ಹೊಸ ಮಾರಾಟ ಮಳಿಗೆಗಳ ನಂತರ ಬೆನೆಲ್ಲಿ ಬೈಕ್‌ಗಳಿಗೆ ಹೆಚ್ಚಿದ ಬೇಡಿಕೆ
ಬೆನೆಲ್ಲಿ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಬೈಕ್ ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದ್ದು, ಹೊಸ ಮಾರಾಟ ಮಳಿಗೆಗಳನ್ನು ವಿಸ್ತರಣಾ ಯೋಜನೆಯಿಂದಾಗಿ ಗ್ರಾಹಕರ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗಿದೆ.

ದೇಶಾದ್ಯಂತ ದಸರಾ ಸಂಭ್ರಮದ ನಂತರ ಇದೀಗ ದೀಪಾವಳಿ ಸಂದರ್ಭದಲ್ಲಿ ಹೊಸ ವಾಹನ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದ್ದು, ಬೆನೆಲ್ಲಿ ಇಂಡಿಯಾ ಕಂಪನಿಯು ಕೂಡಾ ಕಳೆದ ವರ್ಷದ ಬೈಕ್ ಮಾರಾಟಕ್ಕಿಂತಲೂ ಶೇ. 103ರಷ್ಟು ಬೆಳವಣಿಗೆ ಸಾಧಿಸಿದೆ. ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಆವೃತ್ತಿಯು ಬೆನೆಲ್ಲಿ ಬೈಕ್ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಗ್ರಾಹಕರ ಬೇಡಿಕೆಯೆಂತೆ ಬೆನೆಲ್ಲಿ ಕಂಪನಿಯು ವಿವಿಧ ಬೈಕ್ ಮಾದರಿಗಳ ಮಾರಾಟವನ್ನು ಹೊಂದಿದೆ.

ಗ್ರಾಹಕರ ಬೇಡಿಕೆ ಬೇಡಿಕೆಗೆ ಅನುಗುಣವಾಗಿ ಈ ಹಿಂದೆ ಕೆಲವೇ ಕೆಲವು ನಗರಗಳಲ್ಲಿ ಮಾತ್ರವೇ ಮಾರಾಟ ಸೌಲಭ್ಯ ಹೊಂದಿದ್ದ ಬೆನೆಲ್ಲಿ ಕಂಪನಿಯು ಹೊಸ ಉತ್ಪನ್ನಗಳ ಜೊತೆಗೆ ಹೂಡಿಕೆ ಪ್ರಮಾಣವನ್ನು ಹೆಚ್ಚಿಸಿದ್ದು, ಕಳೆದ 1 ವರ್ಷದಲ್ಲಿ 20ಕ್ಕೂ ಹೆಚ್ಚು ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಬೆನೆಲ್ಲಿ ಕಂಪನಿಯು ಸದ್ಯ ಟಿಆರ್‌ಕೆ 502, ಟಿಆರ್‌ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇಂಪೀರಿಯರ್ 400 ಬೈಕ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂಪೀರಿಯಲ್ 400 ನಂತರ ನಂತರ ಮತ್ತಷ್ಟು ಹೊಸ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಪ್ರಿಲ್ 1ರಿಂದ ಜಾರಿಗೆ ಬಂದಿರುವ ಹೊಸ ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಉನ್ನತೀಕರಿಸಿರುವ ಬೆನೆಲ್ಲಿ ಕಂಪನಿಯು ಇಂಪೀರಿಯರ್ 400 ಬೈಕ್ ಮಾದರಿಯ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಆರಂಭಿಕ ಬೆಲೆಯು ಭಾರತದಲ್ಲಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.99 ಲಕ್ಷಗಳಾಗಿದ್ದು, ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಿರುವ ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಯು 374-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 20-ಬಿಎಚ್‌ಪಿ, 29-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಕ್ಲಾಸಿಕ್ ಲುಕ್ ನೀಡುವುದಕ್ಕಾಗಿ ವಿಶೇಷ ವಿನ್ಯಾಸವುಳ್ಳ ಹೆಡ್‌ಲ್ಯಾಂಪ್, ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದ್ದು, ಸುರಕ್ಷತೆಗಾಗಿ ಎಬಿಎಸ್, ಡ್ಯುಯಲ್ ಚಾನೆಲ್ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಈ ಮೂಲಕ ಇಂಪೀರಿಯೆಲ್ 400 ಬೈಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜಾವಾ ಮತ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮಾದರಿಗಳಿಗೆ ನೇರ ಪೈಪೋಟಿಯನ್ನು ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬೈಕ್ ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ.


Click it and Unblock the Notifications








