ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಬಜಾಜ್ ಆಟೋ ಕಂಪನಿಯು ತನ್ನ ಬಿ‍ಎಸ್-6 ಪಲ್ಸರ್ ಆರ್‍ಎಸ್200 ಬೈಕ್ ಭಾರತದಲ್ಲಿ ಬಿಡುಗಡೆಗೊಳಿಸಿದೆ. ಬಜಾಜ್ ಪಲ್ಸರ್ ಸರಣಿಯಲ್ಲಿ ಆರ್‍ಎಸ್200 ಜನಪ್ರಿಯ ಬೈಕುಗಳಲ್ಲಿ ಒಂದಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಬಿಎಸ್-6 ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,44,966 ಗಳಾಗಿದೆ. ಬಿಎಸ್-4 ಪಲ್ಸರ್ ಆರ್‍ಎಸ್200 ಮಾದರಿಗೆ ಹೋಲಿಸಿದರೆ ರೂ.3,033 ರಷ್ಟು ಹೆಚ್ಚಿಸಿದೆ. ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್‍‍ಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಅಪ್‍‍ಗ್ರೇಡ್ ಮಾಡಲಾಗಿದೆ. ಬಿಎಸ್-6 ಬಜಾಜ್ ಪಲ್ಸರ್ ಆರ್‍ಎಸ್200 ಬೈಕುಗಳು ಡೀಲರ್‍ ಗಳ ಬಳಿ ತಲುಪಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಹೊಸ ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನಲ್ಲಿ 199.5 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್, 4-ವಾಲ್ವ್, ಫ್ಯೂಯಲ್-ಇಂಜೆಕ್ಟ್, ಟ್ರಿಪಲ್ ಸ್ಪಾರ್ಕ್, ಡಿಟಿಎಸ್-ಐ ಎಂಜಿನ್ ಅನ್ನು ಹೊಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಈ ಎಂಜಿನ್ 9,750 ಆರ್‌ಪಿಎಂನಲ್ಲಿ 24.15 ಬಿ‍‍ಹೆಚ್‍‍ಪಿ ಪವರ್ ಹಾಗೂ 8,000 ಆರ್‌ಪಿಎಂನಲ್ಲಿ 18.7 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಪಲ್ಸರ್ ಆರ್‍ಎಸ್ 200 ಬೈಕಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 140.8 ಕಿ.ಮೀಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಹೊಸ ಪಲ್ಸರ್ ಆರ್‍ಎಸ್200 ಬೈಕಿನಲ್ಲಿರುವ ಹಾರ್ಡ್‌ವೇರ್ ಸ್ಪೆಸಿಫಿಕೇಶನ್‍‍ಗಳನ್ನು ಬೇರೆ ಕಂಪನಿಯ ಬೈಕುಗಳಿಗೆ ಪೈಪೋಟಿ ನೀಡುವಂತೆ ಅಪ್‍‍ಗ್ರೇಡ್ ಮಾಡಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಮಾರುಕಟ್ಟೆಯಲ್ಲಿರುವ ಬೈಕಿನಲ್ಲಿರುವ ಹಾರ್ಡ್‍‍ವೇರ್ ಸ್ಪೆಸಿಫಿಕೇಶನ್‍‍ಗಳನ್ನು ಅಪ್‍‍ಡೇಟ್ ಮಾಡುತ್ತಿರುವ ಬೈಕಿನಲ್ಲಿ ಉಳಿಸಿಕೊಳ್ಳಲಾಗುವುದು. ಈ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಡ್ಯುಯಲ್ ಚಾನೆಲ್ ಎ‍‍ಬಿ‍ಎಸ್ ಹೊಂದಲಿರುವ ಪಲ್ಸರ್ ಆರ್‍ಎಸ್ 200 ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್‍‍ಗಳಿವೆ. ಆಂಕರಿಂಗ್ ಪವರ್‍‍ಗಾಗಿ ಮುಂಭಾಗದಲ್ಲಿ 300 ಎಂಎಂ ಹಾಗೂ ಹಿಂಭಾಗದಲ್ಲಿ 230 ಎಂಎಂ ಪೆಟಲ್ ಟೈಪ್‍ ಡಿಸ್ಕ್ ಬ್ರೇಕ್‌ಗಳಿವೆ. ಸುರಕ್ಷತಾ ಫೀಚರ್‍‍ಗಾಗಿ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಬೈಕಿನ ಸ್ಟೈಲಿಂಗ್‍‍ನಲ್ಲಿ ಹೆಚ್ಚಿನ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ. ಪಲ್ಸರ್ ಆರ್‍ಎಸ್ 200 ಬೈಕಿನಲ್ಲಿ ಎಲ್ಇಡಿ ಡಿಆರ್‍ಎಲ್ ಹೊಂದಿರುವ ಟ್ವಿನ್ ಪಾಡ್ ಪ್ರೊಜೆಕ್ಟರ್‍‍ಗಳು, ಎಲ್ಇಡಿ ಟೇಲ್‍‍ಲೈಟ್, ಬ್ಲಿಂಕರ್‍‍ಗಳು, ಪೂರ್ಣ ಪ್ರಮಾಣದ ಫೇರಿಂಗ್ ಡಿಸೈನ್, ಮಸ್ಕ್ಯುಲರ್ ಶೇಪ್, ಕ್ಲಿಪ್ ಆನ್ ಹ್ಯಾಂಡಲ್ ಬಾರ್‍ ಹಾಗೂ ಸ್ಪ್ಲಿಟ್ ಸ್ಟೈಲ್ ಸೀಟುಗಳಿವೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಜಾಜ್ ಪಲ್ಸರ್ ಆರ್‍ಎಸ್200

ಪಲ್ಸರ್ ಆರ್‍ಎಸ್ 200 ಬೈಕಿನ ಪ್ರತಿಸ್ಪರ್ಧಿ ಬೈಕ್ ಆದ ಯಮಹಾ ವೈಜೆಡ್-ಆರ್ 15 ವಿ 3.0 ಬೈಕಿನಲ್ಲಿ ಈಗಾಗಲೇ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ. ಹೊಸ ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಹೊಂದಿರುವುದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

Most Read Articles

Kannada
English summary
Bajaj’s Pulsar RS200 Is Now Officially BS6-compliant. Read in Kannada.
Story first published: Friday, April 3, 2020, 17:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X