Just In
Don't Miss!
- News
Video: ದೆಹಲಿಯಲ್ಲಿ ರೈತನ ಸಾವಿನ ಭಯಾನಕ ದೃಶ್ಯ!
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್
80ರ ದಶಕದಲ್ಲಿ ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಅನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು. ಐಕಾನಿಕ್ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಮಾಡಿತು.

ಆದರೆ ಆರಂಭಿಕ ಹಂತದಿಂದಲೂ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು. ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಆರಂಭದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ನಂತರದ ದಿನಗಳಲ್ಲಿ ಇತರ ಪ್ರಮುಖ ನಗರಗಳಿಗೆ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ವಿಸ್ತರಿಸಲು ಯೋಜನೆ ಮಾಡಿದ್ದರು.

ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ 21 ಯುನಿಟ್ಗಳನ್ನು ಮಾರಾಟ ಮಾಡಿದ್ದರು.ಇನ್ನು ಫೆಬ್ರವರಿ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ 100 ಯುನಿಟ್ಗಳನ್ನು ಮಾರಾಟ ಮಾಡಲಾಗಿತ್ತು.
MOST READ: ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಬಳಿಕ ಮಾರ್ಚ್ ತಿಂಗಳಲ್ಲಿ ಕರೋನಾ ಭೀತಿಯ ನಡುವೆ 91 ಯುನಿಟ್ಗಳನ್ನು ಮಾರಾಟ ಮಾಡಲಾಗಿದೆ. ಇನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಸ್ಥಗಿತಗೊಳಿಸಿದ್ದರು.

ಕರೋನಾ ಸೋಂಕಿನಿಂದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು. ಇದರಿಂದ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗದೆ ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್ಟಾರ್ಕ್ 125 ಸ್ಕೂಟರ್

ಆದರೆ ಜ್ಯುಲೈ ತಿಂಗಳ ಬಳಿಕ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣಲು ಪ್ರಾರಂಭಿಸಿತ್ತು. ಇನ್ನು 2020ರ ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 288 ಯುನಿಟ್ಗಳು ಮಾರಾಟವಾಗಿವೆ.

ಇನ್ನು ಆಕ್ಟೋಬರ್ ತಿಂಗಳಲ್ಲಿ ಸಾಲು ಹಬ್ಬಗಳಿದ್ದರೂ ಮಾರಾಟದಲ್ಲಿ ದೊಡ್ಡ ಮಟ್ಟದ ಯಶಸ್ವಿಯನ್ನು ಕಂಡಿಲ್ಲ. ಆಕ್ಟೋಬರ್ ತಿಂಗಳಲ್ಲಿ 258 ಯುನಿಟ್ಗಳು ಮಾರಾಟವಾಗಿವೆ. ಇನ್ನು ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಬಿಡುಗಡೆಗೊಂಡು ಇಲ್ಲಿಯವರೆಗೆ 1,1070 ಯುನಿಟ್ಗಳನ್ನು ಮಾರಾಟಗೊಳಿಸಿವೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಈ ಮೂಲಕ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಒಂದು ಸಾವಿರ ಯುನಿಟ್ಗಳ ಮಾರಾಟದ ಗಡಿಯನ್ನು ದಾಟಿ ಹೊಸ ಮೈಲುಗಲ್ಲನ್ನು ಸಾಧಿಸಿದೆ. ಈ ಬಜಾಜ್ ಚೇತಕ್ ಸ್ಕೂಟರ್ ಅನ್ನು ಅರ್ಬೈನ್ ಮತ್ತು ಲೆಕ್ಟಿಕ್ ಪ್ರೀಮಿಯಂ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

ನಿಧಾನವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುತ್ತಿದೆ. ಆದರೆ ಮಾರಾಟದಲ್ಲಿ ಒಂದು ಸಾವಿರ ಗಡಿಯನ್ನು ದಾಟಲು ಹಲವು ತಿಂಗಳನ್ನು ತೆಗೆದುಕೊಂಡಿದೆ.