ಶೀಘ್ರದಲ್ಲೇ ಆರಂಭವಾಗಲಿದೆ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಬೆಂಗಳೂರು ಮೂಲದ ಇವಿ ಸ್ಕೂಟರ್ ಉತ್ಪಾದನಾ ಕಂಪನಿಯಾದ ಎಥರ್ ಎನರ್ಜಿಯು ಶೀಘ್ರದಲ್ಲೇ ತನ್ನ ಹೊಸ ಇವಿ ಸ್ಕೂಟರ್ ಮಾದರಿಯಾದ 450ಎಕ್ಸ್ ಆವೃತ್ತಿಯನ್ನು ವಿತರಣೆಯನ್ನು ಆರಂಭಿಸುವ ಸಿದ್ದತೆಯಲ್ಲಿದ್ದು, ಆಸಕ್ತ ಗ್ರಾಹಕರಿಗಾಗಿ ಈಗಾಗಲೇ ಟೆಸ್ಟ್ ರೈಡ್ ಆರಂಭಿಸಲಾಗಿದೆ.

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಕರೋನಾ ವೈರಸ್ ಪರಿಣಾಮ ಉತ್ಪಾದನೆ ಸ್ಥಗಿತಗೊಂಡಿದ್ದರಿಂದ ಹೊಸ ಎಲೆಕ್ಟಿಕ್ ಸ್ಕೂಟರ್ ವಿತರಣೆಯನ್ನು ಮುಂದೂಡಿಕೆ ಮಾಡುತ್ತ ಬಂದಿದ್ದ ಎಥರ್ ಕಂಪನಿಯು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ವಿತರಣೆಗೆ ಸಿದ್ದವಾಗಿದ್ದು, ಸ್ಕೂಟರ್ ವಿತರಣೆಗೂ ಮುನ್ನ ಆಯ್ದ ಮಾರಾಟ ಮಳಿಗೆಗಳಲ್ಲಿ ಹೊಸ ಸುರಕ್ಷಾ ಕ್ರಮಗಳೊಂದಿಗೆ ಟೆಸ್ಟ್ ರೈಡ್ ಆರಂಭಿಸಲಾಗಿದೆ. ಆರಂಭಿಕವಾಗಿ ಬೆಂಗಳೂರು ಮತ್ತು ಚೆನ್ನೈನಲ್ಲಿ ಮಾರಾಟ ಮಳಿಗೆಗಳನ್ನು ಹೊಂದಿದ್ದ ಎಥರ್ ಕಂಪನಿಯು ಇದೀಗ ಹೊಸದಾಗಿ ಹೈದರಾಬಾದ್, ಪುಣೆ, ಅಹಮದಾಬಾದ್ ಮತ್ತು ಮುಂಬೈ ನಗರಗಳಲ್ಲಿ ಸ್ಕೂಟರ್ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಎಥರ್ ಎನರ್ಜಿ ಕಂಪನಿಯು ಸ್ಕೂಟರ್ ಮಾರಾಟಕ್ಕೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 450ಎಕ್ಸ್ ಮಾದರಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

450ಎಕ್ಸ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ ಬ್ಯಾಟರಿ ಸೌಲಭ್ಯಕ್ಕಾಗಿ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಮೈಲೇಜ್ ಮತ್ತು ಪರ್ಫಾಮೆನ್ಸ್ 2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಎಥರ್ ಎನರ್ಜಿ ಕಂಪನಿಯು ಸಹ ಇದೇ ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 135ಕ್ಕೂ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾಗಿದೆ.

MOST READ: ಹೊಸ ಅವತಾರದಲ್ಲಿ ಬಿಡುಗಡೆಯಾಗಲಿದೆ ಟಿವಿಎಸ್ ಫಿಯರೊ 125 ಕಮ್ಯುಟರ್ ಬೈಕ್

ಶೀಘ್ರದಲ್ಲೇ ಆರಂಭವಾಗಲಿದೆ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಹಾಗೆಯೇ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಹೊಂದುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಎಥರ್ ಕಂಪನಿಯು ವಿವಿಧ ನಗರಗಳಲ್ಲಿ ಆಯಕಟ್ಟಿನ ಸ್ಥಳಗಳನ್ನು ಗುರುತಿಸುತ್ತಿದೆ.

More from DriveSpark

Article Published On: Wednesday, November 11, 2020, 14:43 [IST]
English summary
Ather 450X Delivery Starts Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+