ಡ್ಯುಯಲ್ ಚಾನೆಲ್ ಎಬಿಎಸ್ ಹೊಂದಲಿದೆ ಬಿಎಸ್-6 ಬಜಾಜ್ ಪಲ್ಸರ್ ಆರ್‍ಎಸ್200
ಬಜಾಜ್ ಆಟೋ ಕಂಪನಿಯು ತನ್ನ ಬಿಎಸ್-6 ಪಲ್ಸರ್ ಆರ್‍ಎಸ್200 ಬೈಕನ್ನು ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಬಿಎಸ್-6 ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,44,966 ಗಳಾಗಿದೆ.

ಬಜಾಜ್ ಪಲ್ಸರ್ ಸರಣಿಯಲ್ಲಿ ಆರ್‍ಎಸ್200 ಜನಪ್ರಿಯ ಬೈಕುಗಳಲ್ಲಿ ಒಂದಾಗಿದೆ. ಬೈಕ್ ಅಡ್ವೈಸ್ ಪ್ರಕಾರ ಹೊಸ ಬಜಾಜ್ ಆರ್‍ಎಸ್200 ಬೈಕಿಗೆ ಟ್ವಿನ್ ಎಬಿಎಸ್ ಅನ್ನು ಅಳವಡಿಸಲಿದೆ. ಇದನ್ನು ಬಜಾಜ್ ಪಲ್ಸರ್ ಆರ್‍ಎಸ್200 ಟ್ವಿನ್ ಎಬಿಎಸ್ ಎಂದು ಕರೆಯಲಾಗುತ್ತದೆ. ಈ ಮಾದರಿಗೆ ಸಾಮಾನ್ಯ ಸಿಂಗಲ್ ಚಾನೆಲ್ ಎಬಿಎಸ್ ಗಿಂತ ತುಸು ದುಬಾರಿಯಾಗಿರಲಿದೆ. ಆದರೆ ಕಂಪನಿಯ ಅಧಿಕೃತ ವೆಬ್‌ಸೈಟ್ ನಲ್ಲಿ ಇನ್ನು ಸಿಂಗಲ್ ಚಾನೆಲ್ ಎಬಿಎಸ್ ಮಾಹಿತಿ ಮಾತ್ರ ಪ್ರಕಟಿಸಿದೆ.

ಹೊಸ ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನಲ್ಲಿ 199.5 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್, 4-ವಾಲ್ವ್, ಫ್ಯೂಯಲ್-ಇಂಜೆಕ್ಟ್, ಟ್ರಿಪಲ್ ಸ್ಪಾರ್ಕ್, ಡಿಟಿಎಸ್-ಐ ಎಂಜಿನ್ ಅನ್ನು ಹೊಂದಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎಂಜಿನ್ 9,750 ಆರ್‌ಪಿಎಂನಲ್ಲಿ 24.15 ಬಿಹೆಚ್‍ಪಿ ಪವರ್ ಹಾಗೂ 8,000 ಆರ್‌ಪಿಎಂನಲ್ಲಿ 18.7 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಗೇರ್‌ಬಾಕ್ಸ್ ಜೋಡಿಸಲಾಗಿದೆ.

ಹೊಸ ಪಲ್ಸರ್ ಆರ್‍ಎಸ್200 ಬೈಕಿನಲ್ಲಿರುವ ಹಾರ್ಡ್ವೇರ್ ಸ್ಪೆಸಿಫಿಕೇಶನ್‍ಗಳನ್ನು ಬೇರೆ ಕಂಪನಿಯ ಬೈಕುಗಳಿಗೆ ಪೈಪೋಟಿ ನೀಡುವಂತೆ ಅಪ್‍ಗ್ರೇಡ್ ಮಾಡಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಮಾರುಕಟ್ಟೆಯಲ್ಲಿರುವ ಬೈಕಿನಲ್ಲಿರುವ ಹಾರ್ಡ್ವೇರ್ ಸ್ಪೆಸಿಫಿಕೇಶನ್‍ಗಳನ್ನು ಅಪ್‍ಡೇಟ್ ಮಾಡುತ್ತಿರುವ ಬೈಕಿನಲ್ಲಿ ಉಳಿಸಿಕೊಳ್ಳಲಾಗುವುದು. ಈ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

ಡ್ಯುಯಲ್ ಚಾನೆಲ್ ಎಬಿಎಸ್ ಹೊಂದಲಿರುವ ಪಲ್ಸರ್ ಆರ್‍ಎಸ್ 200 ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್‍ಗಳಿವೆ. ಆಂಕರಿಂಗ್ ಪವರ್‍ಗಾಗಿ ಮುಂಭಾಗದಲ್ಲಿ 300 ಎಂಎಂ ಹಾಗೂ ಹಿಂಭಾಗದಲ್ಲಿ 230 ಎಂಎಂ ಪೆಟಲ್ ಟೈಪ್ ಡಿಸ್ಕ್ ಬ್ರೇಕ್‌ಗಳಿವೆ.
MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು

ಬೈಕಿನ ಸ್ಟೈಲಿಂಗ್‍ನಲ್ಲಿ ಹೆಚ್ಚಿನ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ. ಪಲ್ಸರ್ ಆರ್‍ಎಸ್ 200 ಬೈಕಿನಲ್ಲಿ ಎಲ್ಇಡಿ ಡಿಆರ್‍ಎಲ್ ಹೊಂದಿರುವ ಟ್ವಿನ್ ಪಾಡ್ ಪ್ರೊಜೆಕ್ಟರ್‍ಗಳು, ಎಲ್ಇಡಿ ಟೇಲ್‍ಲೈಟ್, ಬ್ಲಿಂಕರ್‍ಗಳು, ಪೂರ್ಣ ಪ್ರಮಾಣದ ಫೇರಿಂಗ್ ಡಿಸೈನ್, ಮಸ್ಕ್ಯುಲರ್ ಶೇಪ್, ಕ್ಲಿಪ್ ಆನ್ ಹ್ಯಾಂಡಲ್ ಬಾರ್ ಹಾಗೂ ಸ್ಪ್ಲಿಟ್ ಸ್ಟೈಲ್ ಸೀಟುಗಳಿವೆ.

ಪಲ್ಸರ್ ಆರ್‍ಎಸ್ 200 ಬೈಕಿನ ಪ್ರತಿಸ್ಪರ್ಧಿ ಬೈಕ್ ಆದ ಯಮಹಾ ವೈಜೆಡ್-ಆರ್ 15 ವಿ 3.0 ಬೈಕಿನಲ್ಲಿ ಈಗಾಗಲೇ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ. ಹೊಸ ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಹೊಂದಿರುವುದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.


Click it and Unblock the Notifications








