ಕರೋನಾ ಎಫೆಕ್ಟ್: ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಬೆಂಗಳೂರು ಮೂಲದ ಎಥರ್ ಎನರ್ಜಿ ಕಂಪನಿಯು ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಬೈಕ್ ಮಾದರಿಯ ಬಿಡುಗಡೆ ಯೋಜನೆಯನ್ನು ತಾತ್ಕಾಲಿವಾಗಿ ಮುಂದೂಡಿಕೆ ಮಾಡಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ಸ್ಕೂಟರ್ ಮಾದರಿಗಳ ಮಾರಾಟ ಮೇಲೆ ಹೆಚ್ಚು ಗಮನಹರಿಸಲು ನಿರ್ಧರಿಸಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಪ್ರೀಮಿಯಂ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಕಂಪನಿಯು ಕರೋನಾ ವೈರಸ್ ಪರಿಣಾಮ ತುಸು ಹಿನ್ನಡೆ ಅನುಭವಿಸಿದ್ದು, ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊರತುಪಡಿಸಿ ಹೊಸ ವಾಹನಗಳನ್ನು ಬಿಡುಗಡೆ ಮಾಡದಿರಲು ನಿರ್ಧರಿಸಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿ ಮಾತ್ರವೇ ಮಾರಾಟ ಸೌಲಭ್ಯ ಹೊಂದಿರುವ ಎಥರ್ ಕಂಪನಿಯು ಇದೀಗ ದೇಶದ ಪ್ರಮುಖ 8 ನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳನ್ನು ತೆರೆಯುತ್ತಿದ್ದು, ಸದ್ಯಕ್ಕೆ ಇವಿ ಸ್ಕೂಟರ್ ಮಾರಾಟ ಮೇಲೆ ಹೆಚ್ಚು ಒತ್ತು ನೀಡಲು ಮುಂದಾಗಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಆಕರ್ಷಕ ವಿನ್ಯಾಸ ಮತ್ತು ಆಧುನಿಕ ತಾಂತ್ರಿಕ ವೈಶಿಷ್ಟ್ಯಗಳೊಂದಿಗೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಕಳೆದ ವರ್ಷ ಅನಾವರಣಗೊಳಿಸಿದ್ದ ಎಲೆಕ್ಟ್ರಿಕ್ ಬೈಕ್ ಮಾದರಿಯು ಹೊಸ ನೀರಿಕ್ಷೆ ಹುಟ್ಟುಹಾಕಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಆದರೆ ಪರಿಸ್ಥಿತಿಗೆ ಅನುಗುಣವಾಗಿ ಸದ್ಯಕ್ಕೆ ಇವಿ ಸ್ಕೂಟರ್‌ಗಳ ಮೇಲೆ ಹೆಚ್ಚು ಗಮನಹರಿಸುತ್ತಿರುವುದಾಗಿ ಮನಿ ಕಂಟ್ರೊಲ್ ಸುದ್ದಿಸಂಸ್ಥೆಯೊಂದಿಗೆ ಮಾಹಿತಿ ಹಂಚಿಕೊಂಡಿರುವ ಎಥರ್ ಕಂಪನಿಯ ಸಿಇಒ ತರುಣ್ ಮೆಹ್ತಾ ಅವರು ಬಹುನೀರಿಕ್ಷಿತ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಮುಂಬರುವ 2021ರ ಮಧ್ಯಂತರದಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದ್ದಾರೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಹೀಗಾಗಿ ಮಾರುಕಟ್ಟೆಯಲ್ಲಿ ಖರೀದಿ ಲಭ್ಯವಿರುವ ಇವಿ ಸ್ಕೂಟರ್ ಮಾದರಿಗಳ ಮಾರಾಟ ಜಾಲ ವಿಸ್ತರಣೆ ಮತ್ತು ಗ್ರಾಹಕರ ಬೇಡಿಕೆ ಅಪ್‌ಗ್ರೆಡ್‌ಗೊಳಿಸುವತ್ತ ಗಮನಹರಿಸಿದ್ದು, ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಇನ್ನಷ್ಟು ಹೊಸತನದೊಂದಿಗೆ ಅಭಿವೃದ್ದಿಗೊಳಿಸುವುತ್ತಿರುವುದಾಗಿ ಸುಳಿವು ನೀಡಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಸದ್ಯ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ಸ್ಟೆಷನ್‌ಗಳನ್ನು ಹೆಚ್ಚಿಸುವತ್ತ ಗಮನಹರಿಸಿರುವ ಎಥರ್ ಕಂಪನಿಯು ಇದೇ ವರ್ಷಾಂತ್ಯಕ್ಕೆ 100 ಹೊಸ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ಸಿದ್ದವಾಗಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದ್ದು, ಎಥರ್ ಸೇರಿದಂತೆ ಹಲವಾರು ಆಟೋ ಕಂಪನಿಗಳು ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗಾಗಿ ಹೆಚ್ಚು ಹೂಡಿಕೆ ಮಾಡುತ್ತಿವೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಎಥರ್ ಕಂಪನಿಯು ಸದ್ಯ ಸಾಮಾನ್ಯ ಮಾದರಿಯಾದ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಯೋಜನೆ ಮುಂದೂಡಿದ ಎಥರ್

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ ಬ್ಯಾಟರಿ ಸೌಲಭ್ಯಕ್ಕಾಗಿ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

Photo Credit: Sreejith Krishnan Kunjappan

More from DriveSpark

Article Published On: Tuesday, September 15, 2020, 21:41 [IST]
English summary
Ather Energy has revealed electric bike project on hold. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+