2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಬೆಂಗಳೂರು ಮೂಲದ ಎಥರ್ ಎನರ್ಜಿ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಸೌಲಭ್ಯವನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆ ಮಾಡುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, 2021ರ ಅಂತ್ಯಕ್ಕೆ ಒಟ್ಟು 11 ನಗರಗಳಲ್ಲಿ ಮಾರಾಟ ಸೌಲಭ್ಯವನ್ನು ಹೊಂದುವುದಾಗಿ ವಿಶ್ವಾಸ ವ್ಯಕ್ತಪಡಿಸಿದೆ.

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಸದ್ಯ ಬೆಂಗಳೂರು ಮತ್ತು ಚೆನ್ನೈ ಮಾಹಾನಗರಗಳಲ್ಲಿ ಮಾತ್ರವೇ ಮಾರಾಟ ಸೌಲಭ್ಯವನ್ನು ಹೊಂದಿದ್ದು, ನವೆಂಬರ್ ಆರಂಭದಲ್ಲಿ ಮುಂಬೈ ಮತ್ತು ಹೈದ್ರಾಬಾದ್ ನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ. ತದನಂತರ ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ದೆಹಲಿ ಎನ್‌ಸಿಆರ್, ಪುಣೆ, ಅಹಮದಾಬಾದ್, ಕೊಯಂಬತ್ತೂರು, ಕೊಚ್ಚಿನ್, ಕೋಲ್ಕತ್ತಾ ಮತ್ತು ಕೊಳಿಕೋಡ್‌ನಲ್ಲಿ ಮಾರಾಟ ಸೌಲಭ್ಯವನ್ನು ತೆರೆಯಲು ಯೋಜನೆ ರೂಪಿಸಿದೆ.

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದೆ.

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಎಥರ್ ಎನರ್ಜಿ ಕಂಪನಿಯು ಸಹ ಇದೇ ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 100 ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾಗಿದೆ.

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಎಲೆಕ್ಟ್ರಿಕ್ ವಾಹನಗಳ ಜೊತೆ ನೀಡಲಾಗುವ ಹೋಂ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಹೊರತುಪಡಿಸಿ ಸಾರ್ವಜನಿಕವಾಗಿ ಪೆಟ್ರೋಲ್ ಬಂಕ್ ಮಾದರಿಯಲ್ಲಿ ಚಾರ್ಜಿಂಗ್ ನಿಲ್ದಾಣಗಳ ತೆರೆಯಲಾಗುತ್ತಿದ್ದು, ಎಥರ್ ಕಂಪನಿಯು ಕೂಡಾ ದೇಶದ ಪ್ರಮುಖ ನಗರಗಳಲ್ಲಿ ತನ್ನ ಇವಿ ಸ್ಕೂಟರ್‌ಗಳ ಮಾರಾಟಕ್ಕೆ ಪೂರಕವಾಗಿ ಒಟ್ಟು 100 ಹೊಸ ಪಬ್ಲಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಸಿದ್ದತೆ ನಡೆಸಿದೆ.

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಬೆಂಗಳೂರು ಮತ್ತು ಚೆನ್ನೈ ನಗರದ ಪ್ರಮುಖ ಕಡೆಗಳಲ್ಲಿ ಈಗಾಗಲೇ 150 ಕಡೆಗಳಲ್ಲಿ ಸಿಂಗಲ್ ಚಾರ್ಜಿಂಗ್ ಪಾಯಿಂಟ್ ಹೊಂದಿರುವ ಪಬ್ಲಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ಸ್ಥಾಪನೆ ಮಾಡಲಾಗಿದ್ದು, ಇದೀಗ ಸ್ಥಳ ಲಭ್ಯತೆ ಆಧಾರದ ಮೇಲೆ ಹೆಚ್ಚುವರಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಜೋಡಣೆ ಮಾಡಲಾಗುತ್ತಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ ಕಂಪನಿಯು ಸಾಮಾನ್ಯ ಮಾದರಿಯಾದ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

2021ರ ಮಾರ್ಚ್ ಅಂತ್ಯಕ್ಕೆ 11 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯಲಿದೆ ಎಥರ್

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ ಬ್ಯಾಟರಿ ಸೌಲಭ್ಯಕ್ಕಾಗಿ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

More from DriveSpark

Article Published On: Saturday, September 19, 2020, 13:00 [IST]
English summary
Ather Energy has announced that it's 450X electric scooter will now launch in Kozhikode as part of its phase 1 expansion.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+