450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿರುವ ಬೆಂಗಳೂರು ಮೂಲದ ಎಥರ್ ಎನರ್ಜಿ ಕಂಪನಿಯು ಯಶಸ್ವಿಯಾಗಿ 2 ವರ್ಷ ಪೂರೈಸಿ 3ನೇ ವರ್ಷಕ್ಕೆ ಕಾಲಿಟ್ಟಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆ ಮಾಡುತ್ತಿದೆ.

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ ಎಂಟು ನಗರಗಳಲ್ಲಿ ಹೊಸ ಇವಿ ಸ್ಕೂಟರ್ ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆ ಹೊಂದಿದ್ದು, ನವೆಂಬರ್ ಆರಂಭದಲ್ಲಿ ಪುಣೆ ಮತ್ತು ಡಿಸೆಂಬರ್‌ನಲ್ಲಿ ಮುಂಬೈ ಮಾಹಾನಗರಗಳಲ್ಲಿ ಎಥರ್ ಇವಿ ಸ್ಕೂಟರ್ ಮಾರಾಟ ಆರಂಭವಾಗಲಿದೆ. ತದನಂತರ ಹಂತ-ಹಂತವಾಗಿ ಮಾರಾಟ ಮಳಿಗೆಗಳನ್ನು ಎರಡನೇ ದರ್ಜೆ ಮಾಹಾನಗರಗಳಿಗೂ ವಿಸ್ತರಣೆ ಮಾಡಲಿದ್ದು, ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳ ಆಧಾರದ ಮೇಲೆ ಇವಿ ವಾಹನ ಮಾರಾಟವನ್ನು ಹೆಚ್ಚಿಸಲಾಗುತ್ತಿದೆ.

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ ಕಂಪನಿಯು ಸಾಮಾನ್ಯ ಮಾದರಿಯಾದ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಕಳೆದ ಮಾರ್ಚ್‌ನಲ್ಲೇ ಬಿಡುಗಡೆಗೊಂಡಿದ್ದರೂ ಕರೋನಾ ವೈರಸ್ ಪರಿಣಾಮ ಸ್ಕೂಟರ್ ವಿತರಣೆಗೆ ಇದೀಗ ಚಾಲನೆ ನೀಡುತ್ತಿದ್ದು, ನವೆಂಬರ್ ಆರಂಭದಲ್ಲಿ ಬೆಂಗಳೂರು, ಚೆನ್ನೈ, ಹೈದ್ರಾಬಾದ್ ಮತ್ತು ಪುಣೆ ನಗರಗಳಲ್ಲಿ ವಿತರಣೆ ಆರಂಭಿಸಲಿದೆ.

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಕೊಚ್ಚಿನ್, ಕೋಲ್ಕತ್ತಾ ಮತ್ತು ಅಹಮದಾಬಾದ್ ನಗರಗಳಲ್ಲೂ ನವೆಂಬರ್ ಆರಂಭದಲ್ಲೇ 450 ಎಕ್ಸ್ ಸ್ಕೂಟರ್ ವಿತರಣೆ ಆರಂಭವಾಗಲಿದ್ದು, ಡಿಸೆಂಬರ್ ಆರಂಭದಲ್ಲಿ ದೆಹಲಿ, ಮುಂಬೈ ನಗರಗಳಲ್ಲಿ ಸ್ಕೂಟರ್ ವಿತರಣೆ ಆರಂಭವಾಗಲಿದೆ. ತದನಂತರ 2021ರ ಆರಂಭದಲ್ಲಿ ಕೊಯಂಬತ್ತೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇವಿ ಮಾರಾಟ ಗುರಿಯೋಜನೆ ಸಿದ್ದಪಡಿಸಲಾಗಿದೆ.

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ ಬ್ಯಾಟರಿ ಸೌಲಭ್ಯಕ್ಕಾಗಿ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಮೈಲೇಜ್ ಮತ್ತು ಪರ್ಫಾಮೆನ್ಸ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಹಿತಿ ಹಂಚಿಕೊಂಡ ಎಥರ್ ಎನರ್ಜಿ

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

More from DriveSpark

Article Published On: Monday, September 7, 2020, 18:49 [IST]
English summary
Ather 450X Delivery Timelines Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+