ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಬೆಂಗಳೂರು ಮೂಲದ ಎಥರ್ ಎನರ್ಜಿ ಸಂಸ್ಥೆಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ 450 ಆವೃತ್ತಿಯಲ್ಲಿ ವಿಶೇಷ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಿತ 450ಎಕ್ಸ್ ಮಾದರಿಯನ್ನು ಬಿಡುಗಡೆಗೊಳಿಸಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಒಂದು ವೇಳೆ ಮಾಸಿಕ ಚಂದಾದಾರಿಕೆ ಯೋಜನೆ ಬೇಡವಾದಲ್ಲಿ ಹೊಸ ಸ್ಕೂಟರ್ ಬೆಲೆಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1.49 ಲಕ್ಷ(450 ಎಕ್ಸ್ ಪ್ಲಸ್)ಕ್ಕೆ ಮತ್ತು ರೂ. 1.59 ಲಕ್ಷ (450 ಎಕ್ಸ್ ಪ್ರೊ) ಬೆಲೆ ಪಡೆದುಕೊಂಡಿರಲಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಅಂದರೆ, ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ಎರಡು ಮಾದರಿಯಲ್ಲೂ ಒಂದೇ ರೀತಿಯಾಗಿ ದರ ಅನ್ವಯವಾಗಲಿದ್ದು, ಸ್ಕೂಟರ್ ಖರೀದಿಗೆ ಸಹಕಾರಿಯಾಗುವ ಉದ್ದೇಶದೊಂದಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಪರಿಚಯಿಸಲಾಗಿದೆ. ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇದಲ್ಲದೇ 450ಎಕ್ಸ್ ಸ್ಕೂಟರ್ ಬೆಲೆಯು ಪ್ಯಾನ್ ಇಂಡಿಯಾ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಹೊಂದಿದ್ದರೆ ದೆಹಲಿಯಲ್ಲಿ ಮಾತ್ರವೇ ಹೊಸ ಸ್ಕೂಟರ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 85 ಸಾವಿರಕ್ಕೆ ನಿಗದಿಪಡಿಸಲಾಗಿದ್ದು, ದೆಹಲಿ ಸರ್ಕಾರವು ಕಳೆದ ವರ್ಷ ಘೋಷಣೆ ಮಾಡಿರುವ ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿಯಿಂದಾಗಿ ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇನ್ನು ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಾದ 450 ಸ್ಕೂಟರ್‌ಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚುವರಿ ಪರ್ಫಾಮೆನ್ಸ್ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮೈಲೇಜ್ ಮತ್ತು ಪರ್ಫಾಮೆನ್ಸ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಈ ಬಾರಿ ಅಂಡ್ರಾಯಿಡ್ ತಂತ್ರಜ್ಞಾನ ಪ್ರೇರಿತ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, 212 ಕ್ವಾಡ್-ಕೋರ್ ಪ್ರೋಸೆಸರ್ ಜೊತೆ 1ಜಿಬಿ ರ‍್ಯಾಮ್ ಮತ್ತು 8ಜಿಬಿ ಸ್ಟೋರೇಜ್ ಸ್ಪೆಸ್ ನೀಡಲಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಜೊತೆಗೆ ಹೊಸ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್‌ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇದರೊಂದಿಗೆ ಹೊಸ ಸ್ಕೂಟರ್‌ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಈ ಮೂಲಕ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲೇ ವಿಶೇಷ ಎನ್ನಿಸುವ 450ಎಕ್ಸ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆ ಪ್ರವೇಶಿಸಿದ್ದು, ಇದುವರೆಗೆ 1 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿರುವ ಎಥರ್ ಸಂಸ್ಥೆಯು ಸದ್ಯದಲ್ಲೇ ದೇಶಾಂದ್ಯಂತ ಮತ್ತಷ್ಟು ಹೊಸ ಶೋರೂಂಗಳನ್ನು ತೆರೆಯಲು ಸಜ್ಜಾಗುತ್ತಿದೆ.

Most Read Articles

Kannada
English summary
Ather 450X e-Scooter Launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X