ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್
80ರ ದಶಕದಲ್ಲಿ ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಎಲೆಕ್ಟ್ರಿಕ್ ಅವತಾರದಲ್ಲಿ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು. ಐತಿಹಾಸಿಕ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಮಾಡಿತು.

ಆದರೆ ಆರಂಭಿಕ ಹಂತದಿಂದಲೂ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು. ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಆರಂಭದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ನಂತರದ ದಿನಗಳಲ್ಲಿ ಇತರ ಪ್ರಮುಖ ನಗರಗಳಿಗೆ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ವಿಸ್ತರಿಸಲು ಯೋಜನೆ ಮಾಡಿದ್ದರು.

ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ 21 ಯುನಿಟ್‍ಗಳನ್ನು ಮಾರಾಟ ಮಾಡಿದ್ದರು.ಇನ್ನು ಫೆಬ್ರವರಿ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ 100 ಯುನಿಟ್‍ಗಳನ್ನು ಮಾರಾಟ ಮಾಡಲಾಗಿತ್ತು.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಬಳಿಕ ಮಾರ್ಚ್ ತಿಂಗಳಲ್ಲಿ ಕರೋನಾ ಭೀತಿಯ ನಡುವೆ 91 ಯುನಿಟ್‍ಗಳನ್ನು ಮಾರಾಟ ಮಾಡಲಾಗಿದೆ. ಇನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಸ್ಥಗಿತಗೊಳಿಸಿದ್ದರು.

ಕರೋನಾ ಸೋಂಕಿನಿಂದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು. ಇದರಿಂದ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗದೆ ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.
MOST READ: ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಆದರೆ ಜ್ಯುಲೈ ತಿಂಗಳ ಬಳಿಕ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣಲು ಪ್ರಾರಂಭಿಸಿತ್ತು. ಇನ್ನು 2020ರ ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದೆ. ಈ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 288 ಯುನಿಟ್‌ಗಳು ಮಾರಾಟವಾಗಿವೆ.

ಬಜಾಜ್ ಚೇತಕ್ ಸ್ಕೂಟರ್ ಅನ್ನು ಅರ್ಬೈನ್ ಮತ್ತು ಲೆಕ್ಟಿಕ್ ಪ್ರೀಮಿಯಂ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಚೇತಕ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಇಕೋ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ.

ನಿಧಾನವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುತ್ತಿದೆ. ಇನ್ನು ಹಬ್ಬದ ಸೀಸನ್ ನಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಬಹುದೆಂದು ನಿರೀಕ್ಷಿಸುತ್ತೇವೆ.


Click it and Unblock the Notifications