ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಎಪ್ರಿಲಿಯಾ ಕಂಪನಿಯು ಆರ್‍ಎಸ್ 660 ಬೈಕನ್ನು ಶೀಘ್ರದಲ್ಲೇ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಎಪ್ರಿಲಿಯಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಬೈಕಿನ ಹೆಸರನ್ನು ಸೇರಿಸಲಾಗಿದೆ.

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ವೆಬ್‌ಸೈಟ್‌ನಲ್ಲಿ ಎಪ್ರಿಲಿಯಾ ಕಂಪನಿಯು ಆರ್‍ಎಸ್ 660 ಬೈಕಿನ ಹೆಸರನ್ನು ಸೇರಿಸಿರುವುದರಿಂದ ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಎಪ್ರಿಲಿಯಾ ಕಂಪನಿಯು ಬಹುನಿರೀಕ್ಷಿತ ಆರ್‍ಎಸ್ 660 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಪ್ರಸ್ತುತ ವಿಶ್ವಾದ್ಯಂತ ಕರೋನಾ ಸೋಂಕಿನ ಭೀತಿ ಇರುವುದರಿಂದ ಈ ಬೈಕಿನ ಬಿಡುಗಡೆಯು ವಿಳಂಭವಾಗಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದಲ್ಲಿ ಈ ಬೈಕನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಎಪ್ರಿಲಿಯಾ ಆರ್‍ಎಸ್ 660 ಬೈಕ್ ತನ್ನದೆ ಸರಣಿಯಲ್ಲಿರುವ ಆರ್‌ಎಸ್‌ಟಿ 4 ಮಾದರಿಯ ವಿನ್ಯಾಸದಿಂದ ಸ್ಪೂರ್ತಿಯನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ಆರ್‌ಎಸ್‌ಟಿ 4 ಮಾದರಿಯಲ್ಲಿರುವ ಆಗ್ರೇಸಿವ್ ಆಗಿ ಕಾಣುವ ಫೇರಿಂಗ್ ಮತ್ತು ಏರೋ ವಿಂಗ್ಲೆಟ್ಗಳನ್ನು ಒಳಗೊಂಡಿದೆ. ರೇಸ್-ಸ್ಪೆಕ್ ಶೈಲಿಯ ವಿಂಗ್ಲೆಟ್‌ಗಳು ಹೆಚ್ಚಿನ ವೇಗದಲ್ಲಿ ಉತ್ತಮ ಕಂಟ್ರೋಲ್ ಅನ್ನು ನೀಡುತ್ತದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಆರ್‍ಎಸ್ 660 ಬ್ರಾಂಡ್ ಸಿಗ್ನೇಚರ್ ಎಲ್ಇಡಿ ಹೆಡ್ ಲೈಟ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಕಾರ್ನರಿಂಗ್ ಲ್ಯಾಂಪ್ ಅನ್ನು ಹೊಂದಿರುತ್ತದೆ. ಸ್ಪೋರ್ಟಿ ಲುಕ್ ಹೊಂದಿರುವ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಆರ್ಎಸ್ 660 ಬೈಕಿನ ಹಿಂಭಾಗವು ಕೂಡ ಆರ್‌ಎಸ್‌ಟಿ 4 ಮಾದರಿಯಂತೆ ಕಾಣುತ್ತದೆ. ಒಟ್ಟಾರೆಯಾಗಿ ಹೊಸ ಎಪ್ರಿಲಿಯಾ ಆರ್ಎಸ್ 660 ಬೈಕ್ ಆಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಹೊಸ ಎಪ್ರಿಲಿಯಾ ಆರ್‍ಎಸ್ 660 ಬೈಕ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಮುಂಬರುವ ಎಪ್ರಿಲಿಯಾ ಸ್ಪೋರ್ಟ್ಸ್ ಬೈಕಿನಲ್ಲಿಯು ಇದೇ ಎಂಜಿನ್ ಅನ್ನು ಅಳವಡಿಸಲಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ವೆಸ್ಪಾ ಸ್ಕೂಟರ್‌ಗಳು

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಎಪ್ರಿಲಿಯಾ ಆರ್‍ಎಸ್ 660 ಬೈಕಿನಲ್ಲಿ ವ್ಹೀಲ್ ಕಂಟ್ರೋಲ್, ಕಾರ್ನರಿಂಗ್ ಎಬಿಎಸ್, ಕ್ರೂಸ್ ಕಂಟ್ರೋಲ್, ಐದು ವಿಭಿನ್ನ ರೈಡ್ ಮೋಡ್‌ಗಳು ಮತ್ತು ಎರಡು-ಹಂತದ ಕ್ವಿಕ್-ಶಿಫ್ಟರ್ ಒಳಗೊಂಡಿವೆ. ಈ ಬೈಕಿನಲ್ಲಿ 5 ಇಂಚಿನ ಟಿಎಫ್‌ಟಿ ಸ್ಪ್ಲಿಟ್-ಸ್ಕ್ರೀನ್ ಅನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಹೊಸ ಎಪ್ರಿಲಿಯಾ ಆರ್‍ಎಸ್ 660 ಬೈಕಿನಲ್ಲಿ 41 ಎಂಎಂ ಸಸ್ಪೆಂಷನ್, ಯುಎಸ್ಡಿ ಫೋರ್ಕ್ಸ್ ಕಯಾಬಾ ಯುನಿಟ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ ಮುಂಭಾಗದಲ್ಲಿ ಡ್ಯುಯಲ್-ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡಿಸ್ಕ್-ಬ್ರೇಕ್ ಅನ್ನು ನೀಡಲಾಗಿದೆ.

MOST READ: ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಹೀರೋ ಮೆಸ್ಟ್ರೋ ಸ್ಕೂಟರ್

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಎಪ್ರಿಯಾ ಆರ್‍ಎಸ್ 660 ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಾದರೆ ಸಿಬಿಯು ಮಾರ್ಗದ ಮೂಲಕ ಆಮದು ಮಾಡಿಕೊಳ್ಳಬಹುದು. ಎಪ್ರಿಲಿಯಾ ಆರ್‍ಎಸ್ 660 ಬೈಕ್ ಎರಡು ರೀತಿಯ ಬಣ್ಣಗಳ ಆಯ್ಕೆಯನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಎಪ್ರಿಯಾ ಆರ್‍ಎಸ್ 660 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸಬಹುದು. ಈ ಎಪ್ರಿಯಾ ಆರ್‍ಎಸ್ 660 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಬಿಆರ್ 650 ಆರ್, ಕವಾಸಕಿ ನಿಂಜಾ 650 ಮತ್ತು ಝಡ್‍ಡ್ಎಕ್ಸ್-6 ಆರ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Thursday, May 7, 2020, 21:31 [IST]
English summary
Aprilia RS 660 To Be Launched Soon: Here Are All The Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+