ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಬಜಾಜ್ ಆಟೋ ಕಂಪನಿಯು ಬಿಎಸ್-6 ಪಲ್ಸರ್ 125 ನಿಯೊನ್ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಹೊಸ ಬಜಾಜ್ ಪಲ್ಸರ್ 125 ನಿಯೊನ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.69.997 ಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಪಲ್ಸರ್ ಸರಣಿಯ 125 ನಿಯೊನ್ ಎಂಟ್ರಿ ಲೆವೆಲ್ ಬೈಕನ್ನು ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಪಲ್ಸರ್ 125 ಡ್ರಮ್ ರೂಪಾಂತರದ ಬೆಲೆಯನ್ನು ಸುಮಾರು ರೂ.6,300 ಗಳವರೆಗೆ ಹೆಚ್ಚಿಸಿದೆ. ಇನ್ನು ಪಲ್ಸರ್ 125 ಟಾಪ್-ಸ್ಪೆಕ್ 'ಡಿಸ್ಕ್' ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.74,118 ಗಳಾಗಿದೆ. ಹಿಂದಿನ ಡಿಸ್ಕ್ ರೂಪಾಂತರದ ಬೆಲೆಯನ್ನು ಹೋಲಿಸಿದರೆ ರೂ.7,500 ಗಳವರೆಗೆ ಹೆಚ್ಚಿಸಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಬಜಾಜ್ ಪಲ್ಸರ್ 125 ನಿಯೊನ್ ಬೈಕಿನಲ್ಲಿ 124 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಎಂಜಿನ್ 12 ಬಿಹೆಚ್‍ಪಿ ಪವರ್ ಮತ್ತು 11 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಹಿಂದಿನ ಮಾದರಿಯಂತೆ ಪವರ್ ಮತ್ತು ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು -ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಬಿಎಸ್-6 ನವೀಕರಣದ ಹೊರತಾಗಿ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗುತ್ತದೆ. ಈ ಬೈಕ್ 140 ಕಿಲೋಗ್ರಾಂಗಳಷ್ಟು ತೂಕವಿದೆ. ಈ ಸರಣಿಯಲ್ಲಿ ಹೆಚ್ಚು ತೂಕ ವಿರುವ ಬೈಕ್ ಆಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಹೊಸ ಬಜಾಜ್ ಪಲ್ಸರ್ 125 ಬೈಕಿನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸಿಂಗಲ್ ಪೀಸ್ ಸೀಟ್, ಅಲಾಯ್ ವ್ಹೀಲ್, ಟೆಲಿಸ್ಕೋಪಿಕ್ ಸಸ್ಪೆಂಷನ್ ಮತ್ತು ಬೈಕಿನ ಹಿಂಭಾಗದಲ್ಲಿ ಟ್ವಿನ್ ಗ್ಯಾಸ್ ಚಾರ್ಜ್ಡ್ ಶಾಕ್ ಅಬ್ಸಾರ್ಬರ್, ಹ್ಯಾಲೊಜೆನ್ ಹೆಡ್‍‍ಲೈಟ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಹೊಸ ಬಜಾಜ್ ಪಲ್ಸರ್ 125 ನಿಯೊನ್ ಬೈಕಿನ ಹಿಂಭಾಗದಲ್ಲಿ ಕೌಲ್‌ನಲ್ಲಿ 3 ಡಿ ರೂಪಾಂತರ ಲೋಗೊ, ಅಲಾಯ್ ವ್ಹೀಲ್, ಪಲ್ಸರ್ ಲೋಗೊ ಮತ್ತು ಗ್ರ್ಯಾಬ್ ರೈಲ್ ಅನ್ನು ಹೂಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಕಳೆದ ಮಾರ್ಚ್ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು ದ್ವಿಚಕ್ರ ವಾಹನಗಳ ಒಟ್ಟು 98,412 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಿದೆ.ಇನ್ನು ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ದ್ವಿಚಕ್ರ ವಾಹನಗಳ 2.20 ಲಕ್ಷ ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಿದರು. ಕಳೆದ ವರ್ಷದ ಮಾರ್ಚ್ ತಿಂಗಳ ಮಾರಾಟವನ್ನು ಹೋಲಿಸಿದರೆ 55% ಕುಸಿತವನ್ನು ಕಂಡಿದೆ.

MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಬಜಾಜ್ ಕಂಪನಿಯು ತನ್ನ ಪಲ್ಸರ್ ಸರಣಿಯ 150, 180 ಎಫ್, ಎನ್ಎಸ್ 160, ಎನ್ಎಸ್ 200, 220 ಎಫ್ ಮತ್ತು ಆರ್‍ಎಸ್ 200 ಬೈಕುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗಿದೆ. ಇದರೊಂದಿದೆ ಬಜಾಜ್ ಕಂಪನಿಯು ಡೋಮಿನಾರ್ ಮತ್ತು ಅವೆಂಜರ್ ಬೈಕುಗಳನ್ನು ಕೂಡ ಬಿಡುಗಡೆಗೊಳಿಸಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ 125 ನಿಯೊನ್ ಬೈಕ್

ಬಜಾಜ್ ಪಲ್ಸರ್ ಸರಣಿಯ ಬೈಕ್‍‍ಗಳ ಜನಪ್ರಿಯತೆ ಕಳೆದುಕೊಂಡಿಲ್ಲ. ಹೆಚ್ಚಿನ ಯುವಕರಿಗೆ ಇಂದಿಗೂ ಪಲ್ಸರ್ ಬೈಕ್‍‍ಗಳ ಕ್ರೇಜ್ ಇದೆ. ಹೊಸ ಪಲ್ಸರ್ 125 ನಿಯೊನ್ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 125 ಮತ್ತು ಆರ್‍‍ಸಿ 125 ಬೈಕ್‍ಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
BS6 Bajaj Pulsar 125 Neon Launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X