ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಎಪ್ರಿಲಿಯಾ ಕಂಪನಿಯು ತನ್ನ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದಿದ್ದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಎಪ್ರಿಲಿಯಾ ಕಂಪನಿಯು ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್‍‍ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಎಪ್ರಿಲಿಯಾ ತನ್ನ ಮ್ಯಾಕ್ಸಿ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಕಾರೋನಾ ಭೀತಿಯಿಂದ ಕೇಂದ್ರ ಸರ್ಕಾರವುದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಅಲ್ಲದೇ ದೇಶಾದ್ಯಂತ ಕರೋನಾ ಭೀತಿ ಇರುವುದರಿಂದ ಎಪ್ರಿಲಿಯಾ ಕಂಪನಿಯು ತನ್ನ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಮುಂದೂಡಲಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ವೆಸ್ಪಾ ಸ್ಕೂಟರ್‌ಗಳು

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್‌ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.

MOST READ: ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ ಹೀರೋ ಮೆಸ್ಟ್ರೋ ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍‍ಗಳನ್ನು ನೀಡಲಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ 160 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. 3-ವ್ಯಾಲ್ಯೂ ಫ್ಯೂಯಲ್ ಇಂಜೆಕ್ಷನ್ ಅನ್ನು ಹೊಂದಿದೆ. ಈ ಎಂಜಿನ್ 11 ಬಿಹೆಚ್‌ಪಿ ಪವರ್ ಮತ್ತು 11.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ತುಸು ದುಬಾರಿಯಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ. ಇನ್ನು ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.25 ಲಕ್ಷಗಳಾಗಿರಬಹುದು ಎಂದು ಅಂದಜಿಸಲಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಕಾಡಿದ ಕರೋನಾ

ಎಸ್‍ಎಕ್ಸ್ ಆರ್ 160 ಸ್ಕೂಟರ್ ಇಟಲಿ ಮೂಲದ ಎಪ್ರಿಲಿಯಾ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸುತ್ತಿರುವ ಮೊದಲ ಮ್ಯಾಕ್ಸಿ ಸ್ಕೂಟರ್ ಆಗಿದೆ. ಈ ಸ್ಕೋಟರ್ ಅನ್ನು ಭಾರತದಲ್ಲಿ ಅಭಿವೃದ್ದಿಪಡಿಸಲಾಗುತ್ತದೆ.

Most Read Articles

Kannada
English summary
Aprilia SXR 160 maxi-scooter launch in India postponed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X