Just In
- 28 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 1 hr ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 1 hr ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 2 hrs ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- News ನೇಹಾ ಹತ್ಯೆ: ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ, 90 ದಿನದಲ್ಲಿ ನ್ಯಾಯ ಸಿಗಲಿದೆ: ಸುರ್ಜೇವಾಲ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಬೆಂಗಳೂರು ಮೂಲದ ಎಥರ್ ಎನರ್ಜಿ ಸಂಸ್ಥೆಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ 450 ಆವೃತ್ತಿಯಲ್ಲಿ ವಿಶೇಷ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಿತ 450ಎಕ್ಸ್ ಮಾದರಿಯನ್ನು ಬಿಡುಗಡೆಗೊಳಿಸಿದೆ.
ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದೆ.
ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.
ಒಂದು ವೇಳೆ ಮಾಸಿಕ ಚಂದಾದಾರಿಕೆ ಯೋಜನೆ ಬೇಡವಾದಲ್ಲಿ ಹೊಸ ಸ್ಕೂಟರ್ ಬೆಲೆಯು ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ರೂ. 1.49 ಲಕ್ಷ(450 ಎಕ್ಸ್ ಪ್ಲಸ್)ಕ್ಕೆ ಮತ್ತು ರೂ. 1.59 ಲಕ್ಷ (450 ಎಕ್ಸ್ ಪ್ರೊ) ಬೆಲೆ ಪಡೆದುಕೊಂಡಿರಲಿದೆ.
ಅಂದರೆ, ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ಎರಡು ಮಾದರಿಯಲ್ಲೂ ಒಂದೇ ರೀತಿಯಾಗಿ ದರ ಅನ್ವಯವಾಗಲಿದ್ದು, ಸ್ಕೂಟರ್ ಖರೀದಿಗೆ ಸಹಕಾರಿಯಾಗುವ ಉದ್ದೇಶದೊಂದಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಪರಿಚಯಿಸಲಾಗಿದೆ. ಎಕ್ಸ್ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.
ಇದಲ್ಲದೇ 450ಎಕ್ಸ್ ಸ್ಕೂಟರ್ ಬೆಲೆಯು ಪ್ಯಾನ್ ಇಂಡಿಯಾ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಹೊಂದಿದ್ದರೆ ದೆಹಲಿಯಲ್ಲಿ ಮಾತ್ರವೇ ಹೊಸ ಸ್ಕೂಟರ್ ಬೆಲೆಯನ್ನು ಎಕ್ಸ್ಶೋರೂಂ ಪ್ರಕಾರ ರೂ. 85 ಸಾವಿರಕ್ಕೆ ನಿಗದಿಪಡಿಸಲಾಗಿದ್ದು, ದೆಹಲಿ ಸರ್ಕಾರವು ಕಳೆದ ವರ್ಷ ಘೋಷಣೆ ಮಾಡಿರುವ ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿಯಿಂದಾಗಿ ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಿದೆ.
ಇನ್ನು ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಾದ 450 ಸ್ಕೂಟರ್ಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್ಗಳ ಜೊತೆಗೆ ಹೆಚ್ಚುವರಿ ಪರ್ಫಾಮೆನ್ಸ್ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿದೆ.
ಮೈಲೇಜ್ ಮತ್ತು ಪರ್ಫಾಮೆನ್ಸ್
2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.
ಹಾಗೆಯೇ ಹೊಸ ಸ್ಕೂಟರ್ನಲ್ಲಿ ಈ ಬಾರಿ ಅಂಡ್ರಾಯಿಡ್ ತಂತ್ರಜ್ಞಾನ ಪ್ರೇರಿತ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, 212 ಕ್ವಾಡ್-ಕೋರ್ ಪ್ರೋಸೆಸರ್ ಜೊತೆ 1ಜಿಬಿ ರ್ಯಾಮ್ ಮತ್ತು 8ಜಿಬಿ ಸ್ಟೋರೇಜ್ ಸ್ಪೆಸ್ ನೀಡಲಾಗಿದೆ.
ಜೊತೆಗೆ ಹೊಸ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ.
ಇದರೊಂದಿಗೆ ಹೊಸ ಸ್ಕೂಟರ್ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.
ಈ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ಗಳಲ್ಲೇ ವಿಶೇಷ ಎನ್ನಿಸುವ 450ಎಕ್ಸ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆ ಪ್ರವೇಶಿಸಿದ್ದು, ಇದುವರೆಗೆ 1 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡಿರುವ ಎಥರ್ ಸಂಸ್ಥೆಯು ಸದ್ಯದಲ್ಲೇ ದೇಶಾಂದ್ಯಂತ ಮತ್ತಷ್ಟು ಹೊಸ ಶೋರೂಂಗಳನ್ನು ತೆರೆಯಲು ಸಜ್ಜಾಗುತ್ತಿದೆ.