ಎಥರ್ ಎನರ್ಜಿ ಕಂಪನಿಯಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಬೆಂಗಳೂರು ಮೂಲದ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯಾದ ಎಥರ್ ಎನರ್ಜಿಯು ತನ್ನ ಹೊಸ ಯೋಜನೆಗಳಿಗಾಗಿ ಬಂಡವಾಳ ಹೂಡಿಕೆದಾರರನ್ನು ಸೆಳೆಯುತ್ತಿದ್ದು, ಸ್ಟಾರ್ಟ್ಅಪ್ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಯಲ್ಲಿ ಪ್ರಮುಖ ಉದ್ಯಮ ಸಂಸ್ಥೆಗಳು ಕೂಡಾ ಹೂಡಿಕೆ ಮಾಡುತ್ತಿವೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಎಥರ್ ಎನರ್ಜಿ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆಯಲ್ಲಿದ್ದು, ಹೊಸ ಯೋಜನೆಗಾಗಿ ದೇಶದ ಪ್ರಮುಖ ಉದ್ಯಮ ಸಂಸ್ಥೆಗಳು ಭವಿಷ್ಯದ ಯೋಜನೆಗಳ ಭಾಗವಾಗಿ ಸ್ಟಾಟ್‌ಅಪ್ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ.

ಎಥರ್ ಎನರ್ಜಿ ಕಂಪನಿಯಲ್ಲಿ ಇತ್ತೀಚೆಗೆ ಸೀರಿಸ್ ಡಿ ವಿಭಾಗದಲ್ಲಿ ಸುಮಾರು 35 ಮಿಲಿಯನ್ ಯುಎಸ್ಎ ಡಾಲರ್(ಸುಮಾರು ರೂ. 259 ಕೋಟಿ) ಬಂಡವಾಳ ಹೂಡಿಕೆ ಮಾಡಲಾಗಿದ್ದು, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಮತ್ತು ಮಾರಾಟ ಮಳಿಗೆಗಳನ್ನು ವಿಸ್ತರಿಸಲು ಹೊಸ ಬಂಡವಾಳ ಹೂಡಿಕೆಯು ಸಾಕಷ್ಟು ಸಹಕಾರಿಯಾಗಲಿದೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

2015ರಿಂದ ಕಾರ್ಯನಿರ್ವಹಣೆಯಲ್ಲಿರುವ ಎಥರ್ ಎನರ್ಜಿ ಕಂಪನಿಯಲ್ಲಿ ಜನಪ್ರಿಯ ಉದ್ಯಮ ಸಂಸ್ಥೆಯ ಮುಖ್ಯಸ್ಥರಾದ ಸಚಿನ್ ಬನ್ಸಾಲ್ ಹಾಗೂ ಹೀರೋ ಮೋಟೊಕಾರ್ಪ್ ಕಂಪನಿಯು ಹೂಡಿಕೆ ಮಾಡಿದ್ದು, ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕರಾಗಿರುವ ಸಚಿನ್ ಬನ್ಸಾಲ್ ಅವರು ಎಥರ್‌ನಲ್ಲಿ ಇದೀಗ ಹೊಸ ಬಂಡವಾಳದೊಂದಿಗೆ ಹೆಚ್ಚಿನ ಮಟ್ಟದ ಪಾಲುದಾರಿಕೆ ಹೊಂದಿದ್ದಾರೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಸೀರಿಸ್ ಡಿ ವಿಭಾಗದಲ್ಲಿ ಹೊಸದಾಗಿ ಹೂಡಿಕೆಯಾಗಿರುವ ರೂ. 259 ಕೋಟಿ ಬಂಡವಾಳದಲ್ಲಿ ಸಚಿನ್ ಬನ್ಸಾಲ್ ಅವರು ರೂ. 171 ಕೋಟಿ ಮತ್ತು ಹೀರೋ ಮೊಟೋಕಾರ್ಪ್ ಕಂಪನಿಯಿಂದ ಸುಮಾರು ರೂ. 88 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಎಥರ್ ಕಂಪನಿಯಲ್ಲಿ ಸೀರಿಸ್ ಡಿ ವಿಭಾಗದಲ್ಲಿನ ಬಂಡವಾಳ ಹೂಡಿಕೆಗೂ ಮುನ್ನ ಎರಡು ಬಾರಿ ಹಂತ ಹಂತವಾಗಿ ಹೂಡಿಕೆ ಮಾಡಿದ್ದ ಸಚಿನ್ ಬನ್ಸಾಲ್ ಅವರು ಇದುವರೆಗೆ ಒಟ್ಟು ರೂ. 392 ಕೋಟಿ ಬಂಡವಾಳದೊಂದಿಗೆ ಹೆಚ್ಚಿನ ಪಾಲು ಪಡೆದುಕೊಂಡಿದ್ದು, ಹೊಸ ಯೋಜನೆಗಾಗಿ ಹೀರೋ ಮೋಟೊಕಾರ್ಪ್ ಕಂಪನಿಯ ಕೂಡಾ ಕೈಜೋಡಿಸಿರುವುದು ಪ್ರಮುಖ ಬೆಳವಣಿಗೆಯಾಗಿದೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಸದ್ಯ ಬೆಂಗಳೂರು ಮತ್ತು ಚೆನ್ನೈ ಮಾಹಾನಗರಗಳಲ್ಲಿ ಮಾತ್ರವೇ ಮಾರಾಟ ಜಾಲ ಹೊಂದಿರುವ ಎಥರ್ ಕಂಪನಿಯು 2021ರ ಅಂತ್ಯಕ್ಕೆ ದೇಶದ ಪ್ರಮುಖ 20 ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆ ಹೊಂದಿದ್ದು, ಇಂದು ಹೈದರಾಬಾದ್, ಪುಣೆ, ಅಹಮದಾಬಾದ್ ಮತ್ತು ಮುಂಬೈ ನಗರಗಳಲ್ಲಿ ಹೊಸ ಸ್ಕೂಟರ್ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಎಥರ್ ಎನರ್ಜಿ ಕಂಪನಿಯು ಸ್ಕೂಟರ್ ಮಾರಾಟಕ್ಕೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 450ಎಕ್ಸ್ ಮಾದರಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

450ಎಕ್ಸ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ ಬ್ಯಾಟರಿ ಸೌಲಭ್ಯಕ್ಕಾಗಿ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಎಥರ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ

ಮೈಲೇಜ್ ಮತ್ತು ಪರ್ಫಾಮೆನ್ಸ್ 2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Most Read Articles

Kannada
English summary
Ather Energy Raises New Investment Of $35 Million. Read in Kannada.
Story first published: Saturday, November 7, 2020, 18:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X