ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿರುವ ಬೆಂಗಳೂರು ಮೂಲದ ಅಥೆರ್ ಎನರ್ಜಿ ಸಂಸ್ಥೆಯು ಮಾರಾಟ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ಶೀಘ್ರದಲ್ಲೇ ಹೈದ್ರಾಬಾದ್ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟ ಆರಂಭಕ್ಕೆ ಯೋಜನೆ ರೂಪಿಸಿದೆ.

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಮೊದಲ ಬಾರಿಗೆ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದ ವೇಳೆ ಬೆಂಗಳೂರಿನಲ್ಲಿ ಮಾತ್ರವೇ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿದ್ದ ಅಥೆರ್ ಎನರ್ಜಿ ಸಂಸ್ಥೆಯು ಕಳೆದ ವರ್ಷ ಚೆನ್ನೈನಲ್ಲಿ ಮೊದಲ ಬಾರಿಗೆ ಇ-ಸ್ಕೂಟರ್ ಮಾರಾಟ ಪ್ರಕ್ರಿಯೆಯನ್ನು ಆಂಭಿಸಿತ್ತು. ಇದೀಗ ಗ್ರಾಹಕರ ಬೇಡಿಕೆ ಮೇರೆಗೆ ಹೈದ್ರಾಬಾದ್‌ನಲ್ಲಿ ಮೂರನೇ ಹಂತದ ಉದ್ಯಮ ವಿಸ್ತರಣೆಗೆ ಮುಂದಾಗಿದ್ದು, ಮುಂದಿನ ಎರಡು ವರ್ಷದೊಳಗಾಗಿ ಮುಂಬೈ, ದೆಹಲಿ, ಪುಣೆ ಮತ್ತು ನಾಪ್ಪುರ ಮತ್ತು ಅಹಮದಾಬಾದ್‌ನಲ್ಲೂ ಮಾರಾಟ ಪ್ರಕ್ರಿಯೆಯನ್ನು ಹೊಂದಲಿದೆ.

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಇನ್ನು ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಈ ಹಿನ್ನೆಲೆ ಬಹುತೇರಕ ಆಟೋ ಉತ್ಪಾದನಾ ಸಂಸ್ಥೆಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನುಅಭಿವೃದ್ದಿಗೊಳಿಸಿ ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿವೆ.

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಇದಕ್ಕಾಗಿ ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಕಾರ್ಯವು ಜೋರಾಗಿದ್ದು, ಅಥೆರ್ ಎನರ್ಜಿ ಕೂಡಾ ಈ ನಿಟ್ಟಿನಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ. ಅಥೆರ್ ಸಂಸ್ಥೆಗೆ ತನ್ನ ಮಾರಾಟ ಜಾಲವನ್ನು ದೇಶದ ವಿವಿಧ ನಗರಗಳಿಗೆ ವಿಸ್ತರಿಸಲು ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆ ಅಡಿಯಾಗುತ್ತಿದ್ದು, ಇದರಿಂದ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಬೃಹತ್ ಯೋಜನೆ ರೂಪಿಸಿದೆ.

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಅಥೆರ್ ಸಂಸ್ಥೆಯು ವರ್ಷಾಂತ್ಯಕ್ಕೆ 200 ಚಾರ್ಜಿಂಗ್ ಸ್ಪೆಷನ್‌ಗಳನ್ನು ದೇಶದ ವಿವಿಧಡೆ ತೆರೆಯಲು ನಿರ್ಧರಿಸಿದ್ದು, ಹಾಗೆಯೇ 2022ರ ವೇಳೆಗೆ ಬರೋಬ್ಬರಿ 6,500 ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಗುರಿ ಹೊಂದಿದೆ. ಇದಕ್ಕಾಗಿ ರೂ.130 ಕೋಟಿ ಮೀಸಲಿಟ್ಟಿರುವ ಅಥೆರ್ ಎನರ್ಜಿ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭಾರೀ ಪ್ರಮಾಣದ ಸಬ್ಸಡಿ ಪಡೆದುಕೊಳ್ಳಲಿದೆ.

