ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಎಥರ್

ಎಥರ್ ಎನರ್ಜಿಯು ಶೀಘ್ರದಲ್ಲೇ ತನ್ನ ಹೊಸ ಇವಿ ಸ್ಕೂಟರ್ ಮಾದರಿಯಾದ 450ಎಕ್ಸ್ ಸೀರಿಸ್ ಆವೃತ್ತಿಯನ್ನು ವಿತರಣೆಯನ್ನು ಆರಂಭಿಸುವ ಸಿದ್ದತೆಯಲ್ಲಿದ್ದು, ಆಸಕ್ತ ಗ್ರಾಹಕರಿಗಾಗಿ ಈಗಾಗಲೇ ಟೆಸ್ಟ್ ರೈಡ್ ಆರಂಭಿಸಲಾಗಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಕರೋನಾ ವೈರಸ್ ಪರಿಣಾಮ ಉತ್ಪಾದನೆ ಸ್ಥಗಿತಗೊಂಡಿದ್ದರಿಂದ ಹೊಸ ಎಲೆಕ್ಟಿಕ್ ಸ್ಕೂಟರ್ ವಿತರಣೆಯನ್ನು ಮುಂದೂಡಿಕೆ ಮಾಡುತ್ತ ಬಂದಿದ್ದ ಎಥರ್ ಕಂಪನಿಯು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ವಿತರಣೆಗೆ ಚಾಲನೆ ನೀಡುತ್ತಿದ್ದು, ಹೊಸ ಸ್ಕೂಟರ್ ವಿತರಣೆಗೂ ಮುನ್ನ ಆಯ್ದ ಮಾರಾಟ ಮಳಿಗೆಗಳಲ್ಲಿ ಹೊಸ ಸುರಕ್ಷಾ ಕ್ರಮಗಳೊಂದಿಗೆ ಟೆಸ್ಟ್ ರೈಡ್ ಆರಂಭಿಸಲಾಗಿದೆ. ಆರಂಭಿಕವಾಗಿ ಬೆಂಗಳೂರು ಮತ್ತು ಚೆನ್ನೈನಲ್ಲಿ ಸ್ಕೂಟರ್ ವಿತರಣೆಯನ್ನು ಆರಂಭಿಸಿರುವ ಎಥರ್ ಕಂಪನಿಯು ಇದೀಗ ಹೊಸದಾಗಿ ಹೈದರಾಬಾದ್, ಪುಣೆ, ಅಹಮದಾಬಾದ್ ನಗರಗಳಲ್ಲಿ ಹೊಸ ಸ್ಕೂಟರ್ ವಿತರಣೆಗೆ ನೀಡುವುದಾಗಿ ಅಧಿಕೃತವಾಗಿ ಹೇಳಿಕೆ ನೀಡಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಎಥರ್ ಎನರ್ಜಿ ಕಂಪನಿಯು ಸ್ಕೂಟರ್ ಮಾರಾಟಕ್ಕೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 450ಎಕ್ಸ್ ಮಾದರಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

450ಎಕ್ಸ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

450ಎಕ್ಸ್ ಸ್ಪೆಷಲ್ ಎಡಿಷನ್ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಎಥರ್ ಕಂಪನಿಯು ಸ್ಟ್ಯಾಂಡರ್ಡ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ವಿತರಣೆಯನ್ನು ಕೂಡಾ ಶೀಘ್ರದಲ್ಲೇ ಆರಂಭಿಸಲಿದ್ದು, ಈಗಾಗಲೇ ಪ್ರಮುಖ ಡೀಲರ್ಸ್‌ಗಳಲ್ಲಿ ಹೊಸ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ಟೆಸ್ಟ್ ರೈಡ್ ಆರಂಭಿಸಲಾಗಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ 450 ಪ್ಲಸ್ ಮಾದರಿಗಿಂತಲೂ 450ಎಕ್ಸ್ ಮಾದರಿಯು ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಎಥರ್ ಎನರ್ಜಿ ಕಂಪನಿಯು ಸಹ ಇದೇ ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 135ಕ್ಕೂ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾಗಿದೆ.

ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಮಾರಾಟ ಆರಂಭಿಸಲಿದೆ ಎಥರ್ ಎನರ್ಜಿ

ಹಾಗೆಯೇ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಹೊಂದುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಎಥರ್ ಕಂಪನಿಯು ವಿವಿಧ ನಗರಗಳಲ್ಲಿ ಆಯಕಟ್ಟಿನ ಸ್ಥಳಗಳನ್ನು ಗುರುತಿಸುತ್ತಿದೆ.

More from DriveSpark

Article Published On: Friday, December 4, 2020, 19:11 [IST]
English summary
Ather 450X Series1 Deliveries To Start Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+