ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಕರೋನಾ ವೈರಸ್ ಭೀತಿ ನಡುವೆಯೂ ಆಟೋ ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ವಿನಾಯ್ತಿ ನೀಡಿರುವ ಕೇಂದ್ರ ಸರ್ಕಾರವು ಹಲವಾರು ಸುರಕ್ಷಾ ಕ್ರಮಗಳನ್ನು ಕಡ್ಡಾಯಗೊಳಿಸಿದ್ದು, ಬಜಾಜ್ ಆಟೋ ಕೂಡಾ ಹೊಸ ನಿಯಮದ ಪ್ರಕಾರ ಉದ್ಯಮ ವ್ಯವಹಾರವನ್ನು ಪುನಾರಂಭಗೊಳಿಸಿದೆ.

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಜೊತೆಗೆ ವಾಹನಗಳ ವಾರಂಟಿ ಅವಧಿಯಲ್ಲೂ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿರುವ ಬಜಾಜ್ ಕಂಪನಿಯು ಮಾರ್ಚ್ ಮತ್ತು ಏಪ್ರಿಲ್ ಅವಧಿಯಲ್ಲಿ ಮುಗಿಯಬೇಕಿದ್ದ ವಾಹನಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ವಿಸ್ತರಣೆ ಮಾಡಿದ್ದು, ಲಾಕ್‌ಡೌನ್ ಸಂಕಷ್ಟದಲ್ಲಿ ಸಿಲುಕಿರುವ ತನ್ನ ಗ್ರಾಹಕರಿಗೆ ಗರಿಷ್ಠ ವಾರಂಟಿ ಆಫರ್ ನೀಡಿರುವ ಮೂಲಕ ಮೆಚ್ಚುಗೆ ಕಾರಣವಾಗಿದೆ.

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಮಾಹಾಮಾರಿ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಆಗಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ.

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿದ್ದು, ಹೊಸ ವಾಹನಗಳ ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿವೆ.

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವಾಹನ ಮಾರಾಟಕ್ಕೆ ಚಾಲನೆ ನೀಡಿರುವ ಆಟೋ ಕಂಪನಿಗಳು ವೈರಸ್ ಹರಡದಂತೆ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಬಜಾಜ್ ಆಟೋ ಕಂಪನಿಯು ಸಹ ದೇಶದ ವಿವಿಧಡೆ ಹರಡಿಕೊಂಡಿರುವ ಸಾವಿರಾರು ವಾಹನ ಮಾರಾಟ ಕೇಂದ್ರಗಳನ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಟ ಪ್ರಮಾಣದ ಪ್ರೊಟೋಕಾಲ್ ನಿಯಮಗಳನ್ನು ಜಾರಿಗೊಳಿಸಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಹೊಸ ಸುರಕ್ಷಾ ಮಾರ್ಗಸೂಚಿಗಳಿಂದಾಗಿ ಪ್ರತಿ ಹಂತದಲ್ಲೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಥರ್ಮಾ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಬಳಕೆಯೂ ಕಡ್ಡಾಯವಾಗಿದೆ.

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಜೊತೆಗೆ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಬೈಕ್ ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ವಾಹನಗಳ ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ಹಸ್ತಾಂತರಿಸಲಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್‌ಡೌನ್ ವಿಸ್ತರಣೆಯಿಂದಾಗಿ ವಾರಂಟಿ ಅವಧಿಯನ್ನು ಹೆಚ್ಚಿಸಿದ ಬಜಾಜ್ ಆಟೋ

ಇನ್ನು ಕರೋನಾ ವೈರಸ್‌ ವಿರುದ್ಧ ಹೋರಾಟದಲ್ಲಿ ಸರ್ಕಾರದ ಬೆನ್ನಿಗೆ ನಿಂತಿರುವ ಬಜಾಜ್ ಆಟೋ ಕಂಪನಿಯು ಟಾಟಾ ನಂತರ ಅತಿ ಹೆಚ್ಚು ದೇಣಿಗೆ ನೀಡಿದ್ದು, ವೈದ್ಯಕೀಯ ಉಪಕರಣಗಳು ಮತ್ತು ಸುರಕ್ಷಾ ಸಾಧನಗಳ ಖರೀದಿಗಾಗಿ ಬರೋಬ್ಬರಿ ರೂ.100 ಕೋಟಿ ಹಣಕಾಸು ಸಹಾಯವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ನೀಡಿದೆ.

Most Read Articles

Kannada
English summary
Bajaj Auto Announces Second Extension Of Warranty & Free Service Periods: Details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X