ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಅರ್ಜೆಂಟೀನಾದ ಪೊಲೀಸರು ಇತ್ತೀಚೆಗೆ ಅಡ್ವೆಂಚರ್ ಟೂರರ್ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕುಗಳನ್ನು ತಮ್ಮ ಪಡೆಗೆ ಹೊಸದಾಗಿ ಸೇರಿಸಿ ಕೊಂಡಿದ್ದಾರೆ. ಅರ್ಜೆಂಟೀನಾದ ಪೊಲೀಸ್ ಪಡೆಗಾಗಿ ಈ ಅಡ್ವೆಂಚರ್ ಟೂರರ್ ಬೈಕನ್ನು ವಿಶೇಷವಾಗಿ ಮಾಡಿಫೈಗೊಳಿಸಿದ್ದಾರೆ.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಅರ್ಜೆಂಟೀನಾದ ಪೊಲೀಸ್ ಪಡೆಗೆ ನೀಡಿದ ಎಲ್ಲಾ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕುಗಳನ್ನು ವಿಶೇಷ ನೀಲಿ ಬಣ್ಣವನ್ನು ಹೊಂದಿದೆ. ಇದರೊಂದಿಗೆ ಈ ಬೈಕಿನಲ್ಲಿ ಪಿಎ ಸಿಸ್ಟಂ ಮತ್ತು ಪೊಲೀಸ್ ಕೆಂಪು ಮತ್ತು ನೀಲಿ ಬೀಕನ್‍ಗಳನ್ನು ಒಳಗೊಂಡಿದೆ. ಇನ್ನು ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕುಗಳ ಫ್ಯೂಯಲ್ ಟ್ಯಾಂಕ್ ಮೇಲ್ ಪಿಎಫ್‌ಎ ಲೋಗೋವನ್ನು ಹೊಂದಿದೆ. ಉಳಿದಂತೆ ಯಾವುದೇ ಇತರ ಬದಲಾವನೆಗಳನ್ನು ಮಾಡಲಾಗಿಲ್ಲ.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 23.9 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍‍ಗಳಿವೆ.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಹೊಂದಿದೆ. ರೇರ್ ಲಗೇಜ್ ರ್‍ಯಾಕ್‍‍ನ ಮೇಲಿರುವ ರಾಕ್ ರೆಡ್ ಅಸೆಂಟ್‍‍‍ನೊಂದಿಗಿರುವ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈ‍‍‍ಟ್‍ಗಳನ್ನು ಹೊಂದಿವೆ. ಈ ಸ್ವಿಚ್‍‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಇದರೊಂದಿಗೆ ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಇತ್ತೀಚೆಗೆ ತನ್ನ 2021ರ ಹಿಮಾಲಯನ್ ಅಡ್ವೆಂಚರ್ ಟೂರರ್ ಮಾದರಿಯನ್ನು ಅಮೆರಿಕಾದಲ್ಲಿ ಬಿಡುಗಡೆಗೊಳಿಸಿತು. ಕೆಲವು ಹೊಸ ಫೀಚರ್ಸ್ ಗಳೊಂದಿಗೆ ಈ 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕನ್ನು ಬಿಡುಗಡೆಗೊಳಿಸಲಾಗಿತ್ತು.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಇನ್ನು ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯ ಮಾರಾಟವು ಚೇತರಿಸಿಕೊಳ್ಳುತ್ತಿದೆ. ಜುಲೈ ತಿಂಗಳಿಗೆ ಹೊಲಿಸಿದರೆ ರಾಯಲ್ ಎನ್‌ಫೀಲ್ಡ್ ಕಂಪನಿಯ ಆಗಸ್ಟ್ ತಿಂಗಳ ಮಾರಾಟವು 25.43%ನಷ್ಟು ಏರಿಕೆ ಕಂಡಿದೆ. ಜುಲೈ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯ 37,925 ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿತ್ತು.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ಆಗಸ್ಟ್‌ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 50,144 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. 2019ರ ಆಗಸ್ಟ್‌ ತಿಂಗಳಿನಲ್ಲಿ 52,904 ಯುನಿಟ್‌ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ದೇಶಿಯ ಮಾರುಕಟ್ಟೆಯಲ್ಲಿನ ಮಾರಾಟವು 2%ನಷ್ಟು ಕುಸಿದಿದೆ.

ಅರ್ಜೆಂಟೀನಾದ ಪೊಲೀಸ್ ಪಡೆ ಸೇರಿದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್

ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿ‍ಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Article Published On: Monday, September 14, 2020, 18:37 [IST]
English summary
Royal Enfield Himalayan added to Argentina Police’s fleet. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+