Just In
- 35 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, Live ಸ್ಕೋರ್: ಭಾರತದ ಆರಂಭಿಕ ವಿಕೆಟ್ ಪತನ
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೊದಲ ತ್ರೈಮಾಸಿಕದಲ್ಲಿ ಭಾರೀ ಕುಸಿತ ಕಂಡ ಬಜಾಜ್ ಆಟೋ ವಹಿವಾಟು
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಮಾರಾಟ ವರದಿಯನ್ನು ಬಜಾಜ್ ಆಟೋ ಕಂಪನಿಯು ಬಿಡುಗಡೆಗೊಳಿಸಿದೆ. 2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಅಂದರೆ ಏಪ್ರಿಲ್-ಜೂನ್ ನಡುವಿನ ಅವಧಿಯಲ್ಲಿ ಕಂಪನಿಯ ವ್ಯವಹಾರವು 60.92%ನಷ್ಟು ಕುಸಿದಿದೆ ಎಂದು ಬಜಾಜ್ ತನ್ನ ವರದಿಯಲ್ಲಿ ಹೇಳಿದೆ.

ಮೊದಲ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ ರೂ.395.51 ಕೋಟಿಗಳಾಗಿದೆ. ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ ಲಾಭದ ಪ್ರಮಾಣವು ರೂ.1,012 ಕೋಟಿಗಳಾಗಿತ್ತು. ಕೋವಿಡ್ -19 ಕಾರಣದಿಂದಾಗಿ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ರಫ್ತಿನಲ್ಲೂ ಭಾರಿ ಇಳಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ. ಲಾಕ್ ಡೌನ್ ಕಾರಣದಿಂದಾಗಿ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿ ಏಪ್ರಿಲ್ - ಮೇ ತಿಂಗಳ ವಾಹನ ಮಾರಾಟದಲ್ಲಿ ತೀವ್ರ ಕುಸಿತ ಕಂಡುಬಂದಿತ್ತು.

2020ರ ಏಪ್ರಿಲ್-ಜೂನ್ ಅವಧಿಯಲ್ಲಿ ಬಜಾಜ್ ಆಟೋದ ನಿರ್ವಹಣಾ ಆದಾಯವು 60.92%ನಷ್ಟು ಕುಸಿದು ರೂ.3,079.24 ಕೋಟಿಗಳಿಗೆ ತಲುಪಿದೆ.ಹಿಂದಿನ ಹಣಕಾಸು ವರ್ಷದಲ್ಲಿ ಆದಾಯವು ರೂ.7,755.82 ಕೋಟಿಗಳಾಗಿತ್ತು.
MOST READ:ಒಂದು ಸಾವಿರ ರೂಪಾಯಿ ಪಾವತಿಸಿ ಈ ಸ್ಕೂಟರ್ ಬುಕ್ ಮಾಡಿ

ಸ್ವತಂತ್ರ ಆಧಾರದ ಮೇಲೆ, ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ನಿವ್ವಳ ಲಾಭವು ರೂ.528.04 ಕೋಟಿಗಳಾಗಿದೆ. 2019-20ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಈ ಪ್ರಮಾಣವು ರೂ.1,125.67 ಕೋಟಿಗಳಾಗಿತ್ತು.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಬಜಾಜ್ ಆಟೋ 4,43,103 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 12,47,174 ಯುನಿಟ್ ಮಾರಾಟ ಮಾಡಲಾಗಿತ್ತು.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಪ್ರತಿ ತಿಂಗಳ ಮಾರಾಟದ ಬಗ್ಗೆ ಹೇಳುವುದಾದರೆ, 2020ರ ಜೂನ್ ತಿಂಗಳ ಮಾರಾಟ ಪ್ರಮಾಣವು 31%ನಷ್ಟು ಕುಸಿದು 2,78,097 ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 4,04,624 ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿತ್ತು.

2019ರ ಜೂನ್ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಜೂನ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಮಾರಾಟವು 34%ನಷ್ಟು ಕುಸಿತ ಕಂಡಿದೆ ಎಂದು ಕಂಪನಿ ಹೇಳಿದೆ. ದೇಶಿಯ ಮಾರುಕಟ್ಟೆಯಲ್ಲಿ ಈ ವರ್ಷ 1,51,189 ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2,29,225 ಯುನಿಟ್ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳು ಮಾರಾಟವಾಗಿದ್ದವು.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಲಾಕ್‌ಡೌನ್ ಮುಗಿದ ನಂತರ, ಕಂಪನಿಯು ಎಲ್ಲಾ ಉತ್ಪಾದನಾ ಘಟಕಗಳಲ್ಲಿ ಉತ್ಪಾದನೆಯನ್ನು ಪುನರಾರಂಭಿಸಿದೆ. ಕಂಪನಿಯು ತನ್ನ ಪೂರೈಕೆ ಸರಪಳಿಯನ್ನು ನವೀಕರಿಸುತ್ತಿದೆ. ಇದರ ಜೊತೆಗೆ ತನ್ನ ಡೀಲರ್ ಗಳಿಗೆ ವಾಹನಗಳನ್ನು ಸಾಗಿಸುತ್ತಿದೆ.