Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾದ ಮೊದಲ ಬಾರಿಗೆ 1 ಸಾವಿರ ಯುನಿಟ್ ಮಾರಾಟ ಗುರಿಸಾಧಿಸಿದ ಚೇತಕ್ ಇವಿ ಸ್ಕೂಟರ್
ಕರೋನಾ ವೈರಸ್ ಪರಿಣಾಮ ಸ್ವಂತ ವಾಹನಗಳ ಬಳಕೆಯು ಹೆಚ್ಚುತ್ತಿದ್ದು, ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ. ಬಜೆಟ್ ಬೆಲೆಯಲ್ಲಿ ಹಲವಾರು ಆಕರ್ಷಕ ಫೀಚರ್ಸ್ ಹೊಂದಿರುವ ಚೇತಕ್ ಇವಿ ಸ್ಕೂಟರ್ ಮಾದರಿಯು ಬಿಡುಗಡೆಯ ನಂತರ ಮೊದಲ ಬಾರಿಗೆ ಒಂದು ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ.

ಚೇತಕ್ ಇವಿ ಸ್ಕೂಟರ್ ಮಾದರಿಯು ಕಳೆದ ಫೆಬ್ರುವರಿಯಲ್ಲೇ ಮಾರಾಟ ಆರಂಭಗೊಂಡಿದ್ದು, ಬಜಾಜ್ ಕಂಪನಿಯು ಹೊಸ ಸ್ಕೂಟರ್ ಮಾದರಿಯನ್ನು ತನ್ನ ಸಹಭಾಗೀತ್ವದ ಕಂಪನಿ ಕೆಟಿಎಂ ಡೀಲರ್ಸ್‌ಗಳಲ್ಲಿ ಮಾರಾಟ ಮಾಡುತ್ತಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯಕ್ಕೆ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಶೀಘ್ರದಲ್ಲೇ ವಿವಿಧ ನಗರಗಳಲ್ಲಿ ಮಾರಾಟ ಪ್ರಕ್ರಿಯೆಯನ್ನು ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.

ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಆಯ್ದ ನಗರಗಳಲ್ಲಿ ಮಾತ್ರವೇ ತಮ್ಮ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮಾಡುತ್ತಿದ್ದು, ಬಜಾಜ್ ಕೂಡಾ ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ವಿವಿಧ ನಗರಗಳಿಗೂ ಮಾರಾಟ ಜಾಲವನ್ನು ವಿಸ್ತರಿಸುವ ಯೋಜನೆಯಲ್ಲಿದೆ.

ಇನ್ನು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ಅರ್ಬೈನ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದ್ದರೆ ಪ್ರೀಮಿಯಂ ವೆರಿಯೆಂಟ್ ಬೆಲೆಯನ್ನು ರೂ.1.15 ಲಕ್ಷ ಬೆಲೆ ಪಡೆದುಕೊಂಡಿದೆ.

ಚೇತಕ್ ಇವಿ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದ್ದರೆ ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಹೊಸ ಬ್ಯಾಟರಿ ಮೇಲೆ ಬಜಾಜ್ ಕಂಪನಿಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿಯನ್ನು ನೀಡಲಿದ್ದು, ಭವಿಷ್ಯದಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಸೌಲಭ್ಯವನ್ನು ಒದಗಿಸುವ ಗುರಿಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.