ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ತನ್ನ 2020ರ ಆಗಸ್ಟ್ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ, 2020ರ ಆಗಸ್ಟ್ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು ಒಟ್ಟು 321,058 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು 325,300 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಈ ಬಾರಿ ಮಾರಾಟದಲ್ಲಿ ಕುಸಿತ ಕಂಡಿದೆ, ಆದರೆ ದೇಶಿಯ ಮಾರುಕಟ್ಟೆಯ ಮಾರಾಟದಲ್ಲಿ ಬಜಾಜ್ ಆಟೋ ಶೇ.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ಆಗಸ್ಟ್ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 178,220 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ 173,024 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಇನ್ನು ಬಜಾಜ್ ಆಟೋ ಕಂಪನಿಯು 2020ರ ಆಗಸ್ಟ್ ತಿಂಗಳ ರಫ್ತಿನಲ್ಲಿ ಶೇ.6 ರಷ್ಟು ಕುಸಿತವನ್ನು ದಾಖಲಿಸಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

2020ರ ಆಗಸ್ಟ್ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು 142,838 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ 152,276 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಮಾರಾಟ ವರದಿಯಲ್ಲಿ 2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಅಂದರೆ ಏಪ್ರಿಲ್-ಜೂನ್ ನಡುವಿನ ಅವಧಿಯಲ್ಲಿ ಕಂಪನಿಯ ವ್ಯವಹಾರವು 60.92%ನಷ್ಟು ಕುಸಿದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಮೊದಲ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ ರೂ.395.51 ಕೋಟಿಗಳಾಗಿದೆ. ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ ಲಾಭದ ಪ್ರಮಾಣವು ರೂ.1,012 ಕೋಟಿಗಳಾಗಿತ್ತು. ಕೋವಿಡ್ -19 ಕಾರಣದಿಂದಾಗಿ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ರಫ್ತಿನಲ್ಲೂ ಭಾರಿ ಇಳಿಕೆಯಾಗಿದೆ .

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ ತನ್ನ ಪ್ಯಾಸೆಂಜರ್ ಬೈಕ್ ಸೆಗ್ ಮೆಂಟ್ ಅನ್ನು ಮತ್ತಷ್ಟು ವಿಸ್ತರಿಸುತ್ತಿದೆ. ಈ ಕಾರಣಕ್ಕೆ ಕಂಪನಿಯು ತನ್ನ ಬಜಾಜ್ ಪ್ಲಾಟಿನಾ 100 ಬೈಕ್ ಸರಣಿಯಲ್ಲಿ ಮತ್ತೊಂದು ಬೈಕ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.

MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಬಜಾಜ್ ಪ್ಲಾಟಿನಾ 100 ಇಎಸ್ (ಎಲೆಕ್ಟ್ರಿಕ್ ಸ್ಟಾರ್ಟ್) ಡಿಸ್ಕ್ ರೂಪಾಂತರ ಬೆಲೆಯು ರೂ 59,373ಗಳಾಗಿದೆ. ಇನ್ನು ಬಜಾಜ್ ಪ್ಲಾಟಿನಾ 100 ಇಎಸ್ ಬೈಕಿನ ಡ್ರಮ್ ರೂಪಾಂತರದ ಬೆಲೆಯು ರೂ.58,477 ಗಳಾಗಿದೆ. ಈ ಬೈಕಿನ ಕಿಕ್ ಸ್ಟಾರ್ಟ್ ರೂಪಾಂತರದ ಬೆಲೆಯು ರೂ.50,464ಗಳಾಗಿದೆ. ಹೊಸ ಸುರಕ್ಷತಾ ನಿಯಮಗಳಿಗೆ ಅನುಸಾರವಾಗಿ ಕಂಪನಿಯು ಈ ಬೈಕಿನಲ್ಲಿ ಕಾಂಬಿ ಬ್ರೇಕಿಂಗ್ ಸಿಸ್ಟಂ ಅನ್ನು ಅಳವಡಿಸಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ದೇಶಿಯ ಮಾರುಕಟ್ಟೆಯ ಬೈಕುಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಕಂಡಿದೆ. ಇನ್ನು ಹಬ್ಬದ ಸೀಸನ್ ನಲ್ಲಿ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Bajaj's Domestic Two-Wheeler Sales Grow 3 PerCent. Read In Kannada.
Story first published: Wednesday, September 2, 2020, 20:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X