ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಜನವರಿ 14ರಂದು ಬಿಡುಗಡೆಯಾಗಿರುವ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ವಿತರಣೆಯು ಇದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಇದುವರೆಗೆ 2 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಮೊದಲ ಹಂತದಲ್ಲಿ ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರವೇ ಹೊಸ ಸ್ಕೂಟರ್ ಖರೀದಿಗೆ ಲಭ್ಯವಾಗಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಸ್ಕೂಟರ್ ಮಾರಾಟವು ಪ್ರಮುಖ ನಗರಗಳಿಗೂ ವಿಸ್ತರಣೆಯಾಗಲಿದೆ. ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಆಯ್ದ ನಗರಗಳಲ್ಲಿ ಮಾತ್ರವೇ ತಮ್ಮ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮಾಡಲು ನಿರ್ಧರಿಸಿದ್ದು, ಚಾರ್ಜಿಂಗ್ ಸ್ಟೆಷನ್‌ಗಳು ಹೆಚ್ಚಿದಂತೆ ಇವಿ ಮಾರಾಟವನ್ನು ವಿಸ್ತರಣೆ ಮಾಡಲು ಯೋಜನೆ ರೂಪಿಸಿವೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಇದೀಗ ಬಜಾಜ್ ಆಟೋ ಕೂಡಾ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರವೇ ಮಾರಾಟ ಮಾಡಲಿದ್ದು, ಅಂಗಸಂಸ್ಥೆಯಾದ ಕೆಟಿಎಂ ಶೋರೂಂಗಳಲ್ಲಿ ಹೊಸ ಸ್ಕೂಟರ್ ಖರೀದಿಗೆ ಅವಕಾಶ ಕಲ್ಪಿಸಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ಅರ್ಬೈನ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದ್ದರೆ ಪ್ರೀಮಿಯಂ ವೆರಿಯೆಂಟ್ ಬೆಲೆಯನ್ನು ರೂ.1.15 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಇವಿ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದೆ. ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಕೂಡಾ ಹೊಂದಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‍ ಖರೀದಿಸುವ ಗ್ರಾಹಕರು ರೂ.2 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಮಾಡಬಹುದಾಗಿದ್ದು, ಫೆಬ್ರುವರಿ ಕೊನೆಯಲ್ಲಿ ಹೊಸ ಸ್ಕೂಟರ್ ವಿತರಣೆಯು ಅಧಿಕೃತವಾಗಿ ಆರಂಭವಾಗಲಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಸ್ಕೂಟರ್‌ನಲ್ಲಿರುವ ಫೀಚರ್ಸ್

ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದೆ. ಈ ಆ್ಯಪ್‍‍ನಲ್ಲಿ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್‍‍ಗಳಿವೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಇದರೊಂದಿಗೆ ಮೊಬಿಲಿಟಿ ಸಾಫ್ಟ್ ವೇರ್ ಹೊಂದಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಇವಿ ಕಾರ್ಯಕ್ಷಮತೆ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍‍ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸಲಿದ್ದು, ಹೊಸ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ. ಹೊಸ ಬ್ಯಾಟರಿ ಮೇಲೆ ಬಜಾಜ್ ಕಂಪನಿಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿ ನೀಡಲಿದೆ.

ವಿತರಣೆಗೂ ಮುನ್ನ 2 ಸಾವಿರ ಬುಕ್ಕಿಂಗ್ ಪಡೆದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಪ್ರತಿ 15 ಸಾವಿರ ಕಿ.ಮೀ ಗೆ ಕಡ್ಡಾಯವಾಗಿ ಸರ್ವೀಸ್ ಒದಗಿಸಲಿದ್ದು, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಿದೆ. ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.

Most Read Articles

Kannada
English summary
Bajaj Auto gets 2,000 bookings for the Chetak Electric scooter. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X