Just In
- 7 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 58 min ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 3 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು
ಬಜಾಜ್ ಆಟೋ ಕಂಪನಿಯ ಸರಣಿಯಲ್ಲಿ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮತ್ತು ಅವೆಂಜರ್ 220 ಕ್ರೂಸ್ ಜನಪ್ರಿಯ ಮಾದರಿಗಳಾಗಿದೆ. ಬಜಾಜ್ ಕಂಪನಿಯು ತನ್ನ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮತ್ತು ಅವೆಂಜರ್ 220 ಕ್ರೂಸ್ ಬೈಕುಗಳ ಬೆಲೆಯನ್ನು ಮೂರನೇ ಬಾರಿಗೆ ಹೆಚ್ಚಿಸಿದೆ.
ಬಜಾಜ್ ಕಂಪನಿಯು ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಬೈಕಿನ ಬೆಲೆಯನ್ನು ರೂ.5,203 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಬಜಾಜ್ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಬೈಕಿನ ಬೆಲೆಯು ರೂ.1 ಲಕ್ಷದ ಗಡಿಯನ್ನು ದಾಟಿದೆ. ಬೆಲೆ ಏರಿಕೆಯ ಬಳಿಕ, ಬಜಾಜ್ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1,01,094 ಗಳಾಗಿದೆ.
ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಿಎಸ್-6 ಅಪ್ಡೇಟ್ನ ನಂತರ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮಾದರಿಯ ಬೆಲೆಯು ಮೂರನೇ ಬಾರಿ ಏರಿಕೆಯಾಗಿದೆ. ಬೆಲೆಯನ್ನು ಹೊರತುಪಡಿಸಿ ಇತರ ಬದಲಾವಣೆಗಳು ಯಾವುದು ಇಲ್ಲ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು
ಬಿಎಸ್-6 ಅವೆಂಜರ್ ಸ್ಟ್ರೀಟ್ 160 ಬೈಕಿನಲ್ಲಿ 160 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ನಲ್ಲಿ ಸಹ ಫ್ಯೂಯಲ್ ಇಂಜೆಕ್ಷನ್ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ.
ಹೊಸ ಅವೆಂಜರ್ ಸ್ಟ್ರೀಟ್ 160 ಬೈಕಿನಲ್ಲಿರುವ ಎಂಜಿನ್ 14.8 ಬಿಹೆಚ್ಪಿ ಪವರ್ ಹಾಗೂ 13.7 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡಿನ ಗೇರ್ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್
ಇದರೊಂದಿಗೆ ಬಜಾಜ್ ಕಂಪನಿಯು ಬಿಎಸ್-6 ಅವೆಂಜರ್ 220 ಕ್ರೂಸ್ ಬೈಕಿನ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಬೈಕಿನ ಬೆಲೆಯನ್ನು ರೂ.2,457 ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ ಬಿಎಸ್-6 ಅವೆಂಜರ್ 220 ಕ್ರೂಸ್ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1,22,630 ಗಳಾಗಿದೆ.
ಬಜಾಜ್ ಅವೆಂಜರ್ ಕ್ರೂಸ್ 220 ಬೈಕಿನಲ್ಲಿ 220 ಸಿಸಿಯ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಈ ಎಂಜಿನ್ 8,500 ಆರ್ಪಿಎಂನಲ್ಲಿ 18.7 ಬಿಹೆಚ್ಪಿ ಪವರ್ ಹಾಗೂ 7,000 ಆರ್ಪಿಎಂನಲ್ಲಿ 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ನಲ್ಲಿ 5-ಸ್ಪೀಡಿನ ಗೇರ್ಬಾಕ್ಸ್ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಈ ಬೈಕಿನಲ್ಲಿ ಎಂಜಿನ್ ಅಪ್ ಗ್ರೇಡ್ ಹೊರತಾಗಿ, ಅವೆಂಜರ್ ಕ್ರೂಸ್ 220 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳಾಗಿಲ್ಲ. ವಿನ್ಯಾಸವನ್ನು ಮೊದಲಿನಂತೆ ಉಳಿಸಿಕೊಳ್ಳಲಾಗಿದೆ. ಈ ಬೈಕ್ ಬಹುತೇಕ ಭಾಗಗಳಲ್ಲಿ ಒಂದೇ ಉದ್ದದ ವಿಂಡ್ಸ್ಕ್ರೀನ್ ಹಾಗೂ ಕ್ರೋಮ್ ಗಳನ್ನು ಹೊಂದಿದೆ.
ಬಜಾಜ್ ಆಟೋ ಕಂಪನಿಯು ಬಿಎಸ್-6 ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮತ್ತು ಅವೆಂಜರ್ 220 ಕ್ರೂಸ್ ಬೈಕುಗಳ ಬೆಲೆಯನ್ನು ಮೂರನೇ ಬಾರಿಗೆ ಹೆಚ್ಚಿಸಲಾಗಿದೆ. ಈ ಬೈಕುಗಳ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು.