ಬಿಎಸ್-6 ಪಲ್ಸರ್ 150 ಬೈಕ್ ಬೆಲೆ ಹೆಚ್ಚಿಸಿದ ಬಜಾಜ್ ಆಟೋ
ಬಜಾಜ್ ಆಟೋ ಕಂಪನಿಯು ಈಗಾಗಲೇ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಹೊಸ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಇದೀಗ ಹೊಸ ಬೈಕ್‌ಗಳ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಏರಿಕೆ ಮಾಡಿದೆ.

ಬಜಾಜ್ ಕಂಪನಿಯು ಬಿಡುಗಡೆ ಮಾಡಿರುವ ಹೊಸ ದರ ಪಟ್ಟಿಯಲ್ಲಿ ಪಲ್ಸರ್ 150 ಬೈಕ್ ಮಾದರಿಯು ಸಹ ದುಬಾರಿ ಬೆಲೆ ಏರಿಕೆ ಪಡೆದುಕೊಂಡಿದ್ದು, ಹೊಸ ಬೈಕ್ ಬೆಲೆಯಲ್ಲಿ ಇದು ಎರಡನೇ ಬಾರಿಗೆ ಹೆಚ್ಚಳ ಮಾಡಲಾದ ಬೆಲೆಯಾಗಿದೆ. ಹೊಸ ಬೈಕ್ ಬೆಲೆ ಏರಿಕೆಗೆ ಯಾವುದೇ ನೀಡಿಲ್ಲವಾದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ಪಾದನಾ ಪ್ರಕ್ರಿಯೆಯ ವೆಚ್ಚವು ಅಧಿಕವಾಗಿರುವುದೇ ಬೆಲೆ ಏರಿಕೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಬಹುದು.

ಪಲ್ಸರ್ 150 ಬೈಕ್ ಮಾದರಿಯು ಹೊಸ ದರ ಪಟ್ಟಿಯಲ್ಲಿ ರೂ.998ರಿಂದ ರೂ.999 ಬೆಲೆ ಏರಿಕೆ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರ ಪಲ್ಸರ್ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 91,387 ಮತ್ತು ಹೈ ಎಂಡ್ ಆವೃತ್ತಿಯ ಬೆಲೆಯು ರೂ.99,566 ಬೆಲೆ ಪಡೆದುಕೊಂಡಿದೆ.

ಪಲ್ಸರ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಆರಂಭಿಕವಾಗಿ ನಿಯೋನ್ ಮತ್ತು ಹೈ ಎಂಡ್ ಮಾದರಿಯಾಗಿ ಡ್ಯುಯಲ್ ಡಿಸ್ಕ್ ಬ್ರೇಕ್ ಆವೃತ್ತಿಯು ಮಾರಾಟವಾಗುತ್ತಿದೆ.

ಬಿಎಸ್-6 ಎಂಜಿನ್ ಪರಿಚಯಿಸುವಾಗ ಹೊಸ ಬೈಕ್ ಬೆಲೆಯಲ್ಲಿ ರೂ.4 ಸಾವಿರದಿಂದ ರೂ.8 ಸಾವಿರದಷ್ಟು ಹೆಚ್ಚಳ ಮಾಡಿದ್ದ ಬಜಾಜ್ ಕಂಪನಿಯು ಇದೀಗ ರೂ.1 ಸಾವಿರದಷ್ಟ ಹೆಚ್ಚಳ ಮಾಡಿದ್ದು, ಇನ್ನುಳಿದ ಬೈಕ್ ಬೆಲೆಯಲ್ಲೂ ಶೀಘ್ರದಲ್ಲೇ ಹೆಚ್ಚಳ ಮಾಡುವ ಸಿದ್ದತೆಯಲ್ಲಿದೆ.

ಇನ್ನು ಕರೋನಾ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವಾಹನ ಮಾರಾಟಕ್ಕೆ ಚಾಲನೆ ನೀಡಿರುವ ಆಟೋ ಕಂಪನಿಗಳು ವೈರಸ್ ಹರಡದಂತೆ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ.
MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಬಜಾಜ್ ಆಟೋ ಕಂಪನಿಯು ಇದೀಗ ದೇಶದ ವಿವಿಧಡೆ ಹರಡಿಕೊಂಡಿರುವ ಸಾವಿರಾರು ವಾಹನ ಮಾರಾಟ ಕೇಂದ್ರಗಳನ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಟ ಪ್ರಮಾಣದ ಪ್ರೊಟೋಕಾಲ್ ನಿಯಮಗಳನ್ನು ಜಾರಿಗೊಳಿಸಿದೆ.

ಹೊಸ ಸುರಕ್ಷಾ ಮಾರ್ಗಸೂಚಿಗಳಿಂದಾಗಿ ಪ್ರತಿ ಹಂತದಲ್ಲೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಥರ್ಮಾ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಬಳಕೆಯೂ ಕಡ್ಡಾಯವಾಗಿದೆ.
MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಜೊತೆಗೆ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಬೈಕ್ ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ವಾಹನಗಳ ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ಹಸ್ತಾಂತರಿಸುತ್ತಿದೆ.


Click it and Unblock the Notifications