ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಮಹಾಮಾರಿ ಕರೋನಾ ವೈರಸ್ ಪ್ರಕರಣಗಳ ಹೆಚ್ಚಳದ ನಡುವೆಯೂ ಕೇಂದ್ರ ಸರ್ಕಾರ ಹಸಿರು ಮತ್ತು ಕಿತ್ತಳೆಯ ವಲಯದಲ್ಲಿನ ಕೈಗಾರಿಕಾ ಚಟುವಟಿಕೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, ಎಥರ್ ಎನರ್ಜಿ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ತಮ್ಮ ಉದ್ಯಮ ವ್ಯವಹಾರವನ್ನು ಪುನಾರಂಭಿಸಿವೆ.

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಮಾಹಾಮಾರಿ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಆಗಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ. ಹೀಗಾಗಿ ಆರ್ಥಿಕ ಪುನಶ್ಚೇತನಕ್ಕಾಗಿ ಆಟೋ ಮೊಬೈಲ್ ಸೇರಿದಂತೆ ಪ್ರಮುಖ ಕೈಗಾರಿಕಾ ವಲಯಗಳಿಗೆ ವಿನಾಯ್ತಿ ನೀಡಿದೆ.

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿದ್ದು, ಹೊಸ ವಾಹನಗಳ ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿವೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವಾಹನ ಉತ್ಪಾದನೆ ಮತ್ತು ಮಾರಾಟಕ್ಕೆ ಚಾಲನೆ ನೀಡಿರುವ ಆಟೋ ಕಂಪನಿಗಳು ವೈರಸ್ ಹರಡದಂತೆ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ.

ಎಥರ್ ಎನರ್ಜಿ ಕೂಡಾ ಇದೀಗ ಬೆಂಗಳೂರು ಮತ್ತು ಚೆನ್ನೈನಲ್ಲಿ ಸ್ಥಾಪನೆಗೊಂಡಿರುವ ಪ್ರಮುಖ ವಾಹನ ಮಾರಾಟ ಕೇಂದ್ರಗಳನ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಪ್ರಮಾಣದ ಪ್ರೊಟೋಕಾಲ್ ನಿಯಮಗಳನ್ನು ಜಾರಿಗೊಳಿಸಿದೆ.

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಜೊತೆಗೆ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ವಾಹನ ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ವಾಹನಗಳ ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ಹಸ್ತಾಂತರಿಸುತ್ತಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಇನ್ನು ಎಥರ್ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಲಾಗಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳ ಅಭಿವೃದ್ದಿ ಯೋಜನೆ ರೂಪಿಸುತ್ತಿದೆ.

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಹೊಸ 450ಎಕ್ಸ್ ಮಾದರಿಯು ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಲಾಕ್‌ಡೌನ್ ವಿನಾಯ್ತಿ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಪುನಾರಂಭಿಸಿದ ಎಥರ್

ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

Most Read Articles

Kannada
English summary
Ather Energy Resumes Operations: Deliveries Of Ather 450 Restarts In Limited Capacity. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X