ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಬೆಂಗಳೂರು ಮೂಲದ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಬೆಂಗಳೂರು ಮೂಲದ ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯು ಮಾರಾಟ ಆರಂಭಿಸಿದ ಕೆಲವೇ ದಿನಗಳಲ್ಲಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಸದ್ಯ ಬೆಂಗಳೂರು ಮತ್ತು ಚೆನ್ನೈನಲ್ಲಿ ಮಾತ್ರವೇ ಮಾರಾಟ ಜಾಲ ಹೊಂದಿರುವ ಎಥರ್ ಕಂಪನಿಯು ಶೀಘ್ರದಲ್ಲೇ ದೇಶದ ಪ್ರಮುಖ ನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವುದಲ್ಲದೆ ವಿದೇಶಿ ಮಾರುಕಟ್ಟೆಗೂ ರಫ್ತುಗೊಳ್ಳುವ ತವಕದಲ್ಲಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಹೌದು, ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಅತ್ಯುತ್ತಮ ಮೈಲೇಜ್ ಮತ್ತು ಬೆಲೆ ಹೊಂದಿರುವ ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ವಿದೇಶಿ ಮಾರುಕಟ್ಟೆಗಳಿಂದಲೂ ಬೇಡಿಕೆ ಹರಿದುಬರುತ್ತಿದ್ದು, ಶೀಘ್ರದಲ್ಲೇ ಬೇಡಿಕೆ ಆಧಾರದ ರಫ್ತು ಮಾಡುವ ಯೋಜನೆ ರೂಪಿಸಲಾಗುತ್ತಿದೆ. ಎಥರ್ ಸ್ಕೂಟರ್‌ಗಳಿಗೆ ಶ್ರೀಲಂಕಾ, ಮಲೇಷಿಯಾದಿಂದ ಹೆಚ್ಚು ಬೇಡಿಕೆ ಸಲ್ಲಿಕೆಯಾಗುತ್ತಿದ್ದು, ವಿದೇಶಿ ಮಾರುಕಟ್ಟೆಗಳಿಗಾಗಿ ಶೀಘ್ರದಲ್ಲೇ ಹೊಸ ಸ್ಕೂಟರ್ ಮಾದರಿಗಳನ್ನು ಸಿದ್ದಪಡಿಸಲಾಗುತ್ತಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಸಾಮಾನ್ಯ ಮಾದರಿಯಾಗಿ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಾದ 450 ಸ್ಕೂಟರ್‌ಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚುವರಿ ಪರ್ಫಾಮೆನ್ಸ್ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಮೈಲೇಜ್ ಮತ್ತು ಪರ್ಫಾಮೆನ್ಸ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಎಥರ್ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಹೊಸ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್‌ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ. ಇದರೊಂದಿಗೆ ಹೊಸ ಸ್ಕೂಟರ್‌ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

More from DriveSpark

Article Published On: Wednesday, June 24, 2020, 16:49 [IST]
English summary
Ather Energy Plans Expansion Into International Markets By Next Year Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+