2020ರ ಅಂತ್ಯಕ್ಕೆ 100 ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಥರ್ ಎನರ್ಜಿ
ಬೆಂಗಳೂರು ಮೂಲದ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿ ಎಥರ್ ಎನರ್ಜಿಯು ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುವತ್ತ ಬೃಹತ್ ಯೋಜನೆ ರೂಪಿಸಿದೆ.

ಸದ್ಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಪೂರಕವಾದ ವಾತಾವರಣವಿದ್ದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಎಥರ್ ಎನರ್ಜಿ ಕಂಪನಿಯು ಸಹ ಇದೇ ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 100 ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾಗಿದೆ.

ಎಲೆಕ್ಟ್ರಿಕ್ ವಾಹನಗಳ ಜೊತೆ ನೀಡಲಾಗುವ ಹೋಂ ಚಾರ್ಜಿಂಗ್ ಪಾಯಿಂಟ್‌ಗಳನ್ನು ಹೊರತುಪಡಿಸಿ ಸಾರ್ವಜನಿಕವಾಗಿ ಪೆಟ್ರೋಲ್ ಬಂಕ್ ಮಾದರಿಯಲ್ಲಿ ಚಾರ್ಜಿಂಗ್ ನಿಲ್ದಾಣಗಳ ತೆರೆಯಲಾಗುತ್ತಿದ್ದು, ಎಥರ್ ಕಂಪನಿಯು ಕೂಡಾ ಬೆಂಗಳೂರು, ಚೆನ್ನೈ, ಹೈದ್ರಾಬಾದ್, ದೆಹಲಿ ಎನ್‌ಸಿಆರ್ ಮತ್ತು ಪುಣೆ ನಗರಗಳಲ್ಲಿ ಆಯ್ದ ಪ್ರದೇಶಗಳಲ್ಲಿ ಒಟ್ಟು 100 ಹೊಸ ಪಬ್ಲಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಸಿದ್ದತೆ ನಡೆಸಿದೆ.

ಬೆಂಗಳೂರು ಮತ್ತು ಚೆನ್ನೈ ನಗರದ ಪ್ರಮುಖ ಕಡೆಗಳಲ್ಲಿ ಈಗಾಗಲೇ 150 ಕಡೆಗಳಲ್ಲಿ ಸಿಂಗಲ್ ಚಾರ್ಜಿಂಗ್ ಪಾಯಿಂಟ್ ಹೊಂದಿರುವ ಪಬ್ಲಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ಸ್ಥಾಪನೆ ಮಾಡಲಾಗಿದ್ದು, ಇದೀಗ ಸ್ಥಳ ಲಭ್ಯತೆ ಆಧಾರದ ಮೇಲೆ ಚಾರ್ಜಿಂಗ್ ಪಾಯಿಂಟ್‌ಗಳನ್ನು ಜೋಡಣೆ ಮಾಡಲಾಗುತ್ತಿದೆ.

ಇನ್ನು ಎಥರ್ ಎನರ್ಜಿ ಕಂಪನಿಯು ಆಟೋ ಮಾರುಕಟ್ಟೆಗೆ ಕಾಲಿಟ್ಟು ಯಶಸ್ವಿಯಾಗಿ 2 ವರ್ಷ ಪೂರೈಸಿ 3ನೇ ವರ್ಷದತ್ತ ಮುಂದುವರಿದಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆ ಮಾಡುತ್ತಿದೆ.

ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ ಎಂಟು ನಗರಗಳಲ್ಲಿ ಹೊಸ ಇವಿ ಸ್ಕೂಟರ್ ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆ ಹೊಂದಿದ್ದು, ನವೆಂಬರ್ ಆರಂಭದಲ್ಲಿ ಪುಣೆ ಮತ್ತು ಡಿಸೆಂಬರ್‌ನಲ್ಲಿ ಮುಂಬೈ ಮಾಹಾನಗರಗಳಲ್ಲಿ ಎಥರ್ ಇವಿ ಸ್ಕೂಟರ್ ಮಾರಾಟ ಆರಂಭವಾಗಲಿದೆ.

ತದನಂತರ ಹಂತ-ಹಂತವಾಗಿ ಮಾರಾಟ ಮಳಿಗೆಗಳನ್ನು ಎರಡನೇ ದರ್ಜೆ ಮಾಹಾನಗರಗಳಿಗೂ ವಿಸ್ತರಣೆ ಮಾಡಲಿದ್ದು, ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳ ಆಧಾರದ ಮೇಲೆ ಇವಿ ವಾಹನ ಮಾರಾಟವನ್ನು ಹೆಚ್ಚಿಸಲಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ ಕಂಪನಿಯು ಸಾಮಾನ್ಯ ಮಾದರಿಯಾದ 450 ಮತ್ತು ಹೈ ಎಂಡ್ ಮಾದರಿಯಾಗಿ 450ಎಕ್ಸ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಗ್ರಾಹಕರ ಆಕರ್ಷಣೆಯಾಗಿದೆ.

ಸ್ಟ್ಯಾಂಡರ್ಡ್ ಮಾದರಿಯಾದ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಹೈ ಪರ್ಫಾಮೆನ್ಸ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.
MOST READ: ಆಟೋ ಉದ್ಯಮ ಸುಧಾರಣೆಗಾಗಿ ಜಿಎಸ್‌ಟಿ ವಿನಾಯ್ತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಪ್ಯಾನ್ ಇಂಡಿಯಾ ಪ್ರಕಾರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.99 ಸಾವಿರ ಬೆಲೆ ಹೊಂದಿದ್ದು, ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರು ಮಾಸಿಕ ಚಂದಾದಾರಿಕೆ ಯೋಜನೆಯಡಿ ಮೂರು ವರ್ಷಗಳ ತನಕ ಬ್ಯಾಟರಿ ಸೌಲಭ್ಯಕ್ಕಾಗಿ 450ಎಕ್ಸ್ ಪ್ಲಸ್ ಮಾದರಿಗೆ ಪ್ರತಿ ತಿಂಗಳು(ರೂ. 1,699) ಮತ್ತು 450ಎಕ್ಸ್ ಪ್ರೊ ಮಾದರಿಗೆ ಪ್ರತಿ ತಿಂಗಳು(ರೂ.1,999) ಪಾವತಿಸಬೇಕು.


Click it and Unblock the Notifications








