Just In
Don't Miss!
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- News
ಬಳ್ಳಾರಿ ಸಿಇಒ ಮಾದರಿ ಕೆಲಸ; ವಾಪಸ್ ಆಗಬೇಕಿದ್ದ ಅನುದಾನ ಬಳಕೆ
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಭಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ಕ್ಕೆ ಮೈಸೂರು, ಹುಬ್ಬಳ್ಳಿಯಲ್ಲೂ ಖರೀದಿಗೆ ಲಭ್ಯವಿರಲಿದೆ ಎಥರ್ ಇವಿ ಸ್ಕೂಟರ್
ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಆರಂಭಿಸುತ್ತಿರುವ ಎಥರ್ ಎನರ್ಜಿ ಕಂಪನಿಯು 2021ರಲ್ಲಿ 2ನೇ ಹಂತದಲ್ಲಿ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ.

ಆರಂಭದಲ್ಲಿ ಬೆಂಗಳೂರು ಮತ್ತು ಚೆನ್ನೈನಲ್ಲಿ ಮಾತ್ರವೇ ಮಾರಾಟ ಮಳಿಗೆಗಳನ್ನು ಹೊಂದಿದ್ದ ಎಥರ್ ಎನರ್ಜಿ ಕಂಪನಿಯು ಮುಂದಿನ ಮಾರ್ಚ್ ವೇಳೆಗೆ ಮುಂಬೈ, ದೆಹಲಿ, ಪುಣೆ, ಹೈದ್ರಾಬಾದ್, ಅಹಮದಾಬಾದ್, ಕೋಲ್ಕತ್ತಾ, ಕೊಚ್ಚಿ ಸೇರಿದಂತೆ ಪ್ರಮುಖ 11 ಮಾಹಾನಗರಗಳಲ್ಲಿ ಮಾರಾಟ ಸೌಲಭ್ಯವನ್ನು ಆರಂಭಿಸುತ್ತಿದ್ದು, ಎರಡನೇ ಹಂತದಲ್ಲಿ ಟೈರ್ 2 ನಗರಗಳಾದ ಮೈಸೂರು, ಹುಬ್ಬಳ್ಳಿ ಸೇರಿದಂತೆ ಹೊಸಗಾಗಿ 16 ನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ.

2021ರ ಕೊನೆಯಲ್ಲಿ ಒಟ್ಟು 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿರುವ ಎಥರ್ ಕಂಪನಿಯು 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್ ನಂತರ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆಯ ಯೋಜನೆಯಲ್ಲಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450ಎಕ್ಸ್ ಮತ್ತು 450ಎಕ್ಸ್ ಸೀರಿಸ್ 1 ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಈ ಹಿಂದಿನ 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ಸದ್ಯ ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ. ಮುಂಬರುವ ಜನವರಿ ಕೊನೆಯ ತನಕ ಮಾತ್ರ ಖರೀದಿಗೆ ಲಭ್ಯವಿರಲಿರುವ 450ಎಕ್ಸ್ ಸೀರಿಸ್ 1 ಮಾದರಿಯ ನಿಗದಿತ ಸಮಯದ ನಂತರ ಸ್ಥಗಿತವಾಗಲಿದ್ದು, ಸ್ಟ್ಯಾಂಡರ್ಡ್ 450ಎಕ್ಸ್ ಮಾರಾಟ ಮಾತ್ರ ಮುಂದುವರಿಯಲಿದೆ.

450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಸ್ಟ್ಯಾಂಡರ್ಡ್ 450 ಪ್ಲಸ್ ಮಾದರಿಗಿಂತಲೂ 450ಎಕ್ಸ್ ಮಾದರಿಯು ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇನ್ನು ಇವಿ ಸ್ಕೂಟರ್ ಮಾರಾಟ ಮಾರಾಟಕ್ಕೆ ಪೂರಕವಾಗಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುವ ಯೋಜನೆ ಹೊಂದಿರುವ ಎಥರ್ ಕಂಪನಿಯು ವಿವಿಧ ನಗರಗಳಲ್ಲಿ ಆಯಕಟ್ಟಿನ ಸ್ಥಳಗಳನ್ನು ಗುರುತಿಸುತ್ತಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಸ್ಕೂಟರ್‌ಗಳನ್ನು ಮಾತ್ರ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಚಾರ್ಜಿಂಗ್ ಮಾಡಬಹುದಾಗಿದೆ.