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಈ ಮೂಲಕ ದೇಶದ ಪ್ರಮುಖ ಪ್ರಮುಖ ನಗರಗಳಲ್ಲಿ ತನ್ನ ಸ್ಕೂಟರ್ ಮಾರಾಟ ಜಾಲವನ್ನು ವಿಸ್ತರಿಸಲು ಯೋಜಿಸಿರುವ ಅಥೆರ್ ಸಂಸ್ಥೆಯು ಅತ್ಯುತ್ತಮ ಬೆಲೆ ಮತ್ತು ಗ್ರಾಹಕರ ಸೇವೆಗಳ ಮೂಲಕ ಗ್ರಾಹಕರ ನೆಚ್ಚಿನ ಆಯ್ಕೆಯಾಗಿದೆ.

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಇದಲ್ಲದೇ ಅಥೆರ್ ಎನರ್ಜಿ ಸಂಸ್ಥೆಯು ಫೇಮ್ 2 ಯೋಜನೆ ಅಡಿ ಸಬ್ಸಡಿಗೆ ಅರ್ಹವಾಗಿರುವ ಕೆಲವೇ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಅತ್ಯುತ್ತಮ ಬ್ಯಾಟರಿ ಬಳಕೆಯೊಂದಿಗೆ ಗ್ರಾಹಕರ ಸ್ನೇಹಿಯಾಗಿರುವ ಈ ಸ್ಕೂಟರ್‌ ಖರೀದಿ ಮೇಲೆ ಭರ್ಜರಿ ಆಫರ್‌ಗಳನ್ನು ನೀಡಲಾಗುತ್ತಿದೆ.

MOST READ: ಬರಲಿದೆ ದುಬಾರಿ ಬೆಲೆಯ ಹಾರಾಡುವ ಬೈಕ್..!

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೂ ಬಂಪರ್ ಆಫರ್ ನೀಡುತ್ತಿದ್ದು, ಉತ್ತಮ ಮೈಲೇಜ್ ನೀಡಬಲ್ಲ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯ ಹೊಂದಿರುವುದು ಅಥೆರ್ ಸಂಸ್ಥೆಯು ಸಬ್ಸಡಿ ಯೋಜನೆಗೆ ಅರ್ಹವಾಗಲು ಪ್ರಮುಖ ಕಾರಣವಾಗಿದೆ.

MOST READ: ಮಾಲಿನ್ಯ ತಗ್ಗಿಸಲು ಬೆಂಗಳೂರು ದಂಪತಿಯ ಕಾರ್ಯವನ್ನು ಮೆಚ್ಚಲೇಬೇಕು..!

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಅಥೆರ್ ಸಂಸ್ಥೆಯು ಸದ್ಯ ಗ್ರಾಹಕರ ಬೇಡಿಕೆ ಅನ್ವಯ ಎಸ್ 450 ಸ್ಕೂಟರ್‌ಗಳ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಮೊದಲು ಬಿಡುಗಡೆಯಾಗಿದ್ದ ಎಸ್ 340 ಸ್ಕೂಟರ್ ಮಾರಾಟವನ್ನು ಸ್ಥಗಿತಗೊಳಿಸಿದೆ.

MOST READ: ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಬೆಂಗಳೂರು, ಚೆನ್ನೈ ನಂತರ ಹೈದ್ರಾಬಾದ್‌ನಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭಿಸಲಿದೆ ಅಥೆರ್

ಇದಕ್ಕೆ ಕಾರಣ, ಶೇ.98 ಗ್ರಾಹಕರು ಎಸ್ 450 ಸ್ಕೂಟರ್ ಖರೀದಿಗೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ಎಸ್ 340 ಸ್ಕೂಟರ್ ಉತ್ಪಾದನೆಯನ್ನು ಬಂದ್ ಮಾಡಿರುವ ಅಥೆರ್ ಸಂಸ್ಥೆಯು ಎಸ್ 450 ಸ್ಕೂಟರ್ ಮಾದರಿಯು ರೂ.1.24 ಲಕ್ಷ ಮಾರಾಟ ಮಾಡುತ್ತಿದೆ.

Most Read Articles

Kannada
English summary
Ather Energy Plans Expansion In To Andhra Pradesh. Read more in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X