Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಂಗಳೂರಿನಿಂದ ಹೊಸೂರಿಗೆ ಉತ್ಪಾದನಾ ಘಟಕ ಸ್ಥಳಾಂತರಿಸಿದ ಎಥರ್ ಎನರ್ಜಿ
ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಸ್ಕೂಟರ್ ಉತ್ಪಾದನೆಯನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಯ ಭಾಗವಾಗಿ ಕಂಪನಿಯು ಬೆಂಗಳೂರಿನಲ್ಲಿದ್ದ ಸ್ಕೂಟರ್ ಉತ್ಪಾದನಾ ಘಟಕವನ್ನು ತಮಿಳುನಾಡಿನ ಹೊಸೂರಿಗೆ ಸ್ಥಳಾಂತರಿಸಿದೆ.

2015ರಲ್ಲಿ ಇವಿ ಸ್ಕೂಟರ್ ಉತ್ಪಾದನಾ ಆರಂಭದ ಹಂತದಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಉತ್ಪಾದನಾ ಘಟಕ ತೆರಿದಿದ್ದ ಎಥರ್ ಕಂಪನಿಯು ಇದೀಗ ತಮಿಳುನಾಡಿನ ಹೊಸೂರಿನಲ್ಲಿ ವಿಸ್ತರಿತ ಉತ್ಪಾದನಾ ಘಟಕ ತೆರೆದಿದ್ದು, ಹೊಸ ಉತ್ಪಾದನಾ ಘಟಕದ ಮೂಲಕ ಗ್ರಾಹಕರ ಬೇಡಿಕೆಯನ್ನು ಅತಿ ಕಡಿಮೆ ಅವಧಿಯಲ್ಲಿ ಪೂರೈಸುವ ಗುರಿಹೊಂದಿದೆ. ಹಳೆಯ ಉತ್ಪಾದನಾ ಘಟಕದಲ್ಲಿ ದಿನಕ್ಕೆ ಗರಿಷ್ಠ 7 ಸ್ಕೂಟರ್ ಉತ್ಪಾದನೆ ಮಾಡುತ್ತಿದ್ದ ಎಥರ್ ಕಂಪನಿಯು ಇದೀಗ ಹೊಸ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1 ಲಕ್ಷ ಸ್ಕೂಟರ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 2,500 ಯುನಿಟ್ ಮಾತ್ರ ಸಿದ್ದಪಡಿಸುತ್ತಿದ್ದ ಎಥರ್ ಕಂಪನಿಯು ಗ್ರಾಹಕರ ಬೇಡಿಕೆಗಳನ್ನು ನಿಗದಿತ ಅವಧಿಯಲ್ಲಿ ಪೂರೈಕೆ ಮಾಡುವಲ್ಲಿ ಹಿನ್ನಡೆ ಅನುಭವಿಸುವ ಮೂಲಕ ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇದೀಗ ಹೊಸೂರಿನಲ್ಲಿ ನಿರ್ಮಾಣವಾಗಿರುವ ಹೊಸ ಉತ್ಪಾದನಾ ಘಟಕವು 4 ಲಕ್ಷ ಚದುರ ಅಡಿಯಲ್ಲಿ ನಿರ್ಮಾಣಗೊಂಡದ್ದು, ವೈಟ್‌ಫೀಲ್ಡ್‌ನಲ್ಲಿರುವ ಸ್ಕೂಟರ್ ಉತ್ಪಾದನಾ ಘಟಕದಲ್ಲಿನ ಕಾರ್ಯಾಚರಣೆನ್ನು ಅಧಿಕೃತವಾಗಿ ಬಂದ್ ಮಾಡಿ ಹೊಸ ಘಟಕದಲ್ಲಿ ಉತ್ಪಾದನೆಯನ್ನು ಆರಂಭಿಸಲಾಗಿದೆ.

ಈ ಕುರಿತಂತೆ ಎಥರ್ ಎನರ್ಜಿ ಕಂಪನಿಯೇ ಅಧಿಕೃತ ಮಾಹಿತಿ ನೀಡಿದ್ದು, ವೈಟ್‌ಫೀಲ್ಡ್‌ನಲ್ಲಿರುವ ಸ್ಕೂಟರ್ ಉತ್ಪಾದನಾ ಘಟಕದ ಕುರಿತು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಭವಿಷ್ಯದ ಯೋಜನೆಗಾಗಿ ಹೊಸೂರಿನಲ್ಲಿರುವ ಹೊಸ ಘಟಕದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ಎಥರ್ ಎಂಡಿ ತರುಣ್ ಮೆಹ್ತಾ ಟ್ವಿಟ್ ಮಾಡಿದ್ದಾರೆ. ಇನ್ನು ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಆರಂಭಿಸುತ್ತಿರುವ ಎಥರ್ ಎನರ್ಜಿ ಕಂಪನಿಯು 2021ರಲ್ಲಿ 2ನೇ ಹಂತದಲ್ಲಿ ಹೊಸದಾಗಿ 16 ನಗರಗಳಲ್ಲಿ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ.

2021ರ ಕೊನೆಯಲ್ಲಿ ಒಟ್ಟು 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿರುವ ಎಥರ್ ಕಂಪನಿಯು 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್ ನಂತರ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆಯ ಯೋಜನೆಯಲ್ಲಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450ಎಕ್ಸ್ ಮತ್ತು 450ಎಕ್ಸ್ ಸೀರಿಸ್ 1 ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಈ ಹಿಂದಿನ 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸದ್ಯ ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ. ಮುಂಬರುವ ಜನವರಿ ಕೊನೆಯ ತನಕ ಮಾತ್ರ ಖರೀದಿಗೆ ಲಭ್ಯವಿರಲಿರುವ 450ಎಕ್ಸ್ ಸೀರಿಸ್ 1 ಮಾದರಿಯ ನಿಗದಿತ ಸಮಯದ ನಂತರ ಸ್ಥಗಿತವಾಗಲಿದ್ದು, ಸ್ಟ್ಯಾಂಡರ್ಡ್ 450ಎಕ್ಸ್ ಮಾರಾಟ ಮಾತ್ರ ಮುಂದುವರಿಯಲಿದೆ.

450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.