ದುಬಾರಿಯಾಯ್ತು ಬಿಎಸ್-6 ಬಜಾಜ್ ಅವೆಂಜರ್ 220 ಕ್ರೂಸ್ ಬೈಕ್
ಬೈಕ್ ತಯಾರಕ ಕಂಪನಿಯಾದ ಬಜಾಜ್ ಆಟೋ ತನ್ನ ಬಿಎಸ್-6 ಅವೆಂಜರ್ 220 ಕ್ರೂಸ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಬಿಎಸ್-6 ಅವೆಂಜರ್ 220 ಕ್ರೂಸ್ ಬೈಕಿನ ಬೆಲೆಯನ್ನು ಹೆಚ್ಚಿಸಲಾಗಿದೆ.

ಬಿಎಸ್-6 ಬಜಾಜ್ ಅವೆಂಜರ್ 220 ಕ್ರೂಸ್ ಬೈಕನ್ನು ರೂ. 1,16,672 ಗಳಿಗೆ ಬಿಡುಗಡೆಗೊಳಿಸಿದ್ದರು. ಈ ಬಿಎಸ್-4 ಆವೃತ್ತಿಗಿಂತ ಹೊಸ ಅವೆಂಜರ್ 220 ಕ್ರೂಸ್ ಬೈಕಿನ ಬೆಲೆಯನ್ನು ರೂ.11,584 ಹೆಚ್ಚಿಸಿ ಬಿಡುಗಡೆಗೊಳಿಸಿದ್ದರು. ಇದೀಗ ಈ ಬೈಕಿನ ಬೆಲೆಯನ್ನು ರೂ.2,502ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಬಜಾಜ್ ಅವೆಂಜರ್ ಬೈಕುಗಳು ತನ್ನ ವಿಶಿಷ್ಟವಾದ ವಿನ್ಯಾಸಗಳಿಂದ ಜನಪ್ರಿಯತೆಯನ್ನು ಹೊಂದಿವೆ

ಈ ಬೈಕಿನಲ್ಲಿ ಎಂಜಿನ್ ಅಪ್ ಗ್ರೇಡ್ ಹೊರತಾಗಿ, ಅವೆಂಜರ್ ಕ್ರೂಸ್ 220 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳಾಗಿಲ್ಲ. ವಿನ್ಯಾಸವನ್ನು ಮೊದಲಿನಂತೆ ಉಳಿಸಿಕೊಳ್ಳಲಾಗಿದೆ. ಈ ಬೈಕ್ ಬಹುತೇಕ ಭಾಗಗಳಲ್ಲಿ ಒಂದೇ ಉದ್ದದ ವಿಂಡ್‌ಸ್ಕ್ರೀನ್ ಹಾಗೂ ಕ್ರೋಮ್ ಗಳನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಬಜಾಜ್ ಅವೆಂಜರ್ ಕ್ರೂಸ್ 220 ಬೈಕಿನಲ್ಲಿ 220 ಸಿಸಿಯ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಟೆಕ್ನಾಲಜಿಯನ್ನು ಬಳಸಲಾಗಿದೆ.

ಈ ಎಂಜಿನ್ 8,500 ಆರ್‌ಪಿಎಂನಲ್ಲಿ 18.7 ಬಿಹೆಚ್‌ಪಿ ಪವರ್ ಹಾಗೂ 7,000 ಆರ್‌ಪಿಎಂನಲ್ಲಿ 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‌ನಲ್ಲಿ 5-ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಈ ಬೈಕಿನಲ್ಲಿ ಸಸ್ಪೆಂಷನ್ ಸೆಟಪ್ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಟ್ವಿನ್ ಅಬಾರ್ಬರ್‍ಗಳನ್ನು ಒಳಗೊಂಡಿದೆ. ಈ ಬೈಕ್ ಸಿಂಗಲ್ ಚಾನೆಲ್ ಎಬಿಎಸ್ ಅನ್ನು ಸಹ ಹೊಂದಿದೆ.

ಬಜಾಜ್ ಆಟೋ ಕಂಪನಿಯು ತನ್ನ ಅವೆಂಜರ್ 220 ಸ್ಟ್ರೀಟ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸ್ಥಗಿತಗೊಳಿಸಲಾಗಿದೆ. ಬಜಾಜ್ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್ ನಿಂದ ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕಿನ ಹೆಸರನ್ನು ತೆಗೆದುಹಾಕಲಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್ ಅನ್ನು ಡೀಲರ್ ಗಳಿಗೆ ವಿತರಿಸುವುದನ್ನು ನಿಲ್ಲಿಸಲಾಗಿದೆ. ಬಜಾಜ್ ಆಟೋ ಕಂಪನಿಯು ಅವೆಂಜರ್ 220 ಸ್ಟ್ರೀಟ್ ಬೈಕಿನ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್ ನಿರೀಕ್ಷಿಸಿದ ಸಂಖ್ಯೆಯಲ್ಲಿ ಮಾರಾಟವಾಗಿಲ್ಲ. ಇದರಿಂದಾಗಿ ಬಜಾಜ್ ಆಟೋ ಕಂಪನಿಯು ಅವೆಂಜರ್ 220 ಸ್ಟ್ರೀಟ್ ಬೈಕನ್ನು ಸ್ಥಗಿತಗೊಳಿಸಲಾಗಿದೆ.

ಇನ್ನು ಬಿಎಸ್-6 ಬಜಾಜ್ ಅವೆಂಜರ್ 220 ಕ್ರೂಸ್ ಬೈಕ್ ಆಬರ್ನ್ ಬ್ಲ್ಯಾಕ್ ಮತ್ತು ಮೂನ್ ವೈಟ್.ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಇದೀಗ ಬಿಎಸ್-6 ಬಜಾಜ್ ಅವೆಂಜರ್ 220 ಕ್ರೂಸ್ ಬೆಲೆಯನ್ನು ಹೆಚ್ಚಿಸಲಾಗಿದೆ. ಇದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು


Click it and Unblock the Notifications