Just In
Don't Miss!
- News
ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾ ಖಾನ್ ವಿಧಿವಶ
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಬಜಾಜ್ ಪಲ್ಸರ್ 150 ನಿಯೊನ್ ಬೈಕ್
ಬಜಾಜ್ ಆಟೋ ಕಂಪನಿಯ ಪಲ್ಸರ್ ಸರಣಿಯ ಬೈಕುಗಳಲ್ಲಿ ಪಲ್ಸರ್ 150 ನಿಯೊನ್ ಕೂಡ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಬಜಾಜ್ ಕಂಪನಿಯು ಈ ಪಲ್ಸರ್ 150 ನಿಯೊನ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗಿತ್ತು.

ಬಜಾಜ್ ಕಂಪನಿಯು ಬಿಎಸ್-6 ಪಲ್ಸರ್ 150 ನಿಯೊನ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ಬಳಿಕ ಎರಡನೇ ಬಾರಿ ಬೆಲೆಯನ್ನು ಹೆಚ್ಚಿಸಿದೆ. ಈ ಹಿಂದೆ ಬಿಎಸ್-6 ಪಲ್ಸರ್ 150 ನಿಯೊನ್ ಬೈಕಿನ ಬೆಲೆಯನ್ನು ರೂ.4,467 ಗಳವರೆಗೆ ಹೆಚ್ಚಿಸಲಾಗಿತ್ತು. ಇದೀಗ ಈ ಬೈಕಿನ ಬೆಲೆಯನ್ನು ರೂ.999 ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ, ಇದೀಗ ಬಿಎಸ್-6 ಪಲ್ಸರ್ 150 ನಿಯೊನ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.91,002 ಗಳಾಗಿದೆ.

ಪಲ್ಸರ್ 150 ನಿಯೊನ್ ಬೈಕಿನಲ್ಲಿ 149.5 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ವಾಲ್ವ್ ಏರ್-ಕೂಲ್ಡ್ ಹೊಂದಿರುವ ಈ ಎಂಜಿನ್ 8,000 ಆರ್‌ಪಿಎಂನಲ್ಲಿ 13.8 ಬಿಹೆಚ್‍ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 13.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಮಾದರಿಯು ಬಜಾಜ್ ಆಟೋದ ಪೇಟೆಂಟ್ ಪಡೆದ ಡಿಟಿಎಸ್-ಐ (ಡಿಜಿಟಲ್ ಟ್ವಿನ್ ಸ್ಪಾರ್ಕ್ ಇಗ್ನಿಷನ್) ತಂತ್ರಜ್ಞಾನವನ್ನು ಹೊಂದಿದ್ದು, ಇದು ಬೈಕ್‌ನ ಕಾರ್ಯಕ್ಷಮತೆ ಮತ್ತು ಇಂಧನ ದಕ್ಷತೆಯನ್ನು ಹೆಚ್ಚಿಸುತ್ತದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಹೊಸ ಬಜಾಜ್ ಪಲ್ಸರ್ 150 ಬೈಕ್‍ನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲಿ ಟ್ವಿನ್ ಶಾಕ್ ಅಬ್ಸಾರ್‍ಬರ್‍ಗಳನ್ನು ಒದಗಿಸಲಾಗಿದ್ದು, ಜೊತೆಗೆ ರೈಡರ್‍ಗಳ ಸುರಕ್ಷತೆಗಾಗಿ ಮುಂಭಾಗದಲ್ಲಿ 240ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 130ಎಂಎಂ ಡ್ರಂ ಬ್ರೇಕ್‍ಗಳನ್ನು ನೀಡಲಾಗಿದೆ.

ಮೊದಲ ಬಾರಿಗೆ ಪಲ್ಸರ್ ಬೈಕ್ 2003ರಲ್ಲಿ ಪ್ರಾರಂಭವಾಯಿತು. ಅಲ್ಲಿಂದ ಕಂಪನಿಯು ಹೊಸ ತಂತ್ರಜ್ಞಾನ ಮತ್ತು ವಿನ್ಯಾಸವನ್ನು ಪಲ್ಸರ್ ಬೈಕ್‌ನಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆ ತರಲಾಗುತ್ತಿದ್ದು, ಇದಕ್ಕಾಗಿ ಈ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಎಸ್-6 ಪಲ್ಸರ್ 150 ನಿಯೊನ್ ಬೈಕಿನ ಸ್ಟೈಲಿಂಗ್ ಬಗ್ಗೆ ನೋಡುವುದಾದರೆ ಕಲರ್ ಕೋ-ಆರ್ಡಿನೇಟೆಡ್ ಹೆಡ್‌ಲ್ಯಾಂಪ್, ಫ್ಯೂಯಲ್ ಲೋಗೊ, ಸೈಡ್ ಪ್ಯಾನಲ್ ಮೆಶ್ ಮತ್ತು ರೇರ್ ಗ್ರಾಬ್ ರೈಲ್ ಅನ್ನು ಹೊಂದಿದೆ.

ಇನ್ನು ಈ ಬೈಕಿನ ಹಿಂಭಾಗದ ಕೌಲ್‌ನಲ್ಲಿನ 3ಡಿ ರೂಪಾಂತರದ ಲೋಗೊ ಮತ್ತು ಅಲಾಯ್ ವ್ಹೀಲ್ ಗಳಲ್ಲಿನ ಬಣ್ಣದ ಡೆಕಾಲ್ ಬೈಕಿಗೆ ಆಕರ್ಷಕ ಲುಕ್ ಅನ್ನು ನೀಡಿದೆ. ಇನ್ನು ಈ ಬಿಎಸ್-6 ಪಲ್ಸರ್ 150 ನಿಯೊನ್ ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು.