿ, ಅತಿ ಕಡಿಮೆ ಜಿಎಸ್‌ಟಿ ಸೌಲಭ್ಯಗಳನ್ನು ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಕೇಂದ್ರ ಸರ್ಕಾರದ ಹೊಸ ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಇವಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲು ಆಂಪಿಯರ್ ಕಂಪನಿಯು ಸಿದ್ದವಾಗಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಮ್ಯಾಗ್ನಸ್ 60 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸಿದ ಆಂಪಿಯರ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಆಂಪಿಯರ್ ಕಂಪನಿಯು ಇದುವರೆಗೆ 60 ಸಾವಿರ ಇವಿ ಸ್ಕೂಟರ್ ಮಾರಾಟ ಮಾಡಿದ್ದು, 200ಕ್ಕೂ ಹೆಚ್ಚು ಪ್ರಮುಖ ನಗರಗಳಲ್ಲಿ ಮಾರಾಟ ಜಾಲವನ್ನು ಹೊಂದಿದೆ.

More from DriveSpark

Article Published On: Wednesday, June 24, 2020, 8:45 [IST]
English summary
Ampere Magnus 60 Lead-acid Discontinued. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+