Just In
Don't Miss!
- News
Video: ದೆಹಲಿಯಲ್ಲಿ ರೈತನ ಸಾವಿನ ಭಯಾನಕ ದೃಶ್ಯ!
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
450 ಎಲೆಕ್ಟ್ರಿಕ್ ಸ್ಕೂಟರ್ ಸ್ಥಗಿತಗೊಳಿಸುವ ಮೂಲಕ ಹೊಸ ಯೋಜನೆಗಳಿಗೆ ಚಾಲನೆ ನೀಡಿದ ಎಥರ್
ಎಥರ್ ಎನರ್ಜಿ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ತನ್ನದೆ ಜನಪ್ರಿಯತೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ತನ್ನ ಸ್ಕೂಟರ್ ಮಾದರಿಗಳಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿದೆ. ಸ್ಕೂಟರ್ ಮಾರಾಟದಲ್ಲಿನ ಬದಲಾವಣೆಗಾಗಿ ಹಳೆಯ ಮಾದರಿಗಳನ್ನು ಸ್ಥಗಿತಗೊಳಿಸಲಾಗಿದ್ದು, ಹೊಸ ಸ್ಕೂಟರ್ ಉತ್ಪನ್ನಗಳತ್ತ ಗಮನಹರಿಸುತ್ತಿದೆ.

2015ರಿಂದ ವಾಹನ ಉತ್ಪಾದನೆಯಲ್ಲಿ ತೊಡಗಿರುವ ಎಥರ್ ಕಂಪನಿಯು ಮೊದಲ ಬಾರಿಗೆ 340 ಮತ್ತು 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಪರಿಚಯಿಸಿತ್ತು. ಕಳೆದ ವರ್ಷದ ಗ್ರಾಹಕರ ಬೇಡಿಕೆಯೆಂತೆ 450 ಪ್ಲಸ್ ಬಿಡುಗಡೆಯೊಂದಿಗೆ 340 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಸ್ಥಗಿತಗೊಳಿಸಿತ್ತು. ಇದೀಗ 450ಎಕ್ಸ್ ಮಾದರಿಯನ್ನು ಪರಿಚಯಿಸುವ ಮೂಲಕ 450 ಆವೃತ್ತಿಯ ಮಾರಾಟವನ್ನು ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ.

ಎಥರ್ ಎನರ್ಜಿ ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯಂತೆ 450 ಪ್ಲಸ್ ಮತ್ತು 450ಎಕ್ಸ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಹಳೆಯ ಸ್ಕೂಟರ್‌ಗಳನ್ನು ಮಾರಾಟದಿಂದ ಸ್ಥಗಿತಗೊಳಿಸಿದ್ದರೂ ಕನೆಕ್ಟೆಡ್ ಫೀಚರ್ಸ್‌ಗಳನ್ನು ಕಾಲಕಾಲಕ್ಕೆ ಅಪ್‌ಡೇಟ್‌ಗೊಳಿಸುವ ಭರವಸೆ ನೀಡಿದೆ.

ಜೊತೆಗೆ 450 ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಸ್ಥಗಿತಗೊಳಿಸುವ ಮೂಲಕ ಮತ್ತೊಂದು ಹೊಸ ಯೋಜನೆಗೆ ಚಾಲನೆ ನೀಡಿರುವ ಎಥರ್ ಕಂಪನಿಯು ತನ್ನದೆ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಳಕೆ ಮಾಡಿದ ಆವೃತ್ತಿಗಳನ್ನು ಸಹ ಮಾರಾಟ ಆರಂಭಿಸಿರುವುದಾಗಿ ಹೇಳಿಕೊಂಡಿದ್ದು, ಎಕ್ಸ್‌ಚೆಂಜ್ ಮಾದರಿಗಳನ್ನು ಸೆಕೆಂಡ್ ಹ್ಯಾಂಡ್ ಪ್ಲ್ಯಾಟ್‌ಫಾರ್ಮ್ ಅಡಿ ಮಾರಾಟ ಮಾಡಲಿದೆ.

ಇನ್ನು ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಎಥರ್ ಎನರ್ಜಿ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆಯಲ್ಲಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

450ಎಕ್ಸ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಾಗಿದ್ದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಸ್ಟ್ಯಾಂಡರ್ಡ್ 450 ಪ್ಲಸ್ ಮಾದರಿಗಿಂತಲೂ 450ಎಕ್ಸ್ ಮಾದರಿಯು ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಎಥರ್ ಎನರ್ಜಿ ಕಂಪನಿಯು ಸಹ ಇದೇ ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 135ಕ್ಕೂ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹಾಗೆಯೇ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಹೊಂದುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಎಥರ್ ಕಂಪನಿಯು ವಿವಿಧ ನಗರಗಳಲ್ಲಿ ಆಯಕಟ್ಟಿನ ಸ್ಥಳಗಳನ್ನು ಗುರುತಿಸುತ್ತಿದೆ.