30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

80ರ ದಶಕದಲ್ಲಿ ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಅನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು. ಐಕಾನಿಕ್ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಆಟೋ ಮಾಡಿತು.

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಆದರೆ ಆರಂಭಿಕ ಹಂತದಿಂದಲೂ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು. ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಬಜಾಜ್ ಆಟೋ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಚೇತಕ್ ಎಲೆಕ್ಟ್ರಿಕ್ ಮಾರಾಟ ಜಾಲವನ್ನು ಸ್ತರಿಸುವ ಬಗ್ಗೆ ಯೋಚಿಸುತ್ತಿದೆ. 2022ರ ಮಾರ್ಚ್ ವೇಳೆಗೆ ದೇಶಾದ್ಯಂತ 30 ಹೊಸ ನಗರಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲು ಬಜಾಜ್ ಆಟೋ ಕಂಪನಿಯು ಗಮನಹರಿಸಿದ್ದಾರೆ ಎಂದು ವರದಿಯಾಗಿದೆ.

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ 21 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಿದ್ದರು.ಇನ್ನು ಫೆಬ್ರವರಿ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ 100 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಲಾಗಿತ್ತು.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಬಳಿಕ ಮಾರ್ಚ್ ತಿಂಗಳಲ್ಲಿ ಕರೋನಾ ಭೀತಿಯ ನಡುವೆ 91 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಲಾಗಿದೆ. ಇನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಸ್ಥಗಿತಗೊಳಿಸಿದ್ದರು.

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಕರೋನಾ ಸೋಂಕಿನಿಂದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು. ಇದರಿಂದ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗದೆ ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಆದರೆ ಜ್ಯುಲೈ ತಿಂಗಳ ಬಳಿಕ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣಲು ಪ್ರಾರಂಭಿಸಿತ್ತು. ಇನ್ನು 2020ರ ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 288 ಯುನಿಟ್‌ಗಳು ಮಾರಾಟವಾಗಿವೆ.

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಇನ್ನು ಆಕ್ಟೋಬರ್ ತಿಂಗಳಲ್ಲಿ ಸಾಲು ಹಬ್ಬಗಳಿದ್ದರೂ ಮಾರಾಟದಲ್ಲಿ ದೊಡ್ಡ ಮಟ್ಟದ ಯಶಸ್ವಿಯನ್ನು ಕಂಡಿಲ್ಲ. ಆಕ್ಟೋಬರ್ ತಿಂಗಳಲ್ಲಿ 258 ಯುನಿಟ್‌ಗಳು ಮಾರಾಟವಾಗಿತ್ತು. ಇನ್ನು ಇಲ್ಲಿಯವರೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಒಂದು ಸಾವಿರ ಯುನಿಟ್‌ಗಳ ಮಾರಾಟದ ಗಡಿಯನ್ನು ದಾಟಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಬಜಾಜ್ ಚೇತಕ್ ಸ್ಕೂಟರ್ ಅನ್ನು ಅರ್ಬೈನ್ ಮತ್ತು ಲೆಕ್ಟಿಕ್ ಪ್ರೀಮಿಯಂ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಚೇತಕ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ.

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ.

30 ಹೊಸ ನಗರಗಳಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲ ವಿಸ್ತರಿಸಲಿದೆ ಬಜಾಜ್ ಆಟೋ

ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

Most Read Articles

Kannada
English summary
Bajaj Chetak Electric Scooter Launch In 30 New Cities By March 2022. Read In Kannada.
Story first published: Wednesday, December 30, 2020, 12:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X