3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿರುವ ಬೆಂಗಳೂರು ಮೂಲದ ಎಥರ್ ಎನರ್ಜಿ ಕಂಪನಿಯು ಯಶಸ್ವಿಯಾಗಿ 2 ವರ್ಷ ಪೂರೈಸಿ 3ನೇ ವರ್ಷಕ್ಕೆ ಕಾಲಿಟ್ಟಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರಾಟ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದೆ.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ ಎಂಟು ನಗರಗಳಲ್ಲಿ ಹೊಸ ಇವಿ ಸ್ಕೂಟರ್ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದ್ದು, ಕಂಪನಿಯ ಹೊಸ ಸ್ಕೂಟರ್ ಮಾದರಿಯಾದ 450ಎಕ್ಸ್ ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೀಗಾಗಿ ಗ್ರಾಹಕರ ಬೇಡಿಕೆ ಹೆಚ್ಚಿರುವಾಗಲೇ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಸಹ ಬಿಡುಗಡೆ ಮಾಡಲಿದೆ.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ ಕಂಪನಿಯು ಸಾಮಾನ್ಯ ಮಾದರಿಯಾದ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಎಕ್ಸ್‌ಶೋರೂಂ ದರದಲ್ಲಿ ಪಾವತಿ ಮಾಡಿದ್ದಲ್ಲಿ ಒಂದೇ ಬಾರಿಗೆ ಹಣಪಾವತಿಸಲು ಬಹುತೇಕ ಗ್ರಾಹಕರಿಗೆ ಬ್ಯಾಂಕ್ ಸಾಲ ಅವಶ್ಯಕತೆಯಿದ್ದು, ಬ್ಯಾಂಕ್ ಇಎಂಐ ಬದಲಿಗೆ ಮಾಸಿಕ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಹೊಸ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಾದ 450 ಸ್ಕೂಟರ್‌ಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚುವರಿ ಪರ್ಫಾಮೆನ್ಸ್ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಮೈಲೇಜ್ ಮತ್ತು ಪರ್ಫಾಮೆನ್ಸ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಮತ್ತು 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಪ್ರತಿ ಚಾರ್ಜ್ 10 ಕಿ.ಮೀ ಹೆಚ್ಚುವರಿ ಮೈಲೇಜ್ ಹಿಂದಿರುಗಿಸುವುದಲ್ಲದೇ ಸ್ಕೂಟರ್ ಟಾಪ್ ಸ್ಪೀಡ್ ಕೂಡಾ ಪೆಟ್ರೋಲ್ ಸ್ಕೂಟರ್‌ಗಿಂತಲೂ ಹೆಚ್ಚಿದೆ. ಕೇವಲ 3.3 ಸೇಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ವೇಗ ಪಡೆದುಕೊಳ್ಳುವ 450ಎಕ್ಸ್ ಮಾದರಿಯು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

3ನೇ ವರ್ಷದ ಸಂಭ್ರಮ: ಇವಿ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಎಥರ್

ಜೊತೆಗೆ ಹೊಸ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವು 4ಜಿ ಇ-ಸಿಮ್ ಹೊಂದಿದ್ದು, ಹೊಸ ಸಾಧನದ ಮೂಲಕ ಸ್ಮಾರ್ಟ್‌ಫೋನ್ ಕನೆಕ್ವಿವಿಟಿ, ಬ್ಲೂಟೂಥ್ ಮತ್ತು ಎಥರ್ ಆ್ಯಪ್ ನಿರ್ವಹಣೆ ಮಾಡಬಹುದಾಗಿದೆ. ಇದರೊಂದಿಗೆ ಹೊಸ ಸ್ಕೂಟರ್‌ನಲ್ಲಿ ಇನ್ ಬಿಲ್ಟ್ ನೆವಿಗೆಷನ್, ಲೈವ್ ಲೋಕೆಷನ್, ಲೆಹಿಕಲ್ ಸ್ಟೆಟಸ್, ಥೆಪ್ಟ್ ಡಿಟೆಕ್ಷನ್, ಮ್ಯೂಸಿಕ್ ಮತ್ತು ಕಾಲ್ ಕಂಟ್ರೋಲ್ಸ್ ಸೌಲಭ್ಯಗಳಿದ್ದು, ಹೊಸ ಸ್ಕೂಟರ್ ಅನ್ನು ಗ್ರೇ, ವೈಟ್ ಮತ್ತು ಗ್ರಿನ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

More from DriveSpark

Article Published On: Saturday, June 6, 2020, 14:23 [IST]
English summary
Ather Energy To Expand To 8 New Cities Across India Celebrates Completion Of 2 Years. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+