Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವಲ್ಲಿ ಮುನ್ನಡೆ ಸಾಧಿಸುತ್ತಿವೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವಲ್ಲಿ ಮುನ್ನಡೆ ಸಾಧಿಸುತ್ತಿವೆ.
ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ಹೈದ್ರಾಬಾದ್ ಮೂಲದ ಅಟುಮೊಬೈಲ್ ಪ್ರೈ.ಲೀ(Atumobiles Pvt. Ltd) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಬೈಕ್ ಮಾದರಿಯೊಂದನ್ನು ಸಿದ್ದಪಡಿಸಿದೆ.

ರೆಟ್ರೋ ವಿನ್ಯಾಸ ಹೊಂದಿರುವ ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾದರಿಯು ಸಾಧರಣ ಸ್ಪೀಡ್ ಮೂಲಕ ಹೆಚ್ಚು ಮೈಲೇಜ್ ನೀಡುವ ಎಲೆಕ್ಟ್ರಿಕ್ ವಾಹನ ಮಾದರಿಯಾಗಿದ್ದು, ಇದು 48V 250W ಮೋಟಾರ್ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಗರಿಷ್ಠ ವೇಗವನ್ನು ಪ್ರತಿ ಗಂಟೆ 25ಕಿ.ಮೀ ಗೆ ಸೀಮಿತಗೊಳಿಸಲಾಗಿದ್ದು, ಹೊಸ ಮೋಟಾರ್ ಸೈಕಲ್ ಬೆಲೆಯು ರೂ. 50 ಸಾವಿರದಿಂದ ಆರಂಭಗೊಳ್ಳುತ್ತದೆ. ದೇಶಾದ್ಯಂತ ಖರೀದಿಗೆ ಲಭ್ಯವಾಗಲಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಶೀಘ್ರದಲ್ಲೇ ಗ್ರಾಹಕರ ಕೈಸೇರಲಿದೆ.

ನೋಂದಣಿ, ಡಿಎಲ್ ಅವಶ್ಯಕತೆಯಿಲ್ಲ..!
ಹೌದು, ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ ಮತ್ತೊಂದು ವಿಶೇಷತೆ ಅಂದ್ರೆ ಲೋ ಸ್ಪೀಡ್ ವಾಹನ ಎಂದು ಪರಿಗಣಿಸಿರುವುದರಿಂದ ಈ ವಾಹನ ನೋಂದಣಿ ಅವಶ್ಯಕತೆ ಮತ್ತು ಈ ಬೈಕ್ ಚಾಲನೆಗೆ ಡ್ರೈವಿಂಗ್ ಲೆಸೆನ್ಸ್ ಕೂಡಾ ಅವಶ್ಯಕತೆಯಿಲ್ಲ.
ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾದರಿಯು ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಆಟೋಮೆಟಿವ್ ಟೆಕ್ನಾಲಜಿ(ಐಸಿಎಟಿ) ಸಂಸ್ಥೆಯಿಂದ ಪ್ರಮಾಣೀಕೃತಗೊಂಡಿದ್ದು, ವಾಣಿಜ್ಯ ಬಳಕೆಗೆ ಅನುಮತಿ ಪಡೆದುಕೊಂಡಿದೆ.

48V ಬ್ಯಾಟರಿ ಪ್ಯಾಕ್ ಪೂರ್ಣಯಾಗಿ ಚಾರ್ಜ್ ಆಗಲು ನಾಲ್ಕು ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಆಗಲು ಗರಿಷ್ಠ 1 ಯನಿಟ್ ವಿದ್ಯುತ್ ಬಳಕೆ ಮಾಡಿಕೊಳ್ಳುತ್ತದೆ.
48V ಬ್ಯಾಟರಿ ಪ್ಯಾಕ್ ಪೂರ್ಣಯಾಗಿ ಚಾರ್ಜ್ ಆಗಲು ನಾಲ್ಕು ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಆಗಲು ಗರಿಷ್ಠ 1 ಯನಿಟ್ ವಿದ್ಯುತ್ ಬಳಕೆ ಮಾಡಿಕೊಳ್ಳುತ್ತದೆ.
1 ಯುನಿಟ್ ವಿದ್ಯುತ್ ಬೆಲೆಯು ರೂ.8 ರಿಂದ ರೂ. 10 ಖರ್ಚಾದಲ್ಲಿ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಎಲ್ಲಾ ವಯೋಮಾನದವರು ಕೂಡಾ ಬಳಕೆ ಮಾಡುವ ಹಾಗೆ ವಿನ್ಯಾಸಗೊಳಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಜೊತೆಗೆ ಹೊಸ ಎಲೆಕ್ಟ್ರಿಕ್ ಬೈಕಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್‌ಲೈಟ್, ಎಲ್ಇಡಿ ಟರ್ನ್ ಇಂಡಿಕೇಟರ್, ಸ್ಟೈಲಿಶ್ ಕಫೆ ರೇಸರ್ ವಿನ್ಯಾಸದ ಆಸನ ಸೌಲಭ್ಯ, ಫ್ಯಾಟ್ ಟೈರ್, 280-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್, ಡಿಜಿಟಲ್ ಡಿಸ್‌ಪ್ಲೇ, ಇನ್‌ಸ್ಟ್ರಮೆಂಟ್ ಕ್ಲಸ್ಟರ್ ಸೌಲಭ್ಯಗಳಿವೆ.