ಬಜಾಜ್ ಮೊದಲ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೆ ಬೆಂಗಳೂರಿನಲ್ಲಿ ಅಧಿಕೃತ ಚಾಲನೆ
ಕಳೆದ ಜನವರಿ ಆರಂಭದಲ್ಲಿ ಬಿಡುಗಡೆಗೊಂಡಿದ್ದ ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ವಿತರಣೆಗೆ ನಮ್ಮ ಬೆಂಗಳೂರಿನಲ್ಲಿ ಅಧಿಕೃತವಾಗಿ ಚಾಲನೆ ದೊರೆತಿದ್ದು, ಹೊಸ ಸ್ಕೂಟರ್ ಇದುವರೆಗೆ ಸುಮಾರು 2,500 ಯುನಿಟ್ ಬೇಡಿಕೆ ಪಡೆದುಕೊಂಡಿದೆ.

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಸದ್ಯಕ್ಕೆ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಹೊಸ ಸ್ಕೂಟರ್ ಅನ್ನು ಬಜಾಜ್ ಸಹಭಾಗಿತ್ವದ ಸಂಸ್ಥೆಯಾದ ಕೆಟಿಎಂ ಮಾರಾಟ ಮಳಿಗೆಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿವೆ. ನಿನ್ನೆ ನಡೆದ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯು ಸಹ ಮೆಖ್ರಿ ವೃತ್ತದಲ್ಲಿರುವ ಕೆಟಿಎಂ ಶೋರೂಂನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಬೆಂಗಳೂರಿನ ಬಹುತೇಕ ಕೆಟಿಎಂ ಶೋರೂಂಗಳಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಲಭ್ಯವಿದೆ.

ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಆಯ್ದ ನಗರಗಳಲ್ಲಿ ಮಾತ್ರವೇ ತಮ್ಮ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮಾಡಲು ನಿರ್ಧರಿಸಿದ್ದು, ಬಜಾಜ್ ಕೂಡಾ ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ವಿವಿಧ ನಗರಗಳಿಗೂ ಮಾರಾಟ ಜಾಲವನ್ನು ವಿಸ್ತರಿಸಲು ಯೋಜನೆ ರೂಪಿಸಿದೆ.

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ಅರ್ಬೈನ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದ್ದರೆ ಪ್ರೀಮಿಯಂ ವೆರಿಯೆಂಟ್ ಬೆಲೆಯನ್ನು ರೂ.1.15 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಚೇತಕ್ ಇವಿ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದ್ದರೆ ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಹೊಸ ಸ್ಕೂಟರ್‌ನಲ್ಲಿರುವ ಫೀಚರ್ಸ್
ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದೆ. ಈ ಆ್ಯಪ್‍ನಲ್ಲಿ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್‍ಗಳಿವೆ.

ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ಚೇತಕ್ ಇವಿ ಕಾರ್ಯಕ್ಷಮತೆ
ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಹೊಸ ಬ್ಯಾಟರಿ ಮೇಲೆ ಬಜಾಜ್ ಕಂಪನಿಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿಯನ್ನು ನೀಡಲಿದ್ದು, ಭವಿಷ್ಯದಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಸೌಲಭ್ಯವನ್ನು ಒದಗಿಸುವ ಗುರಿಹೊಂದಿದೆ.

ಇನ್ನು ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಕಡ್ಡಾಯವಾಗಿ ಸರ್ವೀಸ್ ಲಭ್ಯವಾಗಲಿದ್ದು, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಿದೆ. ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.


Click it and Unblock the Notifications