ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್ ಆಟೋ

ಕರೋನಾ ವೈರಸ್ ತಡೆಯಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರಿಂದ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಲಾಕ್‌ಡೌನ್ ವಿನಾಯ್ತಿ ಇದೀಗ ಆಟೋ ಉದ್ಯಮವು ಸಹಜ ಸ್ಥಿತಿಯತ್ತ ಮರುಳುತ್ತಿದೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಒಂದೇ ಬಾರಿಗೆ ಧೀರ್ಘಾವಧಿಯ ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದರಿಂದ ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ವಾಹನಗಳನ್ನು ಹೊರತುಪಡಿಸಿ ಹೊಸ ವಾಹನ ಬಿಡುಗಡೆಯಲ್ಲಿ ತುಸು ವಿಳಂಬವಾಗುತ್ತಿದ್ದು, ಬಜಾಜ್ ಆಟೋ ಕಂಪನಿಯು ಕೂಡಾ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ ಚೇತಕ್ ಇವಿ ಖರೀದಿಗೆ ಆನ್‌ಲೈನ್ ಬುಕ್ಕಿಂಗ್ ಪ್ರಕ್ರಿಯೆಗೆ ಇದೀಗ ಚಾಲನೆ ನೀಡಿದೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಬರೋಬ್ಬರಿ 3 ತಿಂಗಳ ನಂತರ ಚೇತಕ್ ಇವಿ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಾಗಿದ್ದು, ಬುಕ್ಕಿಂಗ್ ಪ್ರಕ್ರಿಯೆ ಪುನಾರಂಭಗೊಂಡರು ಸ್ಕೂಟರ್ ವಿತರಣೆಯು ಇನ್ನು 1 ತಿಂಗಳ ಕಾಲ ತಡವಾಗುವ ಸಾಧ್ಯತೆಗಳಿವೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಸದ್ಯ ವಾಹನಗಳ ಉತ್ಪಾದನೆಗೆ ಅವಕಾಶವಿದ್ದರೂ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿರುವುದರಿಂದ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ಬಜಾಜ್ ಆಟೋ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ತುಸು ಹಿನ್ನಡೆ ಅನುಭವಿಸುತ್ತಿದೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಹೀಗಾಗಿ ಸದ್ಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಸ್ವಿಕರಿಸಲಿರುವ ಬಜಾಜ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನೆಯನ್ನು ಪುನಾರಂಭಿಸಲಿದ್ದು, ಬೇಡಿಕೆ ಅನುಗುಣವಾಗಿ ಉತ್ಪಾದನೆ ಕೈಗೊಳ್ಳಲಿದೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಇನ್ನು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಸದ್ಯಕ್ಕೆ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಹೊಸ ಸ್ಕೂಟರ್ ಅನ್ನು ಬಜಾಜ್ ಸಹಭಾಗಿತ್ವದ ಸಂಸ್ಥೆಯಾದ ಕೆಟಿಎಂ ಮಾರಾಟ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಆಯ್ದ ನಗರಗಳಲ್ಲಿ ಮಾತ್ರವೇ ತಮ್ಮ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮಾಡಲು ನಿರ್ಧರಿಸಿದ್ದು, ಬಜಾಜ್ ಕೂಡಾ ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ವಿವಿಧ ನಗರಗಳಿಗೂ ಮಾರಾಟ ಜಾಲವನ್ನು ವಿಸ್ತರಿಸಲು ಯೋಜನೆ ರೂಪಿಸಿದೆ.

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ಅರ್ಬೈನ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದ್ದರೆ ಪ್ರೀಮಿಯಂ ವೆರಿಯೆಂಟ್ ಬೆಲೆಯನ್ನು ರೂ.1.15 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಚೇತಕ್ ಇವಿ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದ್ದರೆ ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

Most Read Articles

Kannada
English summary
Bajaj Chetak electric scooter bookings resume online details. Read in Kannada.
Story first published: Monday, June 15, 2020, 21:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X