Just In
- 6 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 7 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 8 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 8 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
100ರ ಗಡಿ ದಾಟಿದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ
ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳ ಉತ್ಪಾದನಾ ಸಂಸ್ಥೆಯ ಪಟ್ಟಿಯಲ್ಲಿ ನಾಲ್ಕನೇಯ ಸ್ಥಾನವನ್ನು ಬಜಾಜ್ ಸಂಸ್ಥೆಯು ಪಡೆದುಕೊಂಡಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯ ಒಟ್ಟು 1,46,876 ದ್ವಿಚಕ್ರ ವಾಹನಗಳು ಮಾರಾಟವಾಗಿವೆ.
ಬಜಾಜ್ ಆಟೋ ಕಂಪನಿಯ ದ್ವಿಚಕ್ರ ಮಾರಾಟದಲ್ಲಿ ಪಲ್ಸರ್ 150 ಬೈಕಿನ ಕೊಡುಗೆ ಹೆಚ್ಚಿದೆ. ಬಜಾಜ್ ಕಂಪನಿಯು ಇತ್ತೀಚೆಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು. ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ 21 ಯುನಿಟ್ಗಳನ್ನು ಮಾರಾಟ ಮಾಡಿದ್ದರು.ಇನ್ನೂ ಕಳೆದ ಫೆಬ್ರವರಿ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ 100 ಯುನಿಟ್ಗಳನ್ನು ಮಾರಾಟ ಮಾಡಲಾಗಿದೆ. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ ಒಟ್ಟು ಮಾರಾಟವು 100ರ ಗಡಿ ದಾಡಿದೆ.
ಬಜಾಜ್ ಚೇತಕ್ ಸ್ಕೂಟರ್ ಅನ್ನುಅರ್ಬೈನ್ ಮತ್ತು ಲೆಕ್ಟಿಕ್ ಪ್ರೀಮಿಯಂ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಬಜಾಜ್ ಚೇತಕ್ ಎಲೆಕ್ಟ್ರಿಕ್ ಅರ್ಬೈನ್ ಸ್ಕೂಟ್ರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1 ಲಕ್ಷಗಳಾದರೆ, ಚೇತಕ್ ಎಲೆಕ್ಟಿಕ್ ಪ್ರೀಮಿಯಂ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.1.15 ಲಕ್ಷಗಳಾಗಿದೆ.
ಚೇತಕ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ.
ಇಕೋ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ.
ಈ ಸ್ಕೂಟರ್ನಲ್ಲಿರುವ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದೆ. ಈ ಆ್ಯಪ್ನಲ್ಲಿ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಮತ್ತು ಅನುಕೂಲಕರ ಫೀಚರ್ಸ್ಗಳಿವೆ.
ಸ್ಕೂಟರ್ನಲ್ಲಿ ರೌಂಡ್ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಇದರೊಂದಿಗೆ ಮೊಬಿಲಿಟಿ ಸಾಫ್ಟ್ ವೇರ್, ಸುರಕ್ಷತಾ ಫೀಚರ್ಗಳನ್ನು ಹೊಂದಿದೆ.
ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಾಣುತ್ತದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ. ಬಜಾಜ್ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರಿನ ಮೇಲೆ 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿ ನೀಡಲಿದೆ.
ಜೊತೆಗೆ ಪ್ರತಿ 15 ಸಾವಿರ ಕಿ.ಮೀ ಗೆ ಕಡ್ಡಾಯವಾಗಿ ಸರ್ವೀಸ್ ಒದಗಿಸಲಿದ್ದು, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್ಡೇಟ್ ಮಾಡಲಿದೆ. ಹೊಸ ಸ್ಕೂಟರ್ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.