ಎಥರ್ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ ಹೀರೋ ಮೊಟೋಕಾರ್ಪ್

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಬೆಂಗಳೂರು ಮೂಲದ ಎಥರ್ ಎನರ್ಜಿ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆಯಲ್ಲಿದ್ದು, ಹೊಸ ಯೋಜನೆಗಾಗಿ ದೇಶದ ನಂ.1 ಬೈಕ್ ಉತ್ಪಾದನಾ ಕಂಪನಿಯಾದ ಹೀರೋ ಮೊಟೋಕಾರ್ಪ್ ಕೂಡಾ ಕೈ ಜೋಡಿಸಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಹೌದು, 2016ರಿಂದಲೇ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣ ಮತ್ತು ಮಾರಾಟದಲ್ಲಿ ಸ್ವತಂತ್ರ ಸಂಸ್ಥೆಯಾಗಿ ಬೆಳೆದು ಜನಪ್ರಿಯವಾಗುತ್ತಿರುವ ಎಥರ್ ಎನರ್ಜಿ ಕಂಪನಿಯು ಇದೀಗ ದೇಶದ ಅತಿದೊಡ್ಡ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೊಟೋಕಾರ್ಪ್ ಜೊತೆಗೆ ಕೈಜೋಡಿಸಿದ್ದು, ಎಥರ್ ಎನರ್ಜಿ ಕಂಪನಿಯ ಹೊಸ ಯೋಜನೆಗಳಿಗಾಗಿ ಹೀರೋ ಕಂಪನಿಯೇ ಬಂಡವಾಳ ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಸದ್ಯ ಬೆಂಗಳೂರು, ಚೆನ್ನೈ ಮತ್ತು ಹೈದ್ರಾಬಾದ್ ‌ಮಾಹಾನಗರಗಳಲ್ಲಿ ಮಾತ್ರವೇ ಮಾರಾಟ ಜಾಲ ಹೊಂದಿರುವ ಎಥರ್ ಕಂಪನಿಯು 2021ರ ಅಂತ್ಯಕ್ಕೆ ದೇಶದ ಪ್ರಮುಖ 20 ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆ ಹೊಂದಿದ್ದು, ಹೊಸ ಯೋಜನೆಗಾಗಿ ಹೀರೋ ಕಂಪನಿಯ ಜೊತೆಗೆ ಕೈಜೋಡಿಸಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಮಾರಾಟ ಜಾಲ ವಿಸ್ತರಿಸಿದ ನಂತರ ಉತ್ಪಾದನಾ ಪ್ರಮಾಣವನ್ನು ಸಹ ಹೆಚ್ಚಿಸಬೇಕಿದ್ದು, ಇದಕ್ಕಾಗಿ ಹೊಸೂರು ಬಳಿ ಇರುವ ಉತ್ಪಾದನಾ ಘಟಕವನ್ನು ಸಹ ವಿಸ್ತರಣೆ ಮಾಡುವ ಮೂಲಕ ವಾರ್ಷಿಕವಾಗಿ 1 ಲಕ್ಷ ಯುನಿಟ್ ಉತ್ಪಾದನೆಗೆ ಸಿದ್ದವಾಗಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಹೀಗಾಗಿ ಹೊಸ ಯೋಜನೆಗೆ ಅವಶ್ಯವಿದ್ದ ರೂ. 84 ಕೋಟಿ ಬಂಡವಾಳವನ್ನು ಹೀರೋ ಮೊಟೋಕಾರ್ಪ್ ಕಂಪನಿಯು ಹೂಡಿಕೆ ಮಾಡಿದ್ದು, ಇನ್ಮುಂದೆ ಎಥರ್ ಕಂಪನಿಯಲ್ಲಿ ಹೀರೋ ಕಂಪನಿಯ ಪಾಲು ಕೂಡಾ ಪ್ರಮುಖವಾಗಲಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಇನ್ನು ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಎರಡು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡುತ್ತಿದ್ದು, ಸಾಮಾನ್ಯ ಮಾದರಿಯಾಗಿ 450 ಮಾದರಿಯನ್ನು ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಇದರಲ್ಲಿ 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದ್ದು, ಗ್ರಾಹಕರ ಬೇಡಿಕೆಯೆಂತೆ 450ಎಕ್ಸ್ ಮಾದರಿಯಲ್ಲೇ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ.

MOST READ: ಅತಿ ಕಡಿಮೆ ಬೆಲೆಯೊಂದಿಗೆ ಪ್ರತಿ ಚಾರ್ಜ್‌ಗೆ 280ಕಿ.ಮೀ ಮೈಲೇಜ್ ನೀಡುತ್ತೆ 'ಮಾರ್ಕ್ 2' ಹೊಸ ಎಲೆಕ್ಟ್ರಿಕ್ ಸ್ಕೂಟರ್

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಎಥರ್ ಇವಿ ಸ್ಕೂಟರ್‌ಗಳು ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬಹುದಾಗಿದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಮೈಲೇಜ್ ಮತ್ತು ಪರ್ಫಾಮೆನ್ಸ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಎಥರ್ ಇವಿ ಸ್ಕೂಟರ್ ನಿರ್ಮಾಣದಲ್ಲಿ ಹೊಸದಾಗಿ ಭಾರೀ ಪ್ರಮಾಣದ ಹೂಡಿಕೆ

ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್‌ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ. ಇದರೊಂದಿಗೆ ಹೊಸ ಸ್ಕೂಟರ್‌ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

More from DriveSpark

Article Published On: Friday, July 24, 2020, 20:35 [IST]
English summary
Ather Energy Raises Rs 84 Crore Funding From Hero MotoCorp. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+