ಬಿಡುಗಡೆಯಾಯ್ತು ಬಜಾಜ್ ಡೋಮಿನಾರ್ 250 ಬೈಕಿನ ಟೀಸರ್ ವೀಡಿಯೋ
ಬಜಾಜ್ ಆಟೋ ಕಂಪನಿಯು ತನ್ನ ಹೊಸ ಡೋಮಿನಾರ್ 250 ಬೈಕಿನ ಟೀಸರ್ ವೀಡಿಯೋವನ್ನು ಬಿಡುಗಡೆಗೊಳಿಸಿದೆ. ಡೋಮಿನಾರ್ 250 ಬೈಕನ್ನು ಬಜಾಜ್ ಆಟೋ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಬಜಾಜ್ ಡೋಮಿನಾರ್ 250 ಬೈಕ್ ಅಧಿಕೃತವಾಗಿ ಬಿಡುಗಡೆಯಾಗುವ ಮೊದಲು ಡೀಲರ್‍ಗಳ ಬಳಿ ತಲುಪಲು ಪ್ರಾರಂಭವಾಗಿದೆ. ಬಜಾಜ್ ಆಟೋ ಕಂಪನಿಯು ಅಧಿಕೃತವಾಗಿ ಬಿಡುಗಡೆಗೊಳಿಸಿದ ಟೀಸರ್‍ನಲ್ಲಿ ಶೀಘ್ರದಲ್ಲೇ ಪರಿಚಯಿಸಲಿದೆ ಎಂಬುದನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಮಖ ಮಾಹಿತಿಗಳಿಲ್ಲ. ಹೊಸ ಬಜಾಜ್ ಡೋಮಿನಾರ್ 250 ಬೈಕ್ ತನ್ನದೆ ಸರಣಿಯ ಡೋಮಿನಾರ್ 400 ಬೈಕಿನ ಮಾದರಿಯಲ್ಲಿದೆ.

ಡೀಲರ್ ಬಳಿ ತಲುಪಿರುವ ಹೊಸ ಡೋಮಿನಾರ್ 250 ಬೈಕ್ 'ಡಿ250' ಬ್ಯಾಡ್ಜ್ ನೊಂದಿಗೆ ಕೆಂಪು ಬಣ್ಣವನ್ನು ಹೊಂದಿದೆ. ಬಜಾಜ್ ಡೋಮಿನಾರ್ 250 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಹೊಸ ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಕೆಟಿಎಂ 250 ಡ್ಯೂಕ್‍ನಲ್ಲಿರುವಂತಹ 249 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ.

ಆದರೆ ಈ ಎಂಜಿನ್ ಕೆಟಿಎಂ ಡ್ಯೂಕ್ 250 ಬೈಕಿನ ಎಂಜಿನ್‍ಗಿಂತ ಸ್ವಲ್ಪ ಕಡಿಮೆ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳನ್ನು ಉತ್ಪಾದಿಸುವ ನಿರೀಕ್ಷಿಯಿದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಿದೆ.

ಸ್ಪೈ ಚಿತ್ರದಲ್ಲಿ ಡೋಮಿನಾರ್ 400 ಮತ್ತು ಹೊಸ ಡೋಮಿನಾರ್ 250 ನಡುವಿನ ಕೆಲವು ವ್ಯತ್ಯಾಸಗಳು ಬಹಿರಂಗವಾಗಿದೆ. ಇದು ಕಡಿಮೆ ವೆಚ್ಚದ ಸ್ವಿಂಗಾರ್ಮ್ ಮತ್ತು ವಿಭಿನ್ನ ಅಲಾಯ್ ವ್ಹೀಲ್ ವಿನ್ಯಾಸವನ್ನು ಹೊಂದಿದೆ. ಡೋಮಿನಾರ್ 400 ಬೈಕಿಗೆ ಹೋಲಿಸಿದರೆ ಹೊಸ ಬಜಾಜ್ ಡೋಮಿನಾರ್ 250 ಬೈಕಿನ ಟಯರ್ ಪ್ರೊಫೈಲ್‍ಗಳು ಸಹ ಭಿನ್ನವಾಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

ಬಜಾಜ್ 250 ಸಿಸಿ ಗಿಂತ ಹೆಚ್ಚಿನ ಎಲ್ಲಾ ಬೈಕ್‍ಗಳಿಗೆ ಡೋಮಿನಾರ್ ಎಂಬ ನೇಮ್‍ಪ್ಲೇಟ್ ಅನ್ನು ಬಳಸುತ್ತಾರೆ. ಇದಗಿಂತ ಕೆಳಗಿನ ಸಿಸಿಯ ಮಾದರಿಗಳಿಗೆ ಪಲ್ಸರ್ ಸರಣಿಯಲ್ಲಿ ಸೇರುತ್ತದೆ.

ಹೊಸ ಬಜಾಜ್ ಡೋಮಿನಾರ್ 250 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.50 ಲಕ್ಷದಿಂದ ರೂ.1.60 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸಲಾಗಿದೆ. ಹೊಸ ಡೋಮಿನಾರ್ 250 ಬೈಕಿನ ಬುಕ್ಕಿಂಗ್ ಅನ್ನು ಶೀಘ್ರದಲ್ಲೇ ಆರಂಭಿಸಬಹುದು.

ಬಜಾಜ್ ಒಂದೆರಡು ವರ್ಷಗಳ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಡೊಮಿನಾರ್ 400 ಅನ್ನು ಬಿಡುಗಡೆ ಮಾಡಿದರು. ಆದರೆ 373 ಸಿಸಿಯ ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ನಿರೀಕ್ಷಿಸಿದ ಪರಿಣಾಮವನ್ನು ಸೃಷ್ಟಿಸುವಲ್ಲಿ ವಿಫಲವಾಗಿದೆ. ಆದರೆ ಡೋಮಿನಾರ್ 250 ಬೈಕ್ ಭಾರತೀಯ ಗ್ರಾಹಕರನ್ನು ಸೆಳೆಯಬಹುದು.

ಹೊಸ ಬಜಾಜ್ ಡೋಮಿನಾರ್ 250 ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಕೆಟಿಎಂ 250 ಡ್ಯೂಕ್, ಯಮಹಾ ಎಫ್‍ಝಡ್ 25 ಮತ್ತು ಸುಜುಕಿ ಜಿಕ್ಸರ್ 250 ಬೈಕ್‍ಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications