ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಘೋಷಿಸಿದ ನಂತರ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಯಾದ ಎಥೆರ್ ಎನರ್ಜಿ ಶೀಘ್ರದಲ್ಲೇ ದೆಹಲಿಯಲ್ಲೂ ತನ್ನ ಸ್ಕೂಟರ್ ಗಳನ್ನು ಬಿಡುಗಡೆಗೊಳಿಸುವುದಾಗಿ ಹೇಳಿದೆ. ಸದ್ಯಕ್ಕೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬೆಂಗಳೂರು ಹಾಗೂ ಚೆನ್ನೈ ನಗರಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿದೆ.

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ದೆಹಲಿಯಲ್ಲಿ 200 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ವಾಹನ ಸ್ಕ್ರ್ಯಾಪಿಂಗ್ ನೀತಿ, ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಹಾಗೂ ರಸ್ತೆ ತೆರಿಗೆಯಿಂದ ವಿನಾಯಿತಿ ಸಿಗಲಿದೆ. ಈ ಬಗ್ಗೆ ಎಥೆರ್ ಕಂಪನಿಯು ಟ್ವೀಟ್ ಮಾಡಿದ್ದು, ದೆಹಲಿಯಲ್ಲಿ ಎಥೆರ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಲು ಇದು ಸರಿಯಾದ ಸಮಯ ಎಂದು ಹೇಳಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಶುಕ್ರವಾರದಂದು ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಪ್ರಕಟಿಸಿದ್ದಾರೆ.

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಕೇಂದ್ರ ಸರ್ಕಾರದ ಫೇಮ್ -2 ಯೋಜನೆಯಡಿ ಈ ನೀತಿಯನ್ನು ಜಾರಿಗೆ ತರಲಾಗಿದೆ. ಫೇಮ್ -2 ಯೋಜನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಇದರಡಿಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುವುದು.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಹೊಸ ಎಲೆಕ್ಟ್ರಿಕ್ ನೀತಿಯು ದೆಹಲಿಯಲ್ಲಿ 3 ವರ್ಷಗಳ ಕಾಲ ಜಾರಿಯಲ್ಲಿರಲಿದೆ. ನಂತರ ಸರ್ಕಾರವು ಈ ನೀತಿಯನ್ನು ಪರಿಶೀಲಿಸುತ್ತದೆ. ಈ ನೀತಿಯಡಿ ಎಲೆಕ್ಟ್ರಿಕ್ ವಾಹನಗಳ ವೆಚ್ಚಕ್ಕೆ ಸಬ್ಸಿಡಿ ನೀಡಲಾಗುವುದು. ವಾಹನಗಳ ಆಧಾರದ ಮೇಲೆ ಸಬ್ಸಿಡಿ ನೀಡಲಾಗುವುದು.

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಈ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಆಟೋರಿಕ್ಷಾ, ಇ-ರಿಕ್ಷಾಗಳ ಖರೀದಿಗೆ ರೂ.30,000 ರಿಯಾಯಿತಿ ನೀಡಲಾಗುವುದು. ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ರೂ.1.5 ಲಕ್ಷ ರಿಯಾಯಿತಿ ನೀಡಲಾಗುವುದು.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಇದರ ಜೊತೆಗೆ ಎಲೆಕ್ಟ್ರಿಕ್ ಕಾರು ಹಾಗೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ಎಲೆಕ್ಟ್ರಿಕ್ ಕಮರ್ಷಿಯಲ್ ವಾಹನಗಳ ಮೇಲಿನ ಸಾಲದ ಬಡ್ಡಿಯನ್ನು ಸಹ ಮನ್ನಾ ಮಾಡಲಾಗುವುದು.

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಈ ನೀತಿಯು ಆರ್ಥಿಕತೆಯನ್ನು ಉತ್ತೇಜಿಸುವ ನಿರೀಕ್ಷೆಗಳಿವೆ. ಈ ನೀತಿಯಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರವು ಪ್ರತ್ಯೇಕ ಎಲೆಕ್ಟ್ರಿಕ್ ಬೋರ್ಡ್, ಎಲೆಕ್ಟ್ರಿಕ್ ಫಂಡ್ ಹಾಗೂ ಎಲೆಕ್ಟ್ರಿಕ್ ವೆಹಿಕಲ್ ಸೆಲ್ ಗಳನ್ನು ಸ್ಥಾಪಿಸಲಿದೆ ಎಂದು ದೆಹಲಿ ಸರ್ಕಾರ ಹೇಳಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಎಥೆರ್ ಎನರ್ಜಿ, ತನ್ನ ವಾಹನಗಳನ್ನು ಗುತ್ತಿಗೆಗೆ ನೀಡುತ್ತಿರುವ ಭಾರತದ ಮೊದಲ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಈ ಗುತ್ತಿಗೆ ಯೋಜನೆಯಡಿ ಪೂರ್ತಿ ಹಣವನ್ನು ಒಂದೇ ಬಾರಿ ಪಾವತಿಸುವ ಬದಲು, ಪ್ರತಿ ತಿಂಗಳು ರೂ.700 ಪಾವತಿಸಿ ಚಂದಾದಾರಿಕೆ ಯೋಜನೆಯಡಿ ಖರೀದಿಸಬಹುದು.

ದೆಹಲಿಯಲ್ಲೂ ಬಿಡುಗಡೆಯಾಗಲಿವೆ ಎಥೆರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಎಥೆರ್ ಎನರ್ಜಿ ಕಂಪನಿಯು ಈ ವರ್ಷದ ಜನವರಿಯಲ್ಲಿ ಎಥೆರ್ 450 ಎಕ್ಸ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿತ್ತು. ಈ ವರ್ಷ ಎಥೆರ್ ತನ್ನ ಪ್ರಮುಖ ಮಾದರಿಯನ್ನು ಮುಂಬೈ, ದೆಹಲಿ, ಪುಣೆ, ಹೈದರಾಬಾದ್, ಕೊಯಮತ್ತೂರು, ಕೊಚ್ಚಿ, ಅಹಮದಾಬಾದ್ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಬಿಡುಗಡೆಗೊಳಿಸಲಿದೆ.

Most Read Articles

Kannada
English summary
Ather energy to launch its electric scooters in Delhi. Read in Kannada.
Story first published: Saturday, August 8, 2020, 14:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X