Just In
Don't Miss!
- News
ಫುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್, 13 ಮಂದಿ ಬಲಿ
- Movies
ಶಿವಣ್ಣನಿಗೆ ಕೃಷ್ಣ-ಮಿಲನಾ ಜೋಡಿಯ ಮದುವೆ ಆಮಂತ್ರಣ- ಡಿ ಬಾಸ್ ಗೆ ಯಾವಾಗ ಕೊಡ್ತೀರಾ ಎನ್ನುತ್ತಿದ್ದಾರೆ ಅಭಿಮಾನಿಗಳು
- Sports
ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಬ್ರಿಸ್ಬೇನ್, ಅಂತಿಮ ದಿನದಾಟ Live ಸ್ಕೋರ್
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚಳಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಎಥರ್
ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಬೆಂಗಳೂರಿನ ಎಥರ್ ಎನರ್ಜಿ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚಳಕ್ಕಾಗಿ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದು, ಕ್ರೆಡರ್ ಕಂಪನಿ ಜೊತೆಗೂಡಿ ಎಕ್ಸ್ಚೆಂಜ್ ಆಫರ್ ನೀಡುತ್ತಿದೆ.

ಕ್ರೆಡರ್ ಕಂಪನಿಯು ಸೆಕೆಂಡ್ ಹ್ಯಾಂಡ್ ಬೈಕ್ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ವಿವಿಧ ರಾಜ್ಯಗಳಲ್ಲಿ ಮಾರಾಟ ಮಳಿಗೆಗಳನ್ನು ಹೊಂದಿದೆ. ಇದೀಗ ಎಥರ್ ಜೊತೆಗೂಡಿ ಹೊಸ ಯೋಜನೆಗೆ ಚಾಲನೆ ನೀಡಿರುವ ಕ್ರೆಡರ್ ಕಂಪನಿಯು ಸಾಮಾನ್ಯ ಬೈಕ್ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ಸ್ಕೂಟರ್ಗಳ ಎಕ್ಸ್ಚೆಂಜ್ ಆಫರ್ ನೀಡುತ್ತಿದ್ದು, ಆಸಕ್ತ ಗ್ರಾಹಕರು ತಮ್ಮ ಸಾಮಾನ್ಯ ಬೈಕ್ಗಳನ್ನು ಎಥರ್ ಎಲೆಕ್ಟ್ರಿಕ್ ಸ್ಕೂಟರ್ನೊಂದಿಗೆ ಬದಲಾಯಿಸಿಕೊಳ್ಳಲು ಸುವರ್ಣಾವಕಾಶವಾಗಿದೆ.

ಕ್ರೆಡರ್ ಕಂಪನಿಯು ಸಾಮಾನ್ಯ ಬೈಕ್ಗಳನ್ನು ಆಕರ್ಷಕ ಬೆಲೆಗಳೊಂದಿಗೆ ಖರೀದಿ ಮಾಡಲಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಸುಲಭ ಎಕ್ಸ್ಚೆಂಜ್ ಆಫರ್ ನೀಡಲಿದೆ. ಜೊತೆಗೆ ಕರೋನಾ ವೈರಸ್ ಹಿನ್ನಲೆಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಹೊಸ ಸೇವೆಗಳನ್ನು ಒದಗಿಸಲಿದೆ.

ಹೀಗಾಗಿ ನಿಮ್ಮ ಬಳಿಯಿರುವ ಸಾಮಾನ್ಯ ಬೈಕ್ ಮಾದರಿಗಳನ್ನು ಉತ್ತಮ ಬೆಲೆ ಮಾರಾಟ ಮಾಡುವ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ಗೆ ಬದಲಾಯಿಸಿಕೊಳ್ಳಬಹುದಾಗಿದ್ದು, ಜೊತೆಗೆ ಕ್ರೆಡರ್ ಮೂಲಕ ಬರುವ ಗ್ರಾಹಕರಿಗೆ ಎಥರ್ ಕಂಪನಿಯು ವಿಶೇಷ ಆಫರ್ಗಳನ್ನು ಸಹ ನೀಡುತ್ತಿದೆ.

ಇನ್ನು ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಸಾಮಾನ್ಯ ಮಾದರಿಯಾಗಿ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

ಎಕ್ಸ್ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಾದ 450 ಸ್ಕೂಟರ್ಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್ಗಳ ಜೊತೆಗೆ ಹೆಚ್ಚುವರಿ ಪರ್ಫಾಮೆನ್ಸ್ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಮೈಲೇಜ್ ಮತ್ತು ಪರ್ಫಾಮೆನ್ಸ್
2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.
MOST READ: ಬಜಾಜ್ ಅವೆಂಜರ್ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಜೊತೆಗೆ ಹೊಸ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ. ಇದರೊಂದಿಗೆ ಹೊಸ ಸ್ಕೂಟರ್ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.