ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಆಟೋ ಸಂಸ್ಥೆಯು ತನ್ನ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಇದೇ ತಿಂಗಳ 14ರಂದು ಅಧಿಕೃತವಾಗಿ ಬಿಡುಗಡೆಗೊಳಿಸಲಿದೆ. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟ್‍‍ರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.10 ಲಕ್ಷಗಳಾಗಿರಲಿದೆ ಎಂದು ನಿರೀಕ್ಷಿಸಬಹುದು.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಕಂಪನಿಯು ಇತ್ತೀಚೆಗೆ ತನ್ನ ಚೇತಕ್ ಎಲೆಕ್ಟ್ರಿಕ್ ಯಾತ್ರಾ ಅಭಿಯಾನವನ್ನು ನಡೆಸಿತ್ತು. ಭಾರತದ ಸಾಮನ್ಯ ರಸ್ತೆಗಳಲ್ಲಿ ಸ್ಕೂಟರ್‍‍ನ ಸಾಮರ್ಥ್ಯ ಮತ್ತು ವಿಶ್ಬಾಸಾರ್ಹತೆಯನ್ನು ಸಾಬೀತುಪಡಿಸುವ ಸಲುವಾಗಿ 10 ನಗರಗಳಲ್ಲಿ 3,500 ಕಿ.ಮೀ ಸವಾರಿ ಮಾಡಿದ್ದರು. ಕಂಪನಿಯ ಪುಣೆ ಮೂಲದ ಸ್ಥಾವರದಲ್ಲಿ ಈ ಸ್ಕೂಟರ್ ಅನ್ನು ಅಭಿವೃದ್ದಿಪಡಿಲಾಗಿದೆ. ಈ ಸ್ಕೂಟರ್ ಅನ್ನು ಕೆಟಿಎಂ ಡೀಲರ್‍‍ಗಳ ಮೂಲಕವು ಮಾರಾಟ ಮಾಡಲಾಗುತ್ತದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಲಿದೆ. ಮೊದಲ ಹಂತದಲ್ಲಿ ಬೆಂಗಳೂರು, ಪುಣೆ, ಮುಂಬೈ, ದೆಹಲಿ ಮತ್ತು ಚೆನ್ನೈ ನಗರಗಳಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸುತ್ತದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದೆ. ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 85ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 95 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಈ ಸ್ಕೂಟರ್‍‍ನಲ್ಲಿರುವ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದೆ. ಈ ಆ್ಯಪ್‍‍ನಲ್ಲಿ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಮತ್ತು ಅನುಕೂಲಕರ ಫೀಚರ್ಸ್‍‍ಗಳು ಈ ಆಪ್ಲಿಕೇಶನ್‍‍‍ನಲ್ಲಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಇದರೊಂದಿಗೆ ಮೊಬಿಲಿಟಿ ಸಾಫ್ಟ್ ವೇರ್, ಸೆಕ್ಯುರಿಟಿ ವೈಶಿಷ್ಟ್ಯಗಳನ್ನು ಹೊಂದಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ರಾಜಸ್ಥಾನದ ಮೇವಾರದ 13ನೇ ರಾಜ ಮಹಾರಾಣಾ ಪ್ರತಾಪ್ ಹಲ್ದಿಘಾಟ್ ಯುದ್ದದಲ್ಲಿ ಚೇತಕ್ ಅನ್ನೋ ಹೆಸರಿನ ಕುದುರೆಯನ್ನು ಬಳಸಿದ್ದರು. ಈ ಯುದ್ದದಲ್ಲಿ ಮಹಾರಾಣಾ ನೆಚ್ಚಿನ ಕುದುರೆ ಚೇತಕ್ ಸಾವನ್ನಪ್ಪಿತ್ತು. ರಾಜಸ್ಥಾನ ಬಲಿಚಾ ಗ್ರಾಮದಲ್ಲಿ ಈ ಕುದುರೆಯ ಸ್ಮಾರಕವನ್ನು ನಿರ್ಮಿಸಿದ್ದಾರೆ. ಇದೇ ಐತಿಹಾಸಿಕ ಕುದುರೆಯ ಹೆಸರನ್ನು ಬಜಾಜ್‍ನ ಸ್ಕೂಟರ್‍‍ಗೆ ಇಡಲಾಗಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಆಟೋ ಕಂಪನಿಯು 1972 ರಲ್ಲಿ ಚೇತಕ್ ಸ್ಕೂಟರ್‍ ಅನ್ನು ಮೊದಲ ಬಾರಿಗೆ ಬಿಡುಗಡೆಗೊಳಿಸಿತ್ತು ಮತ್ತು ಇದು ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿತು. ಇದರ ಮೂಲ ವಿನ್ಯಾಸವು ವೆಸ್ಪಾ ಸ್ಟ್ರೀಂಟ್ ಸ್ಕೂಟರ್ ಮಾದರಿಯಲ್ಲಿದೆ. ಒಳಾಂಗಣ(ಇಂಟಿರಿಯರ್) ವಿನ್ಯಾಸದಲ್ಲಿ ಬದಲಾವಣೆ ಮಾಡಲಾಗಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ ಲುಕ್ ಅನ್ನು ಹೊಂದಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದ್ದು, ಬಜಾಜ್ ಸಂಸ್ಥೆಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿ ನೀಡಲಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಪ್ರತಿ 15 ಸಾವಿರ ಕಿ.ಮೀ ಗೆ ಕಡ್ಡಾಯವಾಗಿ ಸರ್ವೀಸ್ ಒದಗಿಸಲಿದ್ದು, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಿದೆ. ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ಹೊಂದಿದೆ.

ಜ.14ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಚೇತಕ್ ಭಾರತೀಯರ ಮೆಚ್ಚಿನ ಸಾರಥಿಯಾಗಿತ್ತು. 80ರ ದಶಕದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಮೂಡಿಸಿದ ಸ್ಕೂಟರ್ ಆಗಿದೆ. ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನವನ್ನು ಮೂಡಿಸಲು ಚೇತಕ್ ಜನವರಿ 14ರಂದು ಬಿಡುಗಡೆಯಾಗಲಿದೆ.

More from DriveSpark

Article Published On: Tuesday, January 7, 2020, 19:31 [IST]
English summary
Bajaj Chetak electric scooter launch date 14 Jan - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+