ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ಬೈಕ್ ಮಾರಾಟ ಪುನಾರಂಭಿಸಿದ ಬಜಾಜ್
ಕರೋನಾ ವೈರಸ್ ಪ್ರಕರಣಗಳ ಹೆಚ್ಚಳದ ನಡುವೆಯೂ ಕೇಂದ್ರ ಸರ್ಕಾರವು ಹಸಿರು ಮತ್ತು ಕಿತ್ತಳೆಯ ವಲಯದಲ್ಲಿನ ಕೈಗಾರಿಕಾ ಚಟುವಟಿಕೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, ಬಹುತೇಕ ಆಟೋ ಕಂಪನಿಗಳು ಉದ್ಯಮ ವ್ಯವಹಾರವನ್ನು ಪುನಾರಂಭಿಸಿವೆ.

ಮಾಹಾಮಾರಿ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಆಗಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ. ಹೀಗಾಗಿ ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಮುಖ ಕೈಗಾರಿಕಾ ವಲಯಗಳಿಗೆ ವಿನಾಯ್ತಿ ನೀಡಿದೆ.

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿದ್ದು, ಹೊಸ ವಾಹನಗಳ ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿವೆ.
MOST READ: ಸಂಕಷ್ಟದಲ್ಲಿರುವ ಆಟೋ ಉದ್ಯಮವನ್ನು ಕೈ ಹಿಡಿಯಲಿದೆ ಹೊಸ ಸ್ಕ್ರ್ಯಾಪಿಂಗ್ ನೀತಿ

ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವಾಹನ ಮಾರಾಟಕ್ಕೆ ಚಾಲನೆ ನೀಡಿರುವ ಆಟೋ ಕಂಪನಿಗಳು ವೈರಸ್ ಹರಡದಂತೆ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ.

ಬಜಾಜ್ ಆಟೋ ಕಂಪನಿಯು ಇದೀಗ ದೇಶದ ವಿವಿಧಡೆ ಹರಡಿಕೊಂಡಿರುವ ಸಾವಿರಾರು ವಾಹನ ಮಾರಾಟ ಕೇಂದ್ರಗಳನ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಟ ಪ್ರಮಾಣದ ಪ್ರೊಟೋಕಾಲ್ ನಿಯಮಗಳನ್ನು ಜಾರಿಗೊಳಿಸಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಹೊಸ ಸುರಕ್ಷಾ ಮಾರ್ಗಸೂಚಿಗಳಿಂದಾಗಿ ಪ್ರತಿ ಹಂತದಲ್ಲೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಥರ್ಮಾ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಬಳಕೆಯೂ ಕಡ್ಡಾಯವಾಗಿದೆ.

ಜೊತೆಗೆ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಬೈಕ್ ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ವಾಹನಗಳ ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ಹಸ್ತಾಂತರಿಸಲಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇನ್ನು ಕರೋನಾ ವೈರಸ್ ವಿರುದ್ಧ ಹೋರಾಟದಲ್ಲೂ ಸರ್ಕಾರದ ಬೆನ್ನಿಗೆ ನಿಂತಿರುವ ಬಜಾಜ್ ಆಟೋ ಕಂಪನಿಯು ಟಾಟಾ ನಂತರ ಅತಿ ಹೆಚ್ಚು ದೇಣಿಗೆ ನೀಡಿದ್ದು, ವೈದ್ಯಕೀಯ ಉಪಕರಣಗಳು ಮತ್ತು ಸುರಕ್ಷಾ ಸಾಧನಗಳ ಖರೀದಿಗಾಗಿ ಬರೋಬ್ಬರಿ ರೂ.100 ಕೋಟಿ ಹಣಕಾಸು ಸಹಾಯವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ನೀಡಿದೆ.


Click it and Unblock the Notifications