Just In
- 21 min ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 40 min ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 1 hr ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 1 hr ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಯ್ತು ಬಿಎಸ್-6 ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಬೈಕ್
ಬಜಾಜ್ ಆಟೋ ಕಂಪನಿಯು ಸದ್ದಿಲ್ಲದೆ ಬಿಎಸ್-6 ಪ್ಲಾಟಿನಾ 110 ಹೆಚ್ ಗೇರ್ ಬೈಕನ್ನು ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಬಿಎಸ್-6 ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.59,802 ಗಳಾಗಿದೆ.
ಬಿಎಸ್-6 ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಎಂಟ್ರಿ ಲೆವೆಲ್ ಬೈಕ್ ಆಗಿದೆ. ಈ ಹೊಸ ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಬೈಕ್ ಅನ್ನು ಒಂದೇ ರೂಪಾಂತರದಲ್ಲಿ ಬಿಡುಗಡೆಗೊಳಿಸಲಾಗಿದೆ. ಬಿಎಸ್-6 ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಬೈಕಿನಲ್ಲಿ ಹಿಂದಿನ ಮಾದರಿಯಂತೆ 115.45 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ.
ಈ ಎಂಜಿನ್ 7000 ಆರ್ಪಿಎಂನಲ್ಲಿ 8 ಬಿಹೆಚ್ಪಿ ಮತ್ತು 5000 ಆರ್ಪಿಎಂನಲ್ಲಿ 9.81 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಪ್ಲಾಟಿನಾ 110 ಹೆಚ್ ಗೇರ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸರಿರುವುದರಿಂದ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಇದರಿಂದ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ.
ಹೊಸ ಬಜಾಜ್ ಪ್ಲಾಟಿನಾ ಹೆಚ್ ಗೇರ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಹೊರತುಪಡಿಸಿ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಹೊಸ ಪ್ಲಾಟಿನಾ ಹೆಚ್ ಗೇರ್ ಬೈಕ್ 2006 ಎಂಎಂ ಉದ್ದ, 713 ಅಗಲ ಮತ್ತು 1100ಎಂ ಎತ್ತರವನ್ನು ಹೊಂದಿದೆ. ಈ ಬೈಕ್ ಕೇವಲ 122 ಕೆಜಿ ತೂಕವನ್ನು ಹೊಂದಿದೆ. ಈ ಹೊಸ ಬಜಾಜ್ ಪ್ಲಾಟಿನಾ ಹೆಚ್ ಗೇರ್ ಬೈಕ್ 804 ಎಂಎಂ ಎತ್ತರವನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್
ಬಿಎಸ್-6 ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಬೈಕ್ ಹಿಂದಿನ ಮಾದರಿಯಂತೆ ಅದೇ ವಿನ್ಯಾಸ ಮತ್ತು ಫೀಚರ್ ಗಳನ್ನು ಹೊಂದಿದೆ. ಈ ಬೈಕ್ ಅದೇ ರೀತಿಯ ಬಾಡಿ ಗ್ರಾಫಿಕ್ಸ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಎಕ್ಸಾಸ್ಟ್, ಲಾಂಗ್ ಫ್ರಂಟ್ ಮತ್ತು ರೇರ್ ಪೆಂಡರ್ಗಳು, ಅಲಾಯ್ ವ್ಹೀಲ್ ಮತ್ತು ಗೇರ್ ಪೊಸಿಷನ್ ಇಂಡಿಕೇಟರ್ ಅನ್ನು ಹೊಂದಿದೆ. ಇದರೊಂದಿಗೆ ಈ ಬೈಕಿನಲ್ಲಿ ಹ್ಯಾಲೊಜೆನ್ ಹೆಡ್ ಲ್ಯಾಂಪ್ ನೊಂದಿಗೆ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
ಈ ಬೈಕಿನಲ್ಲಿ ಸಿಂಗಲ್ ಪೀಸ್ ಸೀಟ್ ಮತ್ತು 11-ಲೀಟರ್ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಹೊಸ ಬಜಾಜ್ ಪ್ಲಾಟಿನಾ 110 ಹೆಚ್ ಗೇರ್ ಬೈಕ್ ಕೆಂಪು ಮತ್ತು ಕಪ್ಪು ಬಣ್ಣಗಳ ಆಯ್ಕೆಯನ್ನು ಹೊಂದಿದೆ.
MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು
ಹೊಸ ಬಜಾಜ್ ಪ್ಲಾಟಿನಾ ಹೆಚ್ ಗೇರ್ 110 ಬೈಕಿನಲ್ಲಿ ಸಸ್ಪೆಂಷನ್ ಸೆಟಪ್ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಡ್ಯುಯಲ್-ಸ್ಪ್ರಿಂಗ್ ಸೆಟಪ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 110 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಬಿಎಸ್ (ಕಾಂಬಿ-ಬ್ರೇಕಿಂಗ್ ಸಿಸ್ಟಂ) ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ.
ಹೊಸ ಬಜಾಜ್ ಪ್ಲಾಟಿನಾ ಹೆಚ್ ಗೇರ್ 110 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಹೊಸ ಬಜಾಜ್ ಪ್ಲಾಟಿನಾ ಹೆಚ್ ಗೇರ್ 110 ಬೈಕಿಗಾಗಿ ಆನ್ಲೈನ್ನಲ್ಲಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ.