ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಬೆಂಗಳೂರು ಮೂಲದ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿ ಎಥರ್ ಎನರ್ಜಿ‌ಯು ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುವತ್ತ ಬೃಹತ್ ಯೋಜನೆ ರೂಪಿಸಿದೆ.

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಸದ್ಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಎಥರ್ ಎನರ್ಜಿ ಕಂಪನಿಯು ಸಹ ಇದೇ ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 135ಕ್ಕೂ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾಗಿದೆ.

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಹಾಗೆಯೇ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಹೊಂದುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಎಥರ್ ಕಂಪನಿಯು ವಿವಿಧ ನಗರಗಳಲ್ಲಿ ಆಯಕಟ್ಟಿನ ಸ್ಥಳಗಳನ್ನು ಗುರುತಿಸುತ್ತಿದೆ.

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಸದ್ಯ ಬೆಂಗಳೂರಿನಲ್ಲಿ 37 ಮತ್ತು ಚೆನ್ನೈ 13 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿರುವ ಎಥರ್ ಕಂಪನಿಯು ಡಿಸೆಂಬರ್ ಅಂತ್ಯಕ್ಕೆ ದೇಶದ ಪ್ರಮುಖ 9 ನಗರಗಳಲ್ಲಿ 135 ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲಿದೆ.

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ತದನಂತರ ಹೊಸದಾಗಿ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗಿರುವ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಯೋಜನೆಗೆ ಚಾಲನೆ ಸಿಗಲಿದ್ದು, 2022ರ ಅಂತ್ಯಕ್ಕೆ ಒಟ್ಟು 6,500 ಚಾರ್ಜಿಂಗ್ ನಿಲ್ದಾಣಗಳನ್ನು ಕಾರ್ಯನಿರ್ವಹಣೆಗೆ ಸಿದ್ದವಿರಲಿವೆ. ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯವಿದ್ದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಪ್ರಕ್ರಿಯೆಯು ಸಾಮಾನ್ಯ ಹೆಚ್ಚವಾಗಲಿದ್ದು, ಎಥರ್ ನಿರ್ಮಾಣದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಎಥರ್ ಗ್ರೀಡ್ ಎಂದು ಕರೆಯಲಾಗುತ್ತದೆ.

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಇನ್ನು ಎಥರ್ ಎನರ್ಜಿ ಕಂಪನಿಯು ಆಟೋ ಮಾರುಕಟ್ಟೆಗೆ ಕಾಲಿಟ್ಟು ಯಶಸ್ವಿಯಾಗಿ 2 ವರ್ಷ ಪೂರೈಸಿ 3ನೇ ವರ್ಷದತ್ತ ಮುಂದುವರಿದಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆ ಮಾಡುತ್ತಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ 9 ನಗರಗಳಲ್ಲಿ ಹೊಸ ಇವಿ ಸ್ಕೂಟರ್ ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆ ಹೊಂದಿದ್ದು, ನವೆಂಬರ್ ಆರಂಭದಲ್ಲಿ ಪುಣೆ ಮತ್ತು ಡಿಸೆಂಬರ್‌ನಲ್ಲಿ ಮುಂಬೈ ಮಾಹಾನಗರಗಳಲ್ಲಿ ಎಥರ್ ಇವಿ ಸ್ಕೂಟರ್ ಮಾರಾಟವು ಅಧಿಕೃತವಾಗಿ ಆರಂಭವಾಗಲಿದೆ.

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ತದನಂತರ ಹಂತ-ಹಂತವಾಗಿ ಮಾರಾಟ ಮಳಿಗೆಗಳನ್ನು ಎರಡನೇ ದರ್ಜೆಯ ಮಾಹಾನಗರಗಳಿಗೂ ವಿಸ್ತರಣೆ ಮಾಡಲಿದ್ದು, ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳ ಆಧಾರದ ಮೇಲೆ ಇವಿ ವಾಹನ ಮಾರಾಟವನ್ನು ಹೆಚ್ಚಿಸಲಾಗುತ್ತಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ದೇಶಾದ್ಯಂತ 6,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ

ಎಥರ್ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ 450ಎಕ್ಸ್ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ. 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

Most Read Articles

Kannada
English summary
Ather Energy begins setting up of one of India’s biggest public charging infrastructure.
Story first published: Tuesday, October 13, 2020, 20:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X