ಭಾರತದಲ್ಲಿ ಬಿಡುಗಡೆಯಾಗಲಿದೆ ಎಪ್ರಿಲಿಯಾ ಮ್ಯಾಕ್ಸಿ ಸ್ಕೂಟರ್‌ಗಳು
ಎಪ್ರಿಲಿಯಾ ಇತ್ತಿಚೆಗೆ ದೆಹಲಿಯಲ್ಲಿ ನಡೆದಿದ್ದ ಆಟೋ ಎಕ್ಸ್‌ಪೋದಲ್ಲಿ ಎಸ್‌ಎಕ್ಸ್‌ಆರ್ 125 ಮತ್ತು ಎಸ್‌ಎಕ್ಸ್‌ಆರ್ 160 ಎಂಬ ಎರಡು ವಿಶಿಷ್ಟ ರೀತಿಯ ಸ್ಕೂಟರ್‌ಗಳನ್ನು ಅನಾವರಣಗೊಳಿಸಿತ್ತು. ಎಪ್ರಿಲಿಯಾ ಕಂಪನಿಯು ಸೆಪ್ಟೆಂಬರ್ ತಿಂಗಳಲ್ಲಿ ಈ ಎರಡು ಹೊಸ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್‍ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ಮ್ಯಾಕ್ಸಿ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುತ್ತಿವೆ.ಈ ಸ್ಕೂಟರ್‌ಗಳು ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಹಾಗೂ ಎಸ್‌ಎಕ್ಸ್‌ಆರ್ 160 ಸ್ಕೂಟರ್‌ಗಳನ್ನು ಕ್ರಾಸ್ಒವರ್ ಸ್ಕೂಟರ್ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ಗಳಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಹಾಗೂ ಎಸ್‌ಎಕ್ಸ್‌ಆರ್ 160 ಸ್ಕೂಟರ್‍ಗಳಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.

ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍ಗಳನ್ನು ನೀಡಲಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 ಸ್ಕೂಟರಿಗೆ ಪೈಪೋಟಿ ನೀಡುತ್ತದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ 125 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 9.5 ಬಿಹೆಚ್‌ಪಿ ಪವರ್ ಮತ್ತು 9.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ 160 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. 3-ವ್ಯಾಲ್ಯೂ ಫ್ಯೂಯಲ್ ಇಂಜೆಕ್ಷನ್ ಅನ್ನು ಹೊಂದಿದೆ. ಈ ಎಂಜಿನ್ 11 ಬಿಹೆಚ್‌ಪಿ ಪವರ್ ಮತ್ತು 11.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಮತ್ತು ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ತುಸು ದುಬಾರಿಯಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.10 ಲಕ್ಷ ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಇನ್ನು ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.25 ಲಕ್ಷಗಳಾಗಿರಬಹುದು ಎಂದು ಅಂದಜಿಸಲಾಗಿದೆ. ಎಸ್‍ಎಕ್ಸ್ ಆರ್ 160 ಸ್ಕೂಟರ್ ಇಟಲಿ ಮೂಲದ ಎಪ್ರಿಲಿಯಾ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸುತ್ತಿರುವ ಮೊದಲ ಮ್ಯಾಕ್ಸಿ ಸ್ಕೂಟರ್ ಆಗಿದೆ.ಈ ಸ್ಕೋಟರ್‍ಗಳನ್ನು ಭಾರತದಲ್ಲಿ ತಯಾರಿಸಲಾಗುತ್ತದೆ.


Click it and Unblock the Notifications








