ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿರುವ ಬೆಂಗಳೂರು ಮೂಲದ ಎಥರ್ ಎನರ್ಜಿ ಸಂಸ್ಥೆಯು ಮಾರಾಟ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ಬೆಂಗಳೂರು ಮತ್ತು ಚೆನ್ನೈ ನಂತರ ಇದೀಗ ದೇಶದ ಪ್ರಮುಖ ನಾಲ್ಕು ನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳನ್ನು ತೆರೆಯುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಮೊದಲ ಬಾರಿಗೆ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದ ವೇಳೆ ಬೆಂಗಳೂರಿನಲ್ಲಿ ಮಾತ್ರವೇ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿದ್ದ ಎಥರ್ ಎನರ್ಜಿ ಸಂಸ್ಥೆಯು ಕಳೆದ ವರ್ಷ ಚೆನ್ನೈನಲ್ಲೂ ಇ-ಸ್ಕೂಟರ್ ಮಾರಾಟವನ್ನು ಆಂಭಿಸಿತ್ತು. ಇದೀಗ ಗ್ರಾಹಕರ ಬೇಡಿಕೆ ಮೇರೆಗೆ ಅಹಮದಾಬಾದ್, ಕೊಯಿಮತ್ತೂರು, ಕೊಚ್ಚಿನ್ ಮತ್ತು ಕೊಲ್ಕತ್ತಾದಲ್ಲಿ ಮೂರನೇ ಹಂತದ ಉದ್ಯಮ ವಿಸ್ತರಣೆ ಮಾಡುತ್ತಿದ್ದು, ಶೀಘ್ರದಲ್ಲೇ ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಇನ್ನು ಎಥರ್ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಲಾಗಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳ ಅಭಿವೃದ್ದಿ ಯೋಜನೆ ರೂಪಿಸುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು. ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಾದ 450 ಸ್ಕೂಟರ್‌ಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚುವರಿ ಪರ್ಫಾಮೆನ್ಸ್ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಮೈಲೇಜ್ ಮತ್ತು ಪರ್ಫಾಮೆನ್ಸ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಈ ಬಾರಿ ಅಂಡ್ರಾಯಿಡ್ ತಂತ್ರಜ್ಞಾನ ಪ್ರೇರಿತ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, 212 ಕ್ವಾಡ್-ಕೋರ್ ಪ್ರೋಸೆಸರ್ ಜೊತೆ 1ಜಿಬಿ ರ‍್ಯಾಮ್ ಮತ್ತು 8ಜಿಬಿ ಸ್ಟೋರೇಜ್ ಸ್ಪೆಸ್ ನೀಡಲಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಜೊತೆಗೆ ಹೊಸ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್‌ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ. ಇದರೊಂದಿಗೆ ಹೊಸ ಸ್ಕೂಟರ್‌ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ- ಮಾರಾಟ ವ್ಯಾಪ್ತಿಯನ್ನು ವಿಸ್ತರಿಸಿದ ಎಥರ್

ಈ ಮೂಲಕ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲೇ ವಿಶೇಷ ಎನ್ನಿಸುವ 450ಎಕ್ಸ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆ ಪ್ರವೇಶಿಸಿದ್ದು, ಇದುವರೆಗೆ 1 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿರುವ ಎಥರ್ ಸಂಸ್ಥೆಯು ಸದ್ಯದಲ್ಲೇ ದೇಶಾಂದ್ಯಂತ ಮತ್ತಷ್ಟು ಹೊಸ ಶೋರೂಂಗಳನ್ನು ತೆರೆಯಲು ಸಜ್ಜಾಗುತ್ತಿದೆ.

Most Read Articles

Kannada
English summary
Ather Energy Expands Into Four New Cities In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